ಅಪಹೃತ 39 ಭಾರತೀಯರು ಇರಾಕ್ ಜೈಲಿನಲ್ಲಿ: ಸುಷ್ಮಾ
Team Udayavani, Jul 17, 2017, 4:20 AM IST
ಹೊಸದಿಲ್ಲಿ: ಮೂರು ವರ್ಷಗಳ ಹಿಂದೆ ಇರಾಕ್ನಲ್ಲಿ ಐಸಿಸ್ ಉಗ್ರರಿಂದ ಅಪಹರಣಕ್ಕೊಳಗಾಗಿದ್ದ 39 ಭಾರತೀಯ ಪ್ರಜೆಗಳನ್ನು ವಾಯವ್ಯ ಮೊಸೂಲ್ನ ಬದುಶ್ ಜೈಲಿನಲ್ಲಿ ಇರಿಸಿರುವ ಸಾಧ್ಯತೆಯಿದ್ದು, ಜುಲೈ 24ರಂದು ಭಾರತಕ್ಕೆ ಬರಲಿರುವ ಇರಾಕ್ ವಿದೇಶಾಂಗ ಸಚಿವರು ಈ ಕುರಿತು ಹೆಚ್ಚಿನ ಮಾಹಿತಿ ನೀಡುವ ನಿರೀಕ್ಷೆಯಿದೆ ಎಂದು ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಹೇಳಿದ್ದಾರೆ.
ಬಹುತೇಕ ಪಂಜಾಬ್ಗ ಸೇರಿದವರು ಎನ್ನಲಾದ, ಅಪಹೃತರ ಕುಟುಂಬಗಳ ಸದಸ್ಯರನ್ನು ರವಿವಾರ ಭೇಟಿ ಮಾಡಿದ ಸಚಿವೆ ಸುಷ್ಮಾ ಸ್ವರಾಜ್, ಅಪಹರಣ ಕ್ಕೊಳಗಾದವರನ್ನು ಸ್ವದೇಶಕ್ಕೆ ಕರೆತರುವ ಎಲ್ಲ ಪ್ರಯತ್ನವನ್ನು ಸರಕಾರ ಮಾಡುತ್ತಿದೆ ಎಂದು ಭರವಸೆ ನೀಡಿದ್ದಾರೆ. ಜತೆಗೆ, ಮೊಸೂಲ್ ಪ್ರಾಂತ್ಯವು ಉಗ್ರರ ಹಿಡಿತದಿಂದ ಸ್ವತಂತ್ರಗೊಂಡ ನಂತರ ಗಲ್ಫ್ ರಾಷ್ಟ್ರಕ್ಕೆ ಭೇಟಿ ನೀಡಿದ್ದ ವಿದೇಶಾಂಗ ಖಾತೆ ಸಹಾಯಕ ಸಚಿವ ವಿ.ಕೆ.ಸಿಂಗ್ ಅವರು ಅಪಹೃತರ ಬಗ್ಗೆ ಕಲೆ ಹಾಕಿರುವ ಮಾಹಿತಿಯನ್ನು ಕುಟುಂಬದ ಮುಂದಿಟ್ಟರು. ‘ಭಾರತೀಯರನ್ನು ಬದುಶ್ ಜೈಲಿನಲ್ಲಿರಿಸಿರುವ ಬಗ್ಗೆ ಗುಪ್ತ ಚರ ಮೂಲಗಳಿಂದ ಮಾಹಿತಿ ದೊರೆತಿದೆ’ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Uttarakhand: ಕಂದಕಕ್ಕೆ ಬಿದ್ದ ಬಸ್ ನಾಲ್ವರು ಮೃ*ತ್ಯು; 20ಕ್ಕೂ ಅಧಿಕ ಮಂದಿಗೆ ಗಾಯ
Uttar Pradesh: 16 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾ*ಚಾರ; ಇಬ್ಬರ ಬಂಧನ
Atul Subhash Case: ಮೊಮ್ಮಗನನ್ನು ನೀಡದಿದ್ದರೆ ಆತ್ಮಹತ್ಯೆ; ಅತುಲ್ ತಂದೆ
Delhi: ನಕಲಿ ಕೇಸ್ ನಲ್ಲಿ ಸಿಎಂ ಅತಿಶಿ ಬಂಧನಕ್ಕೆ ಇ.ಡಿ, ಸಿಬಿಐಗೆ ಬಿಜೆಪಿ ಆದೇಶ: ಕೇಜ್ರಿ!
Jammu and Kashmir: ಕಂದಕಕ್ಕೆ ಉರುಳಿದ ಸೇನಾ ವಾಹನ; ಕುಂದಾಪುರದ ಯೋಧ ಅನೂಪ್ ಹುತಾತ್ಮ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.