Cyclonic Storm: ಪಶ್ಚಿಮ ಬಂಗಾಳದಲ್ಲಿ ಅಪ್ಪಳಿಸಿದ ಚಂಡಮಾರುತ; ಕನಿಷ್ಠ ನಾಲ್ವರು ಮೃತ್ಯು
Team Udayavani, Apr 1, 2024, 8:35 AM IST
ಕೋಲ್ಕತ್ತಾ: ಭಾನುವಾರ(ಮಾ.31 ರಂದು) ಪಶ್ಚಿಮ ಬಂಗಾಳದ ಜಲ್ಪೈಗುರಿಯಲ್ಲಿ ಗುಡುಗು ಸಹಿತ ಆಲಿಕಲ್ಲು ಮಳೆಯಿಂದಾಗಿ ಚಂಡಮಾರುತ ಅಪ್ಪಳಿಸಿ ಕನಿಷ್ಠ ನಾಲ್ಕು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ.
ಏಕಾಏಕಿ ಸುರಿದ ಮಳೆಯಿಂದಾಗಿ ಚಂಡಮಾರುತ(Cyclonic Storm) ಅಪ್ಪಳಿಸಿದೆ. ಪರಿಣಾಮ ಜಿಲ್ಲೆಯ ಬಹುತೇಕ ಭಾಗಗಳು ಮತ್ತು ನೆರೆಯ ಮೈನಗುರಿನ ಹಲವು ಪ್ರದೇಶಗಳ ಹಲವಾರು ಮನೆಗಳು ಹಾನಿಗೊಳಗಾಗಿವೆ. ಮರಗಳು ನೆಲಸಮಗೊಂಡಿವೆ.ಜೊತೆಗೆ ವಿದ್ಯುತ್ ಕಂಬಗಳು ನೆಲಕ್ಕೆ ಉರುಳಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ರಾಜರಹತ್, ಬರ್ನಿಶ್, ಬಕಾಲಿ, ಜೋರ್ಪಾಕ್ಡಿ, ಮಧಬ್ದಂಗ ಮತ್ತು ಸಪ್ತಿಬರಿಗಳು ಹೆಚ್ಚು ಹಾನಿಗೊಳಗಾದ ಪ್ರದೇಶಗಳಾಗಿವೆ ಎಂದು ವರದಿಯಾಗಿದೆ.
ಮಳೆಯಿಂದಾಗಿ ಹಾನಿಗೊಳಗಾದ ಪ್ರದೇಶಗಳಲ್ಲಿ ರಕ್ಷಣಾ ಕಾರ್ಯ ನಡೆಯುತ್ತಿದೆ ಎಂದು ವಿಪತ್ತು ನಿರ್ವಹಣಾ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ನಾಲ್ವರು ಮೃತಪಟ್ಟಿದ್ದು, ಹಲವಾರು ಮಂದಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಧುಪ್ಗುರಿ ಶಾಸಕ ನಿರ್ಮಲ್ ಚಂದ್ರ ರಾಯ್ ಹೇಳಿದ್ದಾರೆ.
ನಾಗರಿಕ ಆಡಳಿತ ಮತ್ತು ಪೊಲೀಸ್ ಮತ್ತು ವಿಪತ್ತು ನಿರ್ವಹಣೆಯ ಸಿಬ್ಬಂದಿಯನ್ನು ಪರಿಹಾರ ಕಾರ್ಯಗಳಿಗಾಗಿ ನಿಯೋಜಿಸಲಾಗಿದೆ. ಹೆಚ್ಚುವರಿಯಾಗಿ, ಕ್ವಿಕ್ ರೆಸ್ಪಾನ್ಸ್ ಟೀಮ್‌ಗಳನ್ನು (ಕ್ಯೂಆರ್‌ಟಿ) ಸೇವೆಗೆ ಕರೆಸಲಾಗಿದೆ. ಸಂಕಷ್ಟದಲ್ಲಿರುವ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ.
ಮೃತರಿಗೆ ಸಂತಾಪ ಸೂಚಿಸಿರುವ ಸಿಎಂ, ಸಂತ್ರಸ್ತರಿಗೆ ಜಿಲ್ಲಾಡಳಿತ ಅಗತ್ಯ ನೆರವು ನೀಡಲಿದೆ ಎಂದು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Boxing Day Test: ನೀಗಲಿ ಭಾರತದ ಬ್ಯಾಟಿಂಗ್ ಬರ; ಇಂದಿನಿಂದ ವರ್ಷಾಂತ್ಯದ ಭಾರತಸ್ಟ್
Covid: ಎನ್-95 ಮಾಸ್ಕ್ ಅವ್ಯವಹಾರ: ಆತುರದ ಕ್ರಮ ಕೈಗೊಳ್ಳದಂತೆ ಸೂಚನೆ
Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ
Koteshwar: ಬೀಜಾಡಿಯ ಯೋಧ ಅನೂಪ್ ಪೂಜಾರಿ ಮೃತ್ಯು
Name Road: ರಸ್ತೆಗೆ ಸಿದ್ದರಾಮಯ್ಯ ಹೆಸರಿಟ್ಟರೇ ತಪ್ಪೇನು?: ಪ್ರತಾಪ್ ಸಿಂಹ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.