ಎಮ್ಮೆಗೆ ಢಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಬಸ್ ಪಲ್ಟಿ : 34 ಮಂದಿಗೆ ಗಾಯ
Team Udayavani, Oct 9, 2022, 3:50 PM IST
ಮಧ್ಯಪ್ರದೇಶ : ಎಮ್ಮೆಗೆ ಢಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಒಮ್ಮೆಲೇ ಬ್ರೇಕ್ ಹಾಕಿದ ವೇಳೆ ನಿಯಂತ್ರಣ ತಪ್ಪಿದ ಬಸ್ಸೊಂದು ಪಲ್ಟಿಯಾಗಿ ಸುಮಾರು 34 ಮಂದಿ ಪ್ರಯಾಣಿಕರು ಗಾಯಗೊಂಡಿರುವ ಘಟನೆ ಮಧ್ಯಪ್ರದೇಶದ ದಿಂಡೋರಿ ಜಿಲ್ಲೆಯಲ್ಲಿ ನಡೆದಿದೆ.
ಶನಿವಾರ ತಡರಾತ್ರಿ ಈ ಘಟನೆ ನಡೆದಿದ್ದು ಹತ್ತು ಮಂದಿಯ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.
ರಾಘೋಪುರ ಸಕ್ಕ ಗ್ರಾಮದಲ್ಲಿ ನಡೆದ ಸಮಾರಂಭವೊಂದಕ್ಕೆ ತೆರಳಿ ಶನಿವಾರ ಮಧ್ಯರಾತ್ರಿ 1.30 ರ ಸುಮಾರಿಗೆ ಸುಕುಲ್ ಪುರಕ್ಕೆ ಹಿಂತಿರುಗುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ ಎಂದು ಕೊತ್ವಾಲಿ ಪೊಲೀಸ್ ಠಾಣೆ ಇನ್ಸ್‌ಪೆಕ್ಟರ್ ಭೂಪೇಂದ್ರ ಪಾಂಡ್ರೆ ತಿಳಿಸಿದ್ದಾರೆ.
ಜಿಲ್ಲಾ ಕೇಂದ್ರದಿಂದ ಸುಮಾರು 10 ಕಿ.ಮೀ ದೂರದಲ್ಲಿರುವ ಸಾಲಿಯಾ ಪ್ರದೇಶ ತಲುಪುತ್ತಿದ್ದಂತೆ ಒಮ್ಮೆಲೆ ರಸ್ತೆಗೆ ಓಡಿ ಬಂದ ಎಮ್ಮೆಯನ್ನು ತಪ್ಪಿಸಲು ಬ್ರೇಕ್ ಹಾಕಿದ ಪರಿಣಾಮ ಬಸ್ ಪಲ್ಟಿಯಾಗಿದೆ ಎನ್ನಲಾಗಿದೆ. ಚಾಲಕನ ಅತಿವೇಗದ ಚಾಲನೆಯೇ ಈ ಅವಘಡಕ್ಕೆ ಕಾರಣ ಎಂದು ಬಸ್ಸಿನಲ್ಲಿದ್ದ ಪ್ರಯಾಣಿಕರು ಹೇಳಿದ್ದಾರೆ.
ಇದನ್ನೂ ಓದಿ : 50 ಲಕ್ಷ ರೂ ಜಪ್ತಿ,10 ಲಕ್ಷ ರೂ. ಕಿಸೆಗೆ; ಬೆಂಗಳೂರಿನ ವಂಚಕ ಪೊಲೀಸ್ ಬಂಧನ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Train ಜನಶತಾಬ್ದಿ ಎಕ್ಸ್ಪ್ರೆಸ್ನಲ್ಲಿ ಹಾವು ಪ್ರತ್ಯಕ್ಷ: ತನಿಖೆಗೆ ಆದೇಶ
Himachal Pradesh;ನಷ್ಟದಲ್ಲಿರುವ ಹೊಟೇಲ್ ಮುಚ್ಚಲು ಹೈಕೋರ್ಟ್ ಆದೇಶ
Waqf ಮಸೂದೆ ಕರಡು ವರದಿ ಸಿದ್ಧ: ಜೆಪಿಸಿ ಅಧ್ಯಕ್ಷ ಪಾಲ್ ಘೋಷಣೆ
Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!
Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.