ಗೂಗಲ್ ಮ್ಯಾಪ್ ನಂಬಿ ಸೇತುವೆಯಿಂದ ನದಿಗೆ ಬಿದ್ದ ಕಾರು, ಮದುವೆಗೆ ಹೊರಟಿದ್ದ ಮೂವರು ಮೃತ್ಯು
Team Udayavani, Nov 25, 2024, 9:08 AM IST
ಉತ್ತರಪ್ರದೇಶ: ಮದುವೆ ಕಾರ್ಯಕ್ರಮದಲ್ಲಿ ಭಾಗಿಯಾಗಲು ಗೂಗಲ್ ಮ್ಯಾಪ್ ನಂಬಿ ಹೊರಟ ಕಾರೊಂದು ನಿರ್ಮಾಣ ಹಂತದ ಸೇತುವೆಯ ಮೇಲಿಂದ ನದಿಗೆ ಬಿದ್ದು ಮೂವರು ಮೃತಪಟ್ಟಿರುವ ಘಟನೆ ಶನಿವಾರ ರಾತ್ರಿ ಸಂಭವಿಸಿದ್ದು ಭಾನುವಾರ ಬೆಳಿಗ್ಗೆ ವಿಚಾರ ಬೆಳಕಿಗೆ ಬಂದಿದೆ.
ಘಟನೆಯಲ್ಲಿ ಮೃತಪಟ್ಟವರನ್ನು ವಿವೇಕ್ ಮತ್ತು ಅಮಿತ್ ಎನ್ನಲಾಗಿದ್ದು ಇನ್ನೋರ್ವನ ಗುರುತು ಇನ್ನಷ್ಟೇ ಪತ್ತೆಯಾಗಬೇಕಿದೆ.
ಏನಿದು ಪ್ರಕರಣ:
ವಿವೇಕ್ ಹಾಗೂ ಅಮಿತ್ ಮದುವೆ ಸಮಾರಂಭವೊಂದರಲ್ಲಿ ಭಾಗಿಯಾಗಲು ಶನಿವಾರ ಬಾಡಿಗೆ ಕಾರೊಂದನ್ನು ಗೊತ್ತುಪಡಿಸಿ ಗುರುಗ್ರಾಮದಿಂದ ಉತ್ತರಪ್ರದೇಶದ ಬರೇಲಿಗೆ ಹೊರಟಿದ್ದರು ಈ ವೇಳೆ ಮಾರ್ಗ ಸರಿಯಾಗಿ ಗೊತ್ತಿರದ ಕಾರಣ ಚಾಲಕ ಗೂಗಲ್ ಮ್ಯಾಪ್ ಮೊರೆ ಹೋಗಿದ್ದು ಅದರಂತೆ ಬರೇಲಿ ಸಮೀಪದ ನಿರ್ಮಾಣ ಹಂತದ ಸೇತುವೆಯ ದಾರಿ ತೋರಿಸಿದೆ ಅದರಂತೆ ಕಾರು ಚಾಲಕ ಅದೇ ಮಾರ್ಗವನ್ನು ಅನುಸರಿಸಿಕೊಂಡು ಹೋಗಿದ್ದಾನೆ ಆದರೆ ಸೇತುವೆ ಅಪೂರ್ಣಗೊಂಡಿದ್ದರಿಂದ ಚಾಲಕನ ನಿಯಂತ್ರಣ ತಪ್ಪಿದ ಕಾರು ಸುಮಾರು ಐವತ್ತು ಅಡಿ ಆಳದ ರಾಮಗಂಗಾ ನದಿಗೆ ಬಿದ್ದಿದೆ ಅಷ್ಟೋತ್ತಿಗಾಗಲೇ ರಾತ್ರಿಯಾಗಿದ್ದ ಕಾರಣ ವಿಚಾರ ಯಾರಿಗೂ ಗೊತ್ತಾಗಿಲ್ಲ ಮರುದಿನ ಭಾನುವಾರ ಬೆಳಿಗ್ಗೆ ಅಲ್ಲಿನ ಸ್ಥಳೀಯರು ನದಿಗೆ ಬಿದ್ದಿರುವ ಕಾರೊಂದನ್ನು ಗಮನಿಸಿದ್ದಾರೆ ಬಳಿಕ ಕಾರಿನ ಬಳಿ ತೆರಳಿದ್ದಾರೆ ಈ ವೇಳೆ ಕಾರಿನಲ್ಲಿ ಮೂವರು ಮೃತಪಟ್ಟಿರುವುದು ಗಮನಕ್ಕೆ ಬಂದಿದೆ ಕೂಡಲೇ ಪೊಲೀಸರಿಗೆ ಮಾಹಿತಿಯನ್ನು ನೀಡಿದ್ದಾರೆ ವಿಚಾರ ತಿಳಿದು ಸ್ಥಳಕ್ಕೆ ಆಗಮಿಸಿದ ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ಸಾಗಿಸಿದ್ದಾರೆ.
ಈ ನಡುವೆ ಅಮಿತ್ ಹಾಗೂ ವಿವೇಕ್ ಕುಟುಂಬ ಸದಸ್ಯರು ಘಟನಾ ಸ್ಥಳಕ್ಕೆ ಧಾವಿಸಿ ಸೇತುವೆ ನಿರ್ಮಾಣ ಅಧಿಕಾರಿಯ ವಿರುದ್ಧ ಕಿಡಿಕಾರಿದ್ದಾರೆ, ಸೇತುವೆಗೆ ಬ್ಯಾರಿಕೇಡ್ ಇಡದೆ ಈ ದುರಂತ ಸಂಭವಿಸಿದೆ ಎಂದು ಅಧಿಕಾರಿಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ, ಸದ್ಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಇದನ್ನೂ ಓದಿ: JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Goa: ಕ್ಯಾಲಂಗುಟ್ ಬೀಚ್‌ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾ*ವು, 20 ಮಂದಿ ರಕ್ಷಣೆ
Uttar Pradesh: 6 ಪುರುಷರ ವರಿಸಿ ವಂಚಿಸಿದ ಯುವತಿಯ ಗ್ಯಾಂಗ್ ಜೈಲಿಗೆ
Road Project: ಶಿರಾಡಿ ಘಾಟ್ ಸುರಂಗ ಯೋಜನೆಗೆ ಡಿಪಿಆರ್ ರಚಿಸಿ: ಕೇಂದ್ರ ಸೂಚನೆ
Hosur ವಿಮಾನ ನಿಲ್ದಾಣಕ್ಕೆ 2 ಸ್ಥಳ ನಿಗದಿಪಡಿಸಿದ ತಮಿಳುನಾಡು
GST: ಖರೀದಿ, ಮಾರಾಟ ದರದ ವ್ಯತ್ಯಾಸಕ್ಕಷ್ಟೇ 18% ಜಿಎಸ್‌ಟಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.