44 ಯೋಧರ ಬಲಿದಾನ ! ; ಕಾಶ್ಮೀರದ ಇತಿಹಾಸದ ಘೋರ ಪೈಶಾಚಿಕ ಕೃತ್ಯ
Team Udayavani, Feb 14, 2019, 2:53 PM IST
ಶ್ರೀನಗರ : ಕಾಶ್ಮೀರದ ಇತಿಹಾಸದಲ್ಲೇ ಮೊದಲು ಎನ್ನುವಂತೆ ಉಗ್ರರು ಯುರೋಪ್ ರಾಷ್ಟ್ರಗಳಲ್ಲಿ ನಡೆಯುತ್ತಿದ್ದ ಮಾದರಿಯಲ್ಲಿ ಕಾರಿನಲ್ಲಿ ಸ್ಫೋಟಕ ತುಂಬಿಸಿ ನಡೆಸಿದ ಆತ್ಮಾಹುತಿ ದಾಳಿಯಲ್ಲಿ ಕನಿಷ್ಠ
44 ಮಂದಿ ಸಿಆರ್‌ಪಿಎಫ್ ಯೋಧರು ಹುತಾತ್ಮರಾಗಿದ್ದಾರೆ. ಇದು ಉರಿ ದಾಳಿಯ ಬಳಿಕ ಭದ್ರತಾ ಪಡೆಗಳನ್ನು ಗುರಿಯಾಗಿಸಿ ನಡೆಸಿದ ಭೀಕರ ದಾಳಿಯಾಗಿದೆ.
ಆವಂತಿಪೋರಾದ ಗೋರಿಪುರ ಪ್ರದೇಶದ ಹೆದ್ದಾರಿಯಲ್ಲಿ ಸಾಗುತ್ತಿದ್ದ ಸಿಆರ್‌ಪಿಎಫ್ ವಾಹನಗಳ ಸಾಲನ್ನು ಗುರಿ ಇರಿಸಿ ಆತ್ಮಾಹುತಿ ದಾಳಿಕೋರನೊಬ್ಬ ಸ್ಫೋಟಕ ತುಂಬಿದ ಕಾರನ್ನು ಗುದ್ದಿಸಿದ್ದಾನೆ. ಪರಿಣಾಮವಾಗಿ ಸೇನಾ ವಾಹನ ಛಿದ್ರ ಛಿದ್ರವಾಗಿದ್ದು ಕನಿಷ್ಠ 44 ಸಿಆರ್‌ಪಿಎಫ್ ಸೈನಿಕರು ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ.
ಸ್ಫೋಟದ ತೀವ್ರತೆಗೆ ಹಲವರ ದೇಹಗಳು ಛಿದ್ರ ಛಿದ್ರವಾಗಿದ್ದು, ಯೋಧರ ಗುರುತು ಸಿಗದಷ್ಟು ಭಯಾನಕ ದೃಶ್ಯ ಕಂಡು ಬಂದಿದೆ. ಯೋಧನೊಬ್ಬರ ದೇಹ ನೂರು ಮೀಟರ್ ದೂರಕ್ಕೆ ಎಸೆಯಲ್‌ಪಟ್ಟಿತ್ತು ಎಂದು ವರದಿಯಾಗಿದೆ.
ಪಾಕ್ ಮೂಲದ ಜೈಶ್ ಎ ಮೊಹಮ್ಮದ್ ಉಗ್ರ ಸಂಘಟನೆ ದಾಳಿಯ ಹೊಣೆ ಹೊತ್ತಿದ್ದು, ಆತ್ಮಾಹುತಿ ದಾಳಿಕೋರ ಪುಲ್ವಾಮಾದ ಕಾಕಪೋರಾ ನಿವಾಸಿ ಅದಿಲ್ ಅಹ್ಮದ್ ಎನ್ನುವವನಾಗಿದ್ದು ಕೃತ್ಯ ಎಸಗುವ ಮುನ್ನ ವಿಡಿಯೋವನ್ನೂ ಮಾಡಿಟ್ಟಿದ್ದಾನೆ.
2,547 ಯೋಧರು ಜಮ್ಮವಿನಿಂದ ಶ್ರೀನಗರದತ್ತ 78 ವಾಹನಗಳಲ್ಲಿ ತೆರಳುತ್ತಿದ್ದ ಸಮಯವನ್ನು ಕಾದು ದಾಳಿ ನಡೆಸಲಾಗಿದೆ. ಮಧ್ಯಾಹ್ನ ಸುಮಾರು 3.20 ರ ವೇಳೆಗೆ ಘೋರ ದಾಳಿ ನಡೆದಿದೆ.
ಜಮ್ಮ ಮತ್ತು ಕಾಶ್ಮೀರದ ಹೆದ್ದಾರಿಯಲ್ಲಿ ಪ್ರತಿಕೂಲ ಹವಾಮಾನ ಮತ್ತು ದಟ್ಟ ಮಂಜು ಕವಿದಿದ್ದ ಕಾರಣ 2 ದಿನಗಳ ಕಾಲ ಹೆದ್ದಾರಿ ಬಂದ್ ಮಾಡಲಾಗಿತ್ತು, ಹೀಗಾಗಿ ಏಕಕಾಲದಲ್ಲಿ ಇಷ್ಟೊಂದು ಮಂದಿ ಸೈನಿಕರು ಪ್ರಯಾಣ ಬೆಳೆಸಿದ್ದರು.
ಇನ್ನೂ ಕೆಲ ಸೈನಿಕರಿಗೆ ಸೇನಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಅವರ ಸ್ಥಿತಿ ಚಿಂತಾಜನಕವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rule; 5, 8ನೇ ತರಗತಿಯಲ್ಲಿ ಫೈಲ್ ಆದರೆ ಭಡ್ತಿ ನೀಡುವಂತಿಲ್ಲ; ಅದೇ ಕ್ಲಾಸಲ್ಲಿ ಮುಂದುವರಿಕೆ!
Manipur; ಪೊಲೀಸ್ ಇಲಾಖೆಯಲ್ಲಿ ಮೈತೇಯಿ ಮತ್ತು ಕುಕಿಗಳು ಒಟ್ಟಾಗಿ ಕೆಲಸ ಮಾಡಬೇಕು
Kerala; ಸರಕಾರಿ ಶಾಲೆಯಲ್ಲಿ ಕ್ರಿಸ್ಮಸ್ ಆಚರಣೆಗೆ ಅಡ್ಡಿ,ಗೋದಲಿ ಧ್ವಂಸ: ವ್ಯಾಪಕ ಆಕ್ರೋಶ
Mahakumbh 2025: 45 ಕೋಟಿ ಯಾತ್ರಾರ್ಥಿಗಳ ನಿರೀಕ್ಷೆ
Drama ಬಿಟ್ಟು ಅಂಬೇಡ್ಕರ್ ಅವರಿಗೆ ನಿರಂತರ ಅವಮಾನ ಮಾಡಿದ್ದಕ್ಕೆ ಕಾಂಗ್ರೆಸ್ ಕ್ಷಮೆ ಕೇಳಲಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಬಿಜೆಪಿ, ಕಾಂಗ್ರೆಸ್‌ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ
Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ
Road Mishap: ಬೈಕ್- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು
Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು
Rule; 5, 8ನೇ ತರಗತಿಯಲ್ಲಿ ಫೈಲ್ ಆದರೆ ಭಡ್ತಿ ನೀಡುವಂತಿಲ್ಲ; ಅದೇ ಕ್ಲಾಸಲ್ಲಿ ಮುಂದುವರಿಕೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.