Tragedy: ಜಾತ್ರೆಯಲ್ಲಿ ನೆರೆದಿದ್ದವರ ಮೇಲೆ ಹರಿದ ಟ್ಯಾಂಕರ್, 3ಮೃತ್ಯು, 20ಕ್ಕೂ ಹೆಚ್ಚು ಗಾಯ
Team Udayavani, Feb 11, 2024, 8:46 AM IST
ಸಿಕ್ಕಿಂ: ವೀಕೆಂಡ್ ನಲ್ಲಿ ನಡೆಯುತ್ತಿದ್ದ ಮೇಳದಲ್ಲಿ ಭಾಗವಹಿಸಿದ್ದ ಜನರ ಮೇಲೆ ಹಾಲಿನ ಟ್ಯಾಂಕರೊಂದು ಹರಿದ ಪರಿಣಾಮ ಮೂವರು ಸ್ಥಳದಲ್ಲೇ ಮೃತಪಟ್ಟು ಸುಮಾರು 20 ಕ್ಕೂ ಹೆಚ್ಚು ಮಂದಿ ಗಂಭೀರ ಗಾಯಗೊಂಡಿರುವ ಘಟನೆ ಸಿಕ್ಕಿಂನ ರಾಣಿಪೂಲ್‌ನಲ್ಲಿ ಸಂಭವಿಸಿದೆ.
ರಾಣಿಪೂಲ್‌ನಲ್ಲಿ ಮೇಳ ನಡೆಯುತಿತ್ತು ಇದರಲ್ಲಿ ನೂರಾರು ಮಂದಿ ಭಾಗವಹಿಸಿದ್ದರು ಈ ವೇಳೆ ವೇಗವಾಗಿ ಬಂದ ಹಾಲಿನ ಟ್ಯಾಂಕರ್ ಎರಡು ಕಾರು ಬೈಕು ಸೇರಿದಂತೆ ಹಲವು ವಾಹನಗಳಿಗೆ ಡಿಕ್ಕಿ ಹೊಡೆದು ನಿಯಂತ್ರಣ ತಪ್ಪಿ ಮೇಳದಲ್ಲಿ ನೆರೆದಿದ್ದ ಜನರ ಮೇಲೆ ಹರಿದಿದೆ ಪರಿಣಾಮ ಮೂವರು ಸ್ಥಳದಲ್ಲೇ ಮೃತಪಟ್ಟರೆ ಇಪ್ಪತ್ತೂ ಜನರಿಗೂ ಅಧಿಕ ಮಂದಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.
ಘಟನೆಯ ಭೀಕರ ದೃಶ್ಯ ಅಲ್ಲಿನ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು ಭಯಾನಕವಾಗಿದೆ, ಡಿಕ್ಕಿಯ ರಭಸಕ್ಕೆ ಕಾರುಗಳು ಜಾತ್ರೆಯಲ್ಲಿ ನೆರೆದಿದ್ದ ಜನರತ್ತ ತಳ್ಳಲ್ಪಟ್ಟು ನಿಯಂತ್ರಣ ತಪ್ಪಿದ ಟ್ಯಾಂಕರ್ ಅಲ್ಲಿದ್ದ ಜನರ ಮೇಲೆ ಹರಿದಿರುವುದು ಕಾಣಬಹುದು.
ಪ್ರಾಥಮಿಕ ತನಿಖೆಯ ಪ್ರಕಾರ ಹಾಲಿನ ಟ್ಯಾಂಕರ್ ಬ್ರೇಕ್ ವಿಫಲವಾಗಿ ಅಪಘಾತ ಸಂಭವಿಸಿದೆ ಎಂದು ಹೇಳಲಾಗಿದ್ದು. ಗಾಯಾಳುಗಳನ್ನು ಸೆಂಟ್ರಲ್ ರೆಫರಲ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎನ್ನಲಾಗಿದೆ.
ಅಪಘಾತದ ವೇಳೆ ಮೇಳದ ಮೈದಾನದಲ್ಲಿ ‘ತಾಂಬೋಲ’ ಆಟ ನಡೆಯುತ್ತಿದ್ದರಿಂದ ಜನರಿಂದ ತುಂಬಿ ತುಳುಕುತ್ತಿತ್ತು ಇದರಿಂದ ಹೆಚ್ಚಿನ ಜನ ಸೇರಿದ್ದರು ಎನ್ನಲಾಗಿದೆ.
ಘಟನೆ ಕುರಿತು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
CCTV footage of Sikkim Milk Union truck accident at Ranipool Mela, Sikkim pic.twitter.com/wStmjBfilp
— Jyoti Mukhia (@jytmkh) February 10, 2024
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Mangaluru: ಕ್ರಿಸ್ಮಸ್ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Harapanahalli: ಪ್ರತಿಷ್ಠೆಯ ಕಣವಾದ ಬಿ90 ಸೊಸೈಟಿ ಚುನಾವಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.