Uttar Pradesh: ಕಾಲುವೆಗೆ ಕಾರು ಬಿದ್ದು ಮೂವರು ಮೃತ್ಯು, 3 ಮಂದಿ ನಾಪತ್ತೆ
Team Udayavani, Mar 4, 2024, 8:55 AM IST
ಲಕ್ನೋ: ಕಾರೊಂದು ಕಾಲುವೆ ಬಿದ್ದು ಮೂವರು ಮೃತಪಟ್ಟು, ಮೂವರು ನಾಪತ್ತೆ ಆಗಿರುವ ಘಟನೆ ಉತ್ತರ ಪ್ರದೇಶದ ಬುಲಂದ್‌ಶಹರ್‌ನಲ್ಲಿ ಭಾನುವಾರ (ಮಾ.3 ರಂದು) ರಾತ್ರಿ ನಡೆದಿರುವುದು ವರದಿಯಾಗಿದೆ.
ಜಹಾಂಗೀರ್‌ಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿಈ ಘಟನೆ ನಡೆದಿದೆ. ಮದುವೆ ಸಮಾರಂಭವೊಂದರಲ್ಲಿ ಪಾಲ್ಗೊಳ್ಳಲು ಅಲಿಗಢ್ ಪಿಸಾವಾಗೆ ತೆರಳುತ್ತಿದ್ದ ಇಕೋ ಕಾರಿನೊಳಗೆ ಒಟ್ಟು ಎಂಟು ಮಂದಿ ಇದ್ದರು. ವಾಹನ ಪಲ್ಟಿಯಾದ ಪರಿಣಾಮ ಕಾಲುವೆಗೆ ಬಿದ್ದಿದೆ ಎಂದು ವರದಿ ತಿಳಿಸಿದೆ.
ಘಟನೆಯಲ್ಲಿ ಐದು ಜನರನ್ನು ಕಾಲುವೆಯಿಂದ ರಕ್ಷಿಸಲಾಗಿದೆ. ಇದರಲ್ಲಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ವರದಿ ತಿಳಿಸಿದೆ.
ಮೃತರು 18 ರಿಂದ 22 ವರ್ಷದೊಳಗಿನವರಾಗಿದ್ದು. ನಾಪತ್ತೆ ಆದವರಲ್ಲಿ ಐದು ವರ್ಷದ ಮಗು ಮತ್ತು ಇಬ್ಬರು ಪುರುಷರು ಸೇರಿದ್ದಾರೆ. ಸದ್ಯ ಇಬ್ಬರು ಗಾಯಾಳುಗಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅವರ ಸ್ಥಿತಿ ಚಿಂತಾಜನಕವಾಗಿದೆ ಎಂದು ವರದಿ ತಿಳಿಸಿದೆ.
“ಕಾರು ಜಹಾಂಗೀರ್‌ಪುರ ಪೊಲೀಸ್ ಠಾಣೆಯ ಕಪ್ನಾ ಕಾಲುವೆಗೆ ಬಿದ್ದಿದೆ. ನಾಪತ್ತೆಯಾದ ಮೂವರಿಗಾಗಿ ಇನ್ನೂ ರಕ್ಷಣೆ ಮುಂದುವರೆದಿದೆ. ಎನ್‌ಡಿಆರ್‌ಎಫ್ ತಂಡ ಸೇರಿದಂತೆ ಎಲ್ಲಾ ಪೊಲೀಸ್ ಮತ್ತು ಆಡಳಿತ ಅಧಿಕಾರಿಗಳು ಸ್ಥಳದಲ್ಲಿದ್ದಾರೆ” ಎಂದು ಬುಲಂದ್‌ಶಹರ್ ಎಸ್‌ಎಸ್‌ಪಿ ಶ್ಲೋಕ್ ಕುಮಾರ್ ಹೇಳಿದ್ದಾರೆ.
ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು, ಸಂತ್ರಸ್ತರ ಕುಟುಂಬಗಳಿಗೆ 4 ಲಕ್ಷ ರೂಪಾಯಿ ಆರ್ಥಿಕ ನೆರವು ಘೋಷಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gujarat: ಹಿರಿಯ ವಿದ್ಯಾರ್ಥಿಗಳ Ragging-ಪ್ರಥಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿ ಸಾ*ವು
Army Wepon: ಭಾರತದ ಬತ್ತಳಿಕೆಗೆ ದೇಸಿ ಹೈಪರ್‌ಸಾನಿಕ್ ಅಸ್ತ್ರ !
Mobs Storm: ಮಣಿಪುರದಲ್ಲಿ ಭುಗಿಲೆದ್ದ ಹಿಂಸಾಚಾರ!, ಮೈತೇಯಿ ಸಮುದಾಯದಿಂದ ಭಾರೀ ಪ್ರತಿಭಟನೆ
Maharashtra: ಮತಗಟ್ಟೆ ಬಳಿ ಚಪ್ಪಲಿ ನಿಷೇಧಿಸಿ ಎಂದು ಮಹಾಪಕ್ಷೇತರ ಅಭ್ಯರ್ಥಿ ಮನವಿ!
ಮನುಷ್ಯ ನೀನು ದಂಡ, ಸತ್ತು ಹೋಗು!: ಎಐ ಚಾಟ್‌ಬಾಟ್ ಹೇಳಿಕೆ
MUST WATCH
ಹೊಸ ಸೇರ್ಪಡೆ
IPL Mega Auction: ಮೆಗಾ ಹರಾಜಿನಲ್ಲಿ 13ರ ಬಾಲಕ: ಯಾರಿದು ವೈಭವ್ ಸೂರ್ಯವಂಶಿ
Mangaluru: ಹೆದ್ದಾರಿ ಬದಿ ನಿಲ್ಲುವ ವಾಹನ; ಅಪಾಯಕ್ಕೆ ಆಹ್ವಾನ
Gujarat: ಹಿರಿಯ ವಿದ್ಯಾರ್ಥಿಗಳ Ragging-ಪ್ರಥಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿ ಸಾ*ವು
Puttur: ಕಲ್ಪವೃಕ್ಷಕ್ಕೆ ಮರುಜೀವವಿತ್ತ ಎಂಜಿನಿಯರ್
Hukkeri: ಮೀನು ಹಿಡಿಯಲು ಹೋಗಿದ್ದ ತಂದೆ, ಇಬ್ಬರು ಮಕ್ಕಳು ನೀರುಪಾಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.