ಕಮರಿಗೆ ಬಿದ್ದ ಶಾಲೆ ಬಸ್: 30 ಸಾವು
Team Udayavani, Apr 10, 2018, 7:00 AM IST
ನವದೆಹಲಿ: ಶಾಲೆಯಿಂದ ಮನೆಗೆ ಮಕ್ಕಳನ್ನು ಕರೆದುಕೊಂಡು ಹೊರಟಿದ್ದ ಬಸ್ ಹಿಮಾಚಲ ಪ್ರದೇಶದ ಕಾಂಗ್ರಾದಲ್ಲಿ 200 ಅಡಿ ಆಳದ ಪ್ರಪಾತಕ್ಕೆ ಬಿದ್ದ ಪರಿಣಾಮ 27 ಮಕ್ಕಳು ಸಾವನ್ನಪ್ಪಿದ್ದಾರೆ. ಇಬ್ಬರು ಶಿಕ್ಷಕರು ಹಾಗೂ ವಾಹನ ಚಾಲಕ ಕೂಡ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಘಟನೆಗೆ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಪ್ರಮುಖ ಗಣ್ಯರು ಶೋಕ ವ್ಯಕ್ತಪಡಿಸಿದ್ದಾರೆ.
ವಜೀರ್ ರಾಮ್ ಸಿಂಗ್ ಪಠಾನಿಯಾ ಎಂಬುವರಿಗೆ ಸೇರಿದ ಈ ಬಸ್‌ನಲ್ಲಿ 40ಕ್ಕೂ ಹೆಚ್ಚು ಮಕ್ಕಳಿದ್ದರು ಎನ್ನಲಾಗಿದೆ. ಶಾಲೆ ಅವಧಿ ಮುಗಿದಿದ್ದರಿಂದ ಮಧ್ಯಾಹ್ನ ಮಕ್ಕಳನ್ನು ಕರೆದುಕೊಂಡು ಅವರ ಮನೆಗಳಿಗೆ ಬಿಡಲು ಬಸ್ ತೆರಳಿತ್ತು. ಸ್ಥಳೀಯರು ಹೇಳುವಂತೆ, ಚಾಲಕನ ನಿಯಂತ್ರಣ ತಪ್ಪಿದ್ದರಿಂದಾಗಿ ಬಸ್ ಕಂದಕಕ್ಕೆ ಉರುಳಿದೆ. ಗಾಯಗೊಂಡವರನ್ನು ಸಮೀಪದ ನೂರ್‌ಪುರ ಜಿಲ್ಲಾಸ್ಪತ್ರೆಗೆ ಸಾಗಿಸಲಾಗುತ್ತಿದೆ. ಈಗಾಗಲೇ 20ಕ್ಕೂ ಹೆಚ್ಚು ಮೃತದೇಹಗಳನ್ನು ಹೊರತರಲಾಗಿದೆ. 50ಕ್ಕೂ ಹೆಚ್ಚು ವೈದ್ಯರನ್ನು ಜಿಲ್ಲಾಸ್ಪತ್ರೆಯಲ್ಲಿ ನಿಯೋಜಿಸಲಾಗಿದ್ದು, ಈ ಪೈಕಿ ಮಕ್ಕಳ ತಜ್ಞರು ಮತ್ತು ಇತರ ವಿಭಾಗದ ಪರಿಣಿತರೂ ಇದ್ದಾರೆ. ರಾತ್ರಿಯೇ 20ಕ್ಕೂ ಹೆಚ್ಚು ಮೃತದೇಹಗಳನ್ನು ಹೊರತೆಗೆಯಲಾಗಿದೆ. ಬಸ್ ಸಂಪೂರ್ಣ ನುಜ್ಜುಗುಜ್ಜಾಗಿದ್ದರಿಂದ ರಕ್ಷಣಾ ಕಾರ್ಯಾಚರಣೆ ಅತ್ಯಂತ ಕಷ್ಟದ್ದಾಗಿದೆ. ಅಲ್ಲದೆ ಪ್ರಪಾತ ಕಡಿದಾಗಿದ್ದು, ರಸ್ತೆಯಿಂದ ಬಸ್‌ವರೆಗೆ ತೆರಳುವ ಮಾರ್ಗವೂ ದುರ್ಗಮವಾಗಿದೆ. ರಸ್ತೆಯಿಂದ ನಿಂತು ನೋಡಿದರೆ ಕಣ್ಣಿಗೆ ಕಾಣದಷ್ಟು ಆಳದಲ್ಲಿ ಬಸ್ ಬಿದ್ದಿದ್ದರಿಂದ ಈ ಪ್ರಮಾಣದ ಸಾವುನೋವು ಸಂಭವಿಸಿದೆ.
ಮೃತರ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರವನ್ನು ರಾಜ್ಯ ಸರ್ಕಾರ ಈಗಾಗಲೇ ಘೋಷಿಸಿದೆ. ಈ ಸಂಬಂಧ ತನಿಖೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ ಸಮಿತಿಯನ್ನು ನೇಮಿಸಿದೆ. ಅಪಘಾತಕ್ಕೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಹೆರಿಗೆ ವೇಳೆ ಹೃದಯಾಘಾತ: ಮಹಿಳೆ ಮೃತ್ಯು, ಮಗುವನ್ನು ಉಳಿಸುವ ಯತ್ನವೂ ವಿಫಲವಾಯಿತು
Tragedy: ರೈಲು ಹಳಿ ಮೇಲೆ ಕೂತು PUBG ಆಡುತ್ತಿದ್ದ ಮೂವರು ಯುವಕರ ದೇಹ ಛಿದ್ರ ಛಿದ್ರ…
Fog: ಉತ್ತರ ಭಾರತದಲ್ಲಿ ದಟ್ಟ ಮಂಜು, ಶೂನ್ಯ ಗೋಚರತೆ: ವಿಮಾನ, ರೈಲು ಸಂಚಾರದ ಮೇಲೆ ಪರಿಣಾಮ
Video: ವೇದಿಕೆ ಮೇಲಿಂದ ಕೆಳಗೆ ಬಿದ್ದ ಕೇರಳ ಶಾಸಕಿ ಉಮಾ ಥಾಮಸ್… ಸ್ಥಿತಿ ಗಂಭೀರ
Fraud; ಯುವಕರು, ಸ್ತ್ರೀಯರನ್ನು ಗುರಿಯಾಗಿಸಿ ಹೂಡಿಕೆ ವಂಚನೆ: ಕೇಂದ್ರ ಎಚ್ಚರಿಕೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Shimoga; ತೇಜೋವಧೆ ಮಾಡಲು ನನ್ನ ಹೆಸರಲ್ಲಿ ಕಳಪೆ ಸ್ವೀಟ್ ಹಂಚಿಕೆ; ಡಾ.ಸರ್ಜಿ
Father of the Nation: ಬಾಂಗ್ಲಾ ರಾಷ್ಟ್ರಪಿತನಿಗೆ ಪಠ್ಯದಿಂದಲೇ ಕೊಕ್!
Shocking: ಹೆರಿಗೆ ವೇಳೆ ಹೃದಯಾಘಾತ: ಮಹಿಳೆ ಮೃತ್ಯು, ಮಗುವನ್ನು ಉಳಿಸುವ ಯತ್ನವೂ ವಿಫಲವಾಯಿತು
Rohit Sharma; ಮುಗಿಯಿತಾ ರೋಹಿತ್ ಕ್ರಿಕೆಟ್ ವೃತ್ತಿಜೀವನ? ಗಂಭೀರ ಕೋಪಕ್ಕೆ ಕಾರಣವೇನು?
Channapatna; ನ್ಯೂಇಯರ್ ಪಾರ್ಟಿ ಮಾಡಲು ಹೋದವನ ಕೊಲೆ ಮಾಡಿದ ಬಾವಿಗೆ ಎಸೆದರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.