ಉತ್ತರ ಪ್ರದೇಶ: 30 ಮಕ್ಕಳ ಸಾವು ಕಾರಣ ನಿಗೂಢ
Team Udayavani, Aug 12, 2017, 6:00 AM IST
ಗೋರಖ್ಪುರ: ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ರ ಸ್ವಕ್ಷೇತ್ರ ಗೋರಖ್ಪುರದಲ್ಲಿರುವ ಹಾಗೂ ರಾಜ್ಯ ಸರ್ಕಾರಿ ಸ್ವಾಮ್ಯದ ಬಾಬಾ ರಾಘವ್ ದಾಸ್ ವೈದ್ಯಕೀಯ ಕಾಲೇಜಿನಲ್ಲಿ ಕಳೆದ 48 ಗಂಟೆಗಳ ಅವಧಿಯಲ್ಲಿ 30 ಮಕ್ಕಳು ಸಾವಿಗೀಡಾಗಿದ್ದಾರೆ. ಇಷ್ಟೊಂದು ದೊಡ್ಡ ಪ್ರಮಾಣದಲ್ಲಿ ಸಾವುಗಳು ಸಂಭವಿಸಲು ಕಾರಣವೇನು ಎಂದು ಸರ್ಕಾರವಾಗಲಿ, ಸ್ಥಳೀಯ ಆಡಳಿತವಾಗಲಿ ಅಥವಾವೈದ್ಯರಾಗಲಿ ಸ್ಪಷ್ಟ ಮಾಹಿತಿ ನೀಡಿಲ್ಲ.
“ಆಮ್ಲಜನಕ ಸರಬರಾಜು ಮಾಡುವವರಿಗೆ ಹಣ ಪಾವತಿಸದ ಕಾರಣ ಅವರು ಆಮ್ಲಜನಕ ಪೂರೈಕೆ ಸ್ಥಗಿತಗೊಳಿಸಿದ್ದಾರೆ. ಹೀಗಾಗಿ ಆಮ್ಲಜನಕದ ಕೊರತೆಯಿಂದ ಮಕ್ಕಳು ಮೃತಪಟ್ಟಿದ್ದಾರೆ ಎಂದು ಆರಂಭದಲ್ಲಿ ಹೇಳಲಾಗಿತ್ತು. ಆದರೆ ಮಕ್ಕಳಿಗೆ ಆಮ್ಲಜನಕ ನೀಡಲು ಕಾರಣವೇನು? ಆಮ್ಲಜನಕದ ಕೊರತೆ ಏಕಾಯಿತು? ಎಂಬ ಪ್ರಶ್ನೆಗಳು ಉದ್ಭವಿಸುತ್ತಲೇ ವರಸೆ ಬದಲಿಸಿರುವ ಅಲ್ಲಿನ ಜಿಲ್ಲಾಧಿಕಾರಿ, “ಮಕ್ಕಳ ಸಾವಿಗೆ ಆಮ್ಲಜನಕದ ಕೊರತೆ ಕಾರಣವಲ್ಲ. ಸಾವಿಗೆ ಬೇರೆಯದೇ ವೈದ್ಯಕೀಯ ಕಾರಣವಿದೆ’ಎನ್ನುವ ಮೂಲಕ ಅನುಮಾನಗಳಿಗೆ ಎಡೆಮಾಡಿಕೊಟ್ಟಿದ್ದಾರೆ.
ಈ ನಡುವೆ ಮಕ್ಕಳ ಸಾವಿಗೆ ನಿಖರ ಕಾರಣ ತಿಳಿಯಲು ತನಿಖಾ ಸಮಿತಿ ರಚಿಸಿರುವ ಉತ್ತರಪ್ರದೇಶ ಸರ್ಕಾರ, ಶನಿವಾರ ಸಂಜೆಯೊಳಗೆ ವರದಿ ನೀಡುವಂತೆ ಸಮಿತಿಗೆ ಸೂಚಿಸಿದೆ. ಘಟನೆ ಕುರಿತು ಪ್ರತಿಕ್ರಿಯಿಸಿರುವ ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಅಖೀಲೇಶ್ ಯಾದವ್, ಘಟನೆಗೆ ಸರ್ಕಾರವೇ ನೇರಹೊಣೆ ಎಂದು ಆರೋಪಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra ಮತದಾನ ಮುಗಿದ ನಂತರ 7% ಹೆಚ್ಚಳ : ECI ಸ್ಪಷ್ಟಪಡಿಸಬೇಕು ಎಂದ ಕಾಂಗ್ರೆಸ್
Mumbai: ಆತ್ಮಹತ್ಯೆಗೂ 15 ನಿಮಿಷದ ಮೊದಲು ತಾಯಿಗೆ ಕರೆ ಮಾಡಿ ಖುಷಿಯಲ್ಲೇ ಮಾತನಾಡಿದ್ದ ಪೈಲೆಟ್
Ajmer dargah ಶಿವ ದೇವಾಲಯ?; ಕೋಮು ಸೌಹಾರ್ದತೆಗೆ ಭಂಗ ತರುವ ಕುತಂತ್ರ: ಖಾದಿಮರ ಮನವಿ
Jharkhand; ಸಿಎಂ ಆಗಿ ಹೇಮಂತ್ ಸೊರೇನ್ ಪ್ರಮಾಣ ವಚನ ಸ್ವೀಕಾರ
Delhi: ಒಂದು ತಿಂಗಳ ಅಂತರದಲ್ಲಿ ಪ್ರಶಾಂತ್ ವಿಹಾರ್ ಪ್ರದೇಶದಲ್ಲಿ ಎರಡನೇ ಸ್ಫೋಟ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Road Mishap: ಬೀದರ್ ನಲ್ಲಿ ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಮೃತ್ಯು, ಮಹಿಳೆ ಗಂಭೀರ
Belgavi;ಸುವರ್ಣ ವಿಧಾನ ಸೌಧದ ಸುತ್ತ ನಿಷೇಧಾಜ್ಞೆ
Maharashtra ಮತದಾನ ಮುಗಿದ ನಂತರ 7% ಹೆಚ್ಚಳ : ECI ಸ್ಪಷ್ಟಪಡಿಸಬೇಕು ಎಂದ ಕಾಂಗ್ರೆಸ್
Mumbai: ಆತ್ಮಹತ್ಯೆಗೂ 15 ನಿಮಿಷದ ಮೊದಲು ತಾಯಿಗೆ ಕರೆ ಮಾಡಿ ಖುಷಿಯಲ್ಲೇ ಮಾತನಾಡಿದ್ದ ಪೈಲೆಟ್
Nikhil Kumarswamy: ಸೋತ ನಿಖಿಲ್ಗೆ ಜಿಲ್ಲೆಯ ಪಕ್ಷ ಸಂಘಟನೆ ಹೊಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.