Uttarakhand Violence: 4 ಮೃತ್ಯು, ಪೊಲೀಸರು ಸೇರಿ 200 ಮಂದಿಗೆ ಗಾಯ, ಕರ್ಫ್ಯೂ ಜಾರಿ
Team Udayavani, Feb 9, 2024, 8:32 AM IST
ಉತ್ತರಾಖಂಡ: ಗುರುವಾರ ಉತ್ತರಾಖಂಡದ ಹಲ್ದ್ವಾನಿಯಲ್ಲಿ ನಡೆದ ಹಿಂಸಾಚಾರದಲ್ಲಿ ಕನಿಷ್ಠ ನಾಲ್ವರು ಮೃತಪಟ್ಟಿದ್ದು, 100 ಕ್ಕೂ ಹೆಚ್ಚು ಪೊಲೀಸ್ ಅಧಿಕಾರಿಗಳು ಸೇರಿದಂತೆ 200 ಮಂದಿ ಗಾಯಗೊಂಡಿರುವುದಾಗಿ ವರದಿಯಾಗಿದೆ.
ನೈನಿತಾಲ್ ಜಿಲ್ಲಾಡಳಿತ ಮತ್ತು ಸ್ಥಳೀಯ ಅಧಿಕಾರಿಗಳ ತಂಡವು ಜಂಟಿಯಾಗಿ ನಜುಲ್ ಭೂಮಿಯಲ್ಲಿ ಅಕ್ರಮವಾಗಿ ನಿರ್ಮಿಸಲಾದ ಮದರಸಾವನ್ನು ನೆಲಸಮವನ್ನು ಮಾಡಿತ್ತು. ಬನ್‌ಭೂಲ್‌ಪುರದಲ್ಲಿ “ಕಾನೂನುಬಾಹಿರವಾಗಿ ನಿರ್ಮಿಸಲಾದ” ಮದರಸಾ ಮತ್ತು ಪಕ್ಕದ ಮಸೀದಿಯನ್ನು ಕೆಡವಿದ ಕಾರಣಕ್ಕೆ ಉದ್ವಿಘ್ನ ಪರಿಸ್ಥಿತಿ ನಿರ್ಮಾಣಗೊಂಡು ಅಲ್ಲಿನ ನಿವಾಸಿಗಳು ಅಲ್ಲಿದ್ದ ವಾಹನಗಳು ಮತ್ತು ಪೊಲೀಸ್ ಠಾಣೆಗೆ ಬೆಂಕಿ ಹಚ್ಚಿ ಕಲ್ಲುಗಳನ್ನು ತೂರಿದ್ದಾರೆ. ಇದಕ್ಕೆ ಪ್ರತಿಯಾಗಿ ಪೊಲೀಸರು ಅಶ್ರುವಾಯು ಪ್ರಯೋಗ ಮಾಡಿದ್ದಾರೆ ಎನ್ನಲಾಗಿದೆ.
ಪರಿಸ್ಥಿತಿ ವಿಕೋಪಕ್ಕೆ ತೆರಳುತ್ತಿದ್ದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಕರ್ಫ್ಯೂ ಜಾರಿ ಮಾಡಿದ್ದಾರೆ ಅಲ್ಲದೆ ಕಂಡಲ್ಲಿ ಗಿಂಡಿಕ್ಕಲು ಆದೇಶ ಹೊರಡಿಸಿದ್ದಾರೆ.
ಮದರಸಾ ಕೆಡವಲು ಮುಂದಾದ ವೇಳೆ ನಡೆದ ಕಲ್ಲುತೂರಾಟದಲ್ಲಿ ಸುಮಾರು ನೂರಕ್ಕೂ ಹೆಚ್ಚು ಪೊಲೀಸ್ ಸಿಬಂದಿಗಳು ಗಾಯಗೊಂಡಿದ್ದಾರೆ ಅಲ್ಲದೆ ಕಟ್ಟಡ ಕೆಡವಲು ಬಂದಿದ್ದ ಕಾರ್ಮಿಕರೂ ಸೇರಿದ್ದರು ಎನ್ನಲಾಗಿದೆ.
ಘಟನೆಯ ಕುರಿತು ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ, ನ್ಯಾಯಾಲಯದ ಆದೇಶದ ಬಳಿಕವೇ ಮಸೀದಿ ನೆಲಸಮ ಮಾಡಲು ತಂಡವನ್ನು ಕಳುಹಿಸಲಾಗಿದೆ ಎಂದು ಹೇಳಿದ್ದಾರೆ. ಈ ಪ್ರದೇಶದಲ್ಲಿ “ಸಮಾಜ ವಿರೋಧಿಗಳು” ಪೊಲೀಸರೊಂದಿಗೆ ಘರ್ಷಣೆ ನಡೆಸಿದ್ದು ಪ್ರಸ್ತುತ ಪರಿಸ್ಥಿತಿಗೆ ಕಾರಣವಾಯಿತು ಎಂದು ಮುಖ್ಯಮಂತ್ರಿ ಒತ್ತಿ ಹೇಳಿದರು. ಸುವ್ಯವಸ್ಥೆ ಕಾಪಾಡಲು ಹೆಚ್ಚುವರಿ ಪೊಲೀಸ್ ಮತ್ತು ಕೇಂದ್ರ ಪಡೆಗಳನ್ನು ನಿಯೋಜಿಸಲಾಗುತ್ತಿದ್ದು, ಶಾಂತಿ ಕಾಪಾಡುವಂತೆ ಮುಖ್ಯಮಂತ್ರಿ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.
ಮುನ್ನೆಚ್ಚರಿಕೆ ಕ್ರಮವಾಗಿ ಹಲ್ದ್ವಾನಿಯಾದ್ಯಂತ ಕರ್ಫ್ಯೂ ಹೇರಲಾಗಿದ್ದು, ಘಟನೆ ನಡೆದ ಪ್ರದೇಶಗಳಲ್ಲಿನ ಎಲ್ಲಾ ಅಂಗಡಿಗಳು ಮತ್ತು ಶಾಲೆಗಳನ್ನು ಮುಚ್ಚಲಾಗಿದೆ. ಪರಿಸ್ಥಿತಿ ಉದ್ವಿಗ್ನವಾಗಿದೆ, “ಅರಾಜಕ ಅಂಶಗಳ” ವಿರುದ್ಧ ಕಟ್ಟುನಿಟ್ಟಾಗಿ ವ್ಯವಹರಿಸುವಂತೆ ಮುಖ್ಯಮಂತ್ರಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಗಾಯಾಳುಗಳು ಸೋಬನ್ ಸಿಂಗ್ ಜೀನಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದುದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ.
Authentic video Proof : showing illegally residing #Muslims in #Haldwani throwing Stones and Petrol Bombs on Police and Administration workers and common people . pic.twitter.com/9f8LhLrG4y
— 卐 Blitzkreig 卐 (@TricolourFirst) February 8, 2024
Reports of violence in Haldwani, Uttarakhand. High level meeting called by Chief Minister Pushkar Singh Dhami. Curfew imposed in some areas. Paramilitary forces being called in. Chief Minister appeals for peace and calm. pic.twitter.com/yhmWJiqJ2s
— Aditya Raj Kaul (@AdityaRajKaul) February 8, 2024
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Manmohan Singh ಅಂತ್ಯಕ್ರಿಯೆ ಸ್ಮಾರಕ ನಿರ್ಮಿಸಬಹುದಾದ ಸ್ಥಳದಲ್ಲಿ ನಡೆಸಲು ಖರ್ಗೆ ಮನವಿ
Dr. Manmohan Singh; ನಾಳೆ ನಿಗಮಬೋಧ್ ಘಾಟ್ ಚಿತಾಗಾರದಲ್ಲಿ ಮಾಜಿ ಪ್ರಧಾನಿ ಅಂತ್ಯಕ್ರಿಯೆ
Video: ಮನಮೋಹನ್ ಸಿಂಗ್ ಹೇಳುವ ಬದಲು ಮೋದಿ ನಿಧನ ಎಂದ ನ್ಯೂಸ್ ಆ್ಯಂಕರ್.!
Punjab: ನಿಯಂತ್ರಣ ತಪ್ಪಿ ನದಿಗೆ ಬಿದ್ದ ಬಸ್… 8 ಮಂದಿ ಮೃತ್ಯು, ಹಲವರಿಗೆ ಗಾಯ
New Delhi: ಸಂಸತ್ತಿನ ಬಳಿ ಬೆಂಕಿ ಹಚ್ಚಿಕೊಂಡಿದ್ದ ಯುವಕ ಸಾ*ವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Havyaka Sammelana; ಅಡಿಕೆ ಬೆಳೆಗಾರರ ಹಿತ ರಕ್ಷಣೆಗೆ ಕೇಂದ್ರ ಬದ್ಧ: ಸಚಿವ ಜೋಶಿ
Udupi; ಗೀತಾರ್ಥ ಚಿಂತನೆ 138 : ಅಭಿಮಾನತ್ಯಾಗವೇ ಮೋಕ್ಷದ ಮೊದಲ ಮೆಟ್ಟಿಲು
Manmohan Singh ಅಂತ್ಯಕ್ರಿಯೆ ಸ್ಮಾರಕ ನಿರ್ಮಿಸಬಹುದಾದ ಸ್ಥಳದಲ್ಲಿ ನಡೆಸಲು ಖರ್ಗೆ ಮನವಿ
Kasaragod Crime News: ಅವಳಿ ಪಾಸ್‌ಪೋರ್ಟ್; ಕೇಸು ದಾಖಲು
Traffic; ಉಡುಪಿ ನಗರದಲ್ಲಿ 5 ದಿನ ರಸ್ತೆ ಮಾರ್ಗಗಳಲ್ಲಿ ಮಾರ್ಪಾಡು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.