DA: ಕೇಂದ್ರ ಸರಕಾರಿ ನೌಕರರ ತುಟ್ಟಿಭತ್ತೆ ಶೇ.3 ಹೆಚ್ಚಳ: ಈಗ ಶೇ.53ಕ್ಕೇ ಏರಿಕೆ
Team Udayavani, Oct 17, 2024, 7:00 AM IST
ಹೊಸದಿಲ್ಲಿ: ದೀಪಾವಳಿ ಹಬ್ಬದ ಕೊಡುಗೆಯೆಂಬಂತೆ ಕೇಂದ್ರ ಸರಕಾರವು ತನ್ನ ನೌಕರರು ಮತ್ತು ಪಿಂಚಣಿದಾರರಿಗೆ ಸಿಹಿ ಸುದ್ದಿ ನೀಡಿದೆ.
ನೌಕರರ ತುಟ್ಟಿ ಭತ್ತೆಯನ್ನು ಶೇ.3ರಷ್ಟು ಹೆಚ್ಚಳ ಮಾಡಲು ಬುಧವಾರ ಪ್ರಧಾನಿ ಮೋದಿ ನೇತೃತ್ವದಲ್ಲಿ ನಡೆದ ಕೇಂದ್ರ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ.
ಇದರಿಂದ ಸುಮಾರು 1.15 ಕೋಟಿ ಕೇಂದ್ರ ಸರಕಾರಿ ನೌಕರರು ಹಾಗೂ ಪಿಂಚಣಿದಾರರಿಗೆ ಅನುಕೂಲವಾಗಲಿದೆ. ಪ್ರಸಕ್ತ ವರ್ಷದ ಜುಲೈ 1ರಿಂದಲೇ ಇದು ಪೂರ್ವಾನ್ವಯವಾಗಲಿದ್ದು, ಹಿಂದಿನ 3 ತಿಂಗಳ ಬಾಕಿ ಮೊತ್ತವು ನೌಕರರಿಗೆ ಲಭಿಸಲಿದೆ. ಈ ನಿರ್ಧಾರದಿಂದ ಪ್ರಸ್ತುತ ಶೇ.50 ಇದ್ದ ತುಟ್ಟಿ ಭತ್ತೆ ಶೇ.53ಕ್ಕೆ ಏರಿಕೆಯಾಗಲಿದೆ. 7ನೇ ಕೇಂದ್ರ ವೇತನ ಆಯೋಗದ ಶಿಫಾರಸುಗಳನ್ನು ಆಧರಿಸಿ ಈ ಹೆಚ್ಚಳವನ್ನು ಮಾಡಲಾಗಿದೆ ಎಂದು ಕೇಂದ್ರ ಸರಕಾರ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕನಸಲ್ಲೂ ಅಂಬೇಡ್ಕರ್ರನ್ನು ಅವಮಾನಿಸಿಲ್ಲ: ಅಮಿತ್
Hydarabad: ಪುಷ್ಪ-2 ಚಿತ್ರದ ಪ್ರದರ್ಶನ ವೇಳೆ ಗಾಯಗೊಂಡಿದ್ದ ಬಾಲಕನ ಸ್ಥಿತಿ ಗಂಭೀರ
ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್
Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ
Mumbai: ಗೇಟ್ವೇ ಆಫ್ ಇಂಡಿಯಾ ಬಳಿ ಮುಳುಗಿದ 67 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.