Jammu & Kashmir: ಸೇನಾ ವಾಹನದ ಮೇಲೆ ದಾಳಿ ನಡೆಸಿದ ಮೂವರು ಉಗ್ರರ ಹ*ತ್ಯೆ
Team Udayavani, Oct 28, 2024, 6:57 PM IST
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಅಖ್ನೂರ್ ಸೆಕ್ಟರ್‌ನಲ್ಲಿ ಸೋಮವಾರ(ಅ28) ಸೇನಾ ವಾಹನದ ಮೇಲೆ ಗುಂಡಿನ ದಾಳಿ ನಡೆಸಿದ ನಂತರ ಕನಿಷ್ಠ ಮೂವರು ಉಗ್ರರು ಗುಂಡಿನ ಚಕಮಕಿಯಲ್ಲಿ ಹತರಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ. ಭದ್ರತಾ ಪಡೆಗಳು ಈ ಪ್ರದೇಶದಿಂದ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಂಡಿಸಿದ್ದು ಕಾರ್ಯಾಚರಣೆ ಮುಂದುವರೆದಿದೆ. ಘಟನೆಯ ಅಧಿಕೃತ ದೃಢೀಕರಣಕ್ಕಾಗಿ ಕಾಯಲಾಗುತ್ತಿದೆ.
ಬಟಾಲ್ ಪ್ರದೇಶದಲ್ಲಿ ಬೆಳಗ್ಗೆ 7 ಗಂಟೆ ಸುಮಾರಿಗೆ ಮೂವರು ಉಗ್ರರು ಸೇನಾ ವಾಹನದ ಮೇಲೆ ಹಲವು ಸುತ್ತು ಗುಂಡು ಹಾರಿಸಿದ್ದರು. ಮೂಲಗಳ ಪ್ರಕಾರ ಭದ್ರತಾ ಪಡೆಗಳು ತತ್ ಕ್ಷಣವೇ ಪ್ರದೇಶವನ್ನು ಸುತ್ತುವರಿದು ಕಾರ್ಯಾಚರಣೆ ಪ್ರಾರಂಭಿಸಿದ್ದವು.
ದೀಪಾವಳಿ ಹಬ್ಬದ ತಯಾರಿಗಾಗಿ ಜಮ್ಮು ಪ್ರದೇಶದಲ್ಲಿ ಭದ್ರತಾ ಕ್ರಮಗಳನ್ನು ಜಾರಿಗೆ ತಂದಿದ್ದ ವೇಳೆ ಈ ಘಟನೆ ನಡೆದಿದೆ.ಭದ್ರತಾ ಪಡೆಗಳು ಎಲ್ಲೆಡೆ ವ್ಯಾಪಕ ಕಟ್ಟೆಚ್ಚರ ವಹಿಸಿವೆ.
ಕಳೆದ ವಾರದಲ್ಲಿ ಜಮ್ಮು ಮತ್ತು ಕಾಶ್ಮೀರದಾದ್ಯಂತ, ವಿಶೇಷವಾಗಿ ಕಣಿವೆಯಲ್ಲಿ ನಡೆದ ಅನೇಕ ಗುಂಡಿನ ಚಕಮಕಿಗಳಲ್ಲಿ ಇಬ್ಬರು ಸೈನಿಕರು ಸೇರಿದಂತೆ ಕನಿಷ್ಠ 12 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Cyclone Fengal: ತಿರುವಣ್ಣಾಮಲೈಯಲ್ಲಿ ಭೂ ಕುಸಿತ: 7 ಮಂದಿ ಪೈಕಿ ನಾಲ್ವರ ಮೃತದೇಹ ಪತ್ತೆ
Nagpura: ರಾಜಕೀಯ ಎಂದರೆ ಅತೃಪ್ತ ಆತ್ಮಗಳ ಸಮುದ್ರ: ಕೇಂದ್ರ ಸಚಿವ ನಿತಿನ್ ಗಡ್ಕರಿ
Dal Lake: ಶ್ರೀನಗರದಲ್ಲಿ ಏಷ್ಯಾದ ಮೊದಲ ಜಲ ಸಾರಿಗೆ ʼಉಬರ್ ಶಿಕಾರಾʼ ಆರಂಭ
Alappuzha: ಬಸ್ ಗೆ ಡಿಕ್ಕಿ ಹೊಡೆದ ಕಾರು; ಐವರು ವೈದ್ಯಕೀಯ ವಿದ್ಯಾರ್ಥಿಗಳ ಸಾ*ವು
New District: “ಮಹಾ ಕುಂಭಮೇಳ’ ಈಗ ಉತ್ತರಪ್ರದೇಶದ ಹೊಸ ಜಿಲ್ಲೆ!
MUST WATCH
ಭಾರತ-ಆಸ್ಟ್ರೇಲಿಯಾ 2ನೇ ಟೆಸ್ಟ್‌ಗಾಗಿ ಅಡಿಲೇಡ್‌ಗೆ ಆಗಮಿಸಿದ ಟೀಮ್ ಇಂಡಿಯಾ
60 ಅಡಿ ಆಳದ ಬಾವಿಗೆ ಬಿದ್ದ 94 ವರ್ಷದ ಅಜ್ಜಿಯ ರಕ್ಷಣೆ
ಶ್ರೀ ಕೃಷ್ಣನ ಸೇವೆಗೆ ಬದುಕನ್ನೇ ಮುಡಿಪಾಗಿಟ್ಟ ಪ್ರಭಾಕರ ಉಳ್ಳೂರು
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.