Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ
Team Udayavani, Jul 27, 2024, 8:51 AM IST
ಮುಂಬಯಿ: ಶನಿವಾರ ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡವೊಂದು ಕುಸಿದು ಬಿದ್ದಿರುವ ಘಟನೆ ನವಿ ಮುಂಬೈನ ಶಹಬಾಜ್ ಗ್ರಾಮದಲ್ಲಿ ನಡೆದಿದೆ.
ಕಟ್ಟಡ ಕುಸಿದ ಪರಿಣಾಮ ಹಲವರು ಕಟ್ಟಡದ ಅವಶೇಷಗಳಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದ್ದು ಘಟನಾ ಸ್ಥಳದಲ್ಲಿ ಪೊಲೀಸ್, ಅಗ್ನಿಶಾಮಕ ದಳ ಮತ್ತು ಎನ್‌ಡಿಆರ್‌ಎಫ್ ತಂಡಗಳು ಕಾರ್ಯಾಚರಣೆ ನಡೆಸುತ್ತಿದೆ.
ಮಾಹಿತಿ ಪ್ರಕಾರ ಈ ಕಟ್ಟಡದಲ್ಲಿ ಸುಮಾರು 24 ಕುಟುಂಬಗಳು ವಾಸವಾಗಿದ್ದವು ಎಂದು ಹೇಳಲಾಗುತ್ತಿದೆ.
ಈ ಕುರಿತು ಮಾಹಿತಿ ನೀಡಿದ ನವಿ ಮುಂಬೈ ಮಹಾನಗರ ಪಾಲಿಕೆಯ ಆಯುಕ್ತ ಕೈಲಾಶ್ ಶಿಂಧೆ “ಇಂದು ಬೆಳಿಗ್ಗೆ ಬೆಳಿಗ್ಗೆ 5 ಗಂಟೆ ಸುಮಾರಿಗೆ ಕಟ್ಟಡ ಕುಸಿದಿದೆ. ಇದು ಮೂರೂ ಅಂತಸ್ತಿನ ಕಟ್ಟಡವಾಗಿದ್ದು ಇಬ್ಬರನ್ನು ರಕ್ಷಿಸಲಾಗಿದೆ ಮತ್ತು ಇನ್ನು ಹಲವರು ಸಿಲುಕಿರುವ ಶಂಕೆ ಇದೆ. ಎನ್‌ಡಿಆರ್‌ಎಫ್ ತಂಡ ಸ್ಥಳದಲ್ಲಿದ್ದು ರಕ್ಷಣಾ ಕಾರ್ಯಚರಣೆ ನಡೆಯುತ್ತಿದೆ ಎಂದು ಹೇಳಿದ್ದಾರೆ.
ಕಳೆದ ಕೆಲ ದಿನಗಳಿಂದ ಮಹಾರಾಷ್ಟ್ರದ ಕೆಲ ಭಾಗಗಳಲ್ಲಿ ನಿರಂತರ ಮಳೆಯಾಗುತ್ತಿದ್ದು ಈ ನಡುವೆ ಶಹಬಾಜ್ ಗ್ರಾಮದಲ್ಲಿ ಈ ಘಟನೆ ನಡೆದಿರುವುದು ಸ್ಥಳೀಯರಲ್ಲಿ ಆತಂಕ ಮನೆಮಾಡಿದೆ.
ಕಟ್ಟಡ ತುಂಬಾ ಹಳೆಯದಾಗಿದ್ದು, ಇತ್ತೀಚೆಗೆ ಹಲವು ಬಾರಿ ಬಿರುಕು ಕಾಣಿಸಿಕೊಂಡಿದೆ, ಈ ಘಟನೆಯಿಂದ ಸ್ಥಳೀಯ ಜನರಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ ಎಂದು ಸ್ಥಳೀಯರು ಹೇಳಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
By Poll: ರಣರಂಗವೂ ಇಲ್ಲ, ಚದುರಂಗವೂ ಇಲ್ಲ, ಜನರೇ ಪಟ್ಟಿ ಮಾಡಿ, ಅಂಕ ನೀಡ್ತಾರೆ: ಡಿಕೆಶಿ
Janapada Academy: ಚಿನ್ನಪ್ಪ ಗೌಡಗೆ ಜೀಶಂಪ, ಬೇವಿನಕಟ್ಟಿಗೆ ಗದ್ದಗಿಮಠ ತಜ್ಞ ಪ್ರಶಸ್ತಿ
Order: ಶಿರೂರು ಗುಡ್ಡ ಕುಸಿತ: 2 ತಿಂಗಳೊಳಗೆ 5 ಲ.ರೂ. ಪರಿಹಾರಕ್ಕೆ ಹೈಕೋರ್ಟ್ ಸೂಚನೆ
Power cut shock:ಅದಾನಿ ಕಂಪೆನಿಗೆ ಬಾಂಗ್ಲಾ ಪಾವತಿ ಶುರು
WhatsApp ನಲ್ಲಿ ಧರ್ಮ ಆಧರಿತ ಗುಂಪು: ಕೇರಳ ಐಎಎಸ್ ಅಧಿಕಾರಿ ದೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.