4.70 ಲಕ್ಷ ನಕಲಿ ಆಧಾರ್ ರದ್ದು : ಸಂಸ್ಥೆಯ ನ್ಯೂನತೆಗಳ ಬಗ್ಗೆ ಆಕ್ರೋಶ ಹೊರಹಾಕಿದ ಸಿಎಜಿ
Team Udayavani, Apr 9, 2022, 8:15 AM IST
ಹೊಸದಿಲ್ಲಿ: ಭಾರತೀಯ ವಿಶಿಷ್ಟ ಗುರುತಿನ ಚೀಟಿ ಪ್ರಾಧಿಕಾರಕ್ಕೆ ಸಾಂವಿಧಾನಿಕ ಮಾನ್ಯತೆ ನೀಡಿದ ಅನಂತರ ಮೊದಲ ಬಾರಿಗೆ ಲೆಕ್ಕ ಪರಿಶೋಧನೆ ನಡೆಸಿರುವ ಮಹಾ ಲೇಖಪಾಲರು (ಸಿಎಜಿ) ಸಂಸ್ಥೆಯಲ್ಲಿನ ನ್ಯೂನತೆಗಳ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದೆ.
2016ರಲ್ಲಿ ಆಧಾರ್ ಸಂಸ್ಥೆಗೆ ಸಾಂವಿಧಾನಿಕ ಮಾನ್ಯತೆ ನೀಡಲಾಗಿದೆ. ಅಲ್ಲದೆ, ಇಲ್ಲಿವರೆಗೆ 131 ಕೋಟಿ ಮಂದಿಗೆ ಆಧಾರ್ ಸಂಖ್ಯೆ ನೀಡಲಾಗಿದೆ. ವಿಶೇಷವೆಂದರೆ, 2019ರ ನವೆಂಬರ್ ವರೆಗೆ 4.70 ಲಕ್ಷ ನಕಲಿ ಆಧಾರ್ ರದ್ದು ಮಾಡಲಾಗಿದೆ ಎಂದಿರುವ ಸಿಎಜಿ, ಸಂಸ್ಥೆಯ ಕಾರ್ಯ ನಿರ್ವಹಣೆ ಬಗ್ಗೆ ಕಿಡಿಕಾರಿದೆ. ಆಧಾರ್ ನೀಡುವಾಗ ಜನರಿಂದ ಅಧಿಕೃತ ದಾಖಲೆಗಳನ್ನು ತೆಗೆದುಕೊಳ್ಳದೇ ಇರುವ ಬಗ್ಗೆಯೂ ಆಕ್ಷೇಪ ವ್ಯಕ್ತಪಡಿಸಿದೆ. ಕೇವಲ ಸ್ವಯಂ ದೃಢೀಕರಣ ಪತ್ರದೊಂದಿಗೆ ಹೇಗೆ ಆಧಾರ್ ಕಾರ್ಡ್ ನೀಡಿದ್ದೀರಿ ಎಂದು ಪ್ರಶ್ನಿಸಿದೆ. 5 ವರ್ಷದ ಒಳಗಿನ ಮಕ್ಕಳಿಗೆ ಆಧಾರ್ ಕಾರ್ಡ್ ನೀಡಿರುವ ಕುರಿತಂತೆಯೂ ಆಕ್ಷೇಪ ವ್ಯಕ್ತಪಡಿಸಿದೆ. ಈ ಮಕ್ಕಳಿಗೆ ಆಧಾರ್ ನೀಡದೇ ಇದ್ದಿದ್ದರೆ 310 ಕೋಟಿ ರೂ. ಹಣ ಉಳಿಕೆ ಮಾಡಬಹುದಾಗಿತ್ತು ಎಂದಿದೆ.
ಜತೆಗೆ ಆಧಾರ್ನಲ್ಲಿರುವ ನಂಬರ್ಗೂ, ಕಾರ್ಡ್ ಹೊಂದಿರುವವರಿಗೂ ಹೊಂದಿಕೆ ಆಗದಿರುವ ಬಗ್ಗೆಯೂ ಪ್ರಶ್ನಿಸಿರುವ ಅದು, ದೇಶದ ನಿವಾಸಿಗಳ ಗೌಪ್ಯತಾ ಮಾಹಿತಿಯನ್ನು ಇರಿಸಿಕೊಂಡಿದ್ದೀರಿ, ಒಂದಷ್ಟು ಎಚ್ಚರಿಕೆಯಿಂದ ಇರಬೇಕಾದದ್ದು ಅಗತ್ಯವಿದೆ ಎಂದು ತೀಕ್ಷ್ಣವಾಗಿ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
Mahayuti ಗೆಲುವು: ಆ್ಯಕ್ಸಿಸ್ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ
Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ
Adani ಬಂಧಿಸಿ, ಸೆಬಿ ಮುಖ್ಯಸ್ಥೆ ವಜಾ ಮಾಡಿ: ರಾಹುಲ್ ಪಟ್ಟು
MUST WATCH
ಹೊಸ ಸೇರ್ಪಡೆ
Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
BBK11: ಸೆಡೆಗಳನ್ನೆಲ್ಲ ಕಳ್ಸಿಯೇ ನಾನು ಮನೆಗೆ ಹೋಗೋದು- ಮತ್ತೆ ಗುಡುಗಿದ ರಜತ್
Mangaluru: ಟ್ರಾಯ್ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.