ಒಡಿಶಾ ಪೊಲೀಸರ ಕಾರ್ಯಾಚರಣೆ: ಮೂವರು ನಕ್ಸಲರ ಎನ್‌ಕೌಂಟರ್!
Team Udayavani, May 9, 2023, 7:51 PM IST
ಭುವನೇಶ್ವರ: ಒಡಿಶಾದ ಕಾಲಹಂಡಿ ಜಿಲ್ಲೆಯಲ್ಲಿ ಮಂಗಳವಾರ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ಮೂವರು ಮಾವೋವಾದಿ (ನಕ್ಸಲರನ್ನು)ಗಳನ್ನು ಹೊಡೆದುರುಳಿಸಲಾಗಿದೆ.
ಈ ವೇಳೆ ಓರ್ವ ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದಾರೆಂದು ಅಧಿಕಾರಿಗಳು ತಿಳಿಸಿದ್ದಾರೆ. ತಪರೆಂಗ್-ಲುಡೆನ್‌ಗಢ ಅರಣ್ಯ ಪ್ರದೇಶದಲ್ಲಿ ನಕ್ಸಲರು ಅಡಗಿರುವ ಸುಳಿವಿನ ಮೇರೆಗೆ ಮಂಗಳವಾರ ಮುಂಜಾವಿನಿಂದಲೇ ಕಾರ್ಯಾಚರಣೆ ಆರಂಭಿಸಲಾಗಿತ್ತು. ಈ ವೇಳೆ ಪೊಲೀಸರು ಹಾಗೂ ನಕ್ಸಲರ ಮುಖಾಮುಖೀಯಲ್ಲಿ ಓರ್ವ ಸಿಬ್ಬಂದಿಗೆ ಗುಂಡೇಟು ತಗುಲಿದೆ.
ಪ್ರದೇಶದಲ್ಲಿ ಕಾರ್ಯಾಚರಣೆ ಮುಂದುವರಿದಿದ್ದು, ಹತ ನಕ್ಸಲರಿಂದ ಎಕೆ-47 ರೈಫಲ್ ಒಂದನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.
ಇದನ್ನೂ ಓದಿ: ಸೋಲಿಗರ ಭಾವ ಎಂದೇ ಕರೆಯುವ ಬಿಳಿಗಿರಿ ರಂಗಪ್ಪ | Soliga | ಬಿಳಿಗಿರಿರಂಗನ ಬೆಟ್ಟ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Politics; ಮತಕ್ಕಾಗಿ ಮುಸ್ಲಿಮರನ್ನು ಒಡೆವ ಕೆಲಸ ಕಾಂಗ್ರೆಸ್ ಮಾಡುತ್ತಿದೆ: ಬಿಜೆಪಿ
Maha Election; ಚು.ಆಯೋಗದಿಂದ ಉದ್ಧವ್ ಠಾಕ್ರೆ ಬ್ಯಾಗ್ ಪರಿಶೀಲನೆ, ವಿವಾದ
Manipura: ಇಬ್ಬರು ಶವ ಪತ್ತೆ, ಮಕ್ಕಳು ಸೇರಿ 6 ಮಂದೆ ಕಾಣೆ
ದಾವೂದ್, ನಟ ಸಲ್ಮಾನ್ ಸಂಪರ್ಕ ಇದ್ದಿದ್ದಕ್ಕೆ ಸಿದ್ಧಿಕಿ ಹತ್ಯೆ: ಶೂಟರ್
Ranchi: ವಕ್ಫ್ ಮಂಡಳಿಯು ಕರ್ನಾಟಕದಲ್ಲಿ ದೇಗುಲ, ರೈತರ ಭೂಮಿಯ ಕಸಿದಿದೆ: ಅಮಿತ್ ಶಾ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.