ಜುಬಿಲಿ ಹಿಲ್ಸ್ ಅತ್ಯಾಚಾರ ಪ್ರಕರಣ: ನಾಲ್ವರು ಅಪ್ರಾಪ್ತರನ್ನು ವಯಸ್ಕರೆಂದು ಪರಿಗಣನೆ
Team Udayavani, Oct 1, 2022, 8:25 PM IST
ಹೈದರಾಬಾದ್: ಐವರು ಅಪ್ರಾಪ್ತರು ಸೇರಿ ಆರು ಮಂದಿ 17 ವರ್ಷದ ಹದಿಹರೆಯದ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ ಹೈದರಾಬಾದ್ ಜುಬಿಲಿ ಹಿಲ್ಸ್ ಪ್ರಕರಣದಲ್ಲಿ ನಾಲ್ವರು ಅಪ್ರಾಪ್ತರನ್ನು ವಯಸ್ಕರು ಎಂದು ಪರಿಗಣಿಸಬಹುದು ಎಂದು ತೆಲಂಗಾಣ ಬಾಲ ನ್ಯಾಯ ಮಂಡಳಿ ಅನುಮತಿ ನೀಡಿದೆ.
ಅಲ್ಲದೇ ಆರೋಪ ಪಟ್ಟಿಯಲ್ಲಿ ಇರುವಂತೆ ಯುವತಿಗೆ ಲೈಂಗಿಕ ಕಿರುಕುಳ ನೀಡಿದ ಸ್ಥಳೀಯ ಶಾಸಕನ ಮಗನನ್ನು ಅಪ್ರಾಪ್ತ ಎಂದು ಪರಿಗಣಿಸಬೇಕು ಎಂದು ಅಭಿಪ್ರಾಯಪಟ್ಟಿದೆ.
ಮೇ 28ರಂದು ಐವರು ಅಪ್ರಾಪ್ತರು ಸೇರಿ ಆರು ಮಂದಿ ಜುಬಿಲಿ ಹಿಲ್ಸ್ನ ಪಬ್ನಿಂದ 17 ವರ್ಷದ ಯುವತಿಯನ್ನು ಅಪಹರಿಸಿದ್ದಾರೆ. ಈ ವೇಳೆ ಅವಳ ಮೇಲೆ ಲೈಂಗಿಕ ಕಿರುಕುಳ ನೀಡಿದ್ದಾರೆ.
ನಂತರ ಶಾಸಕನ ಮಗ ಅಲ್ಲಿಂದ ಹೊರಟು ಹೋಗಿದ್ದಾನೆ. ಉಳಿದ ಐವರು ಜುಬಿಲಿ ಹಿಲ್ಸ್ನ ನಿರ್ಜನ ಪ್ರದೇಶಕ್ಕೆ ಅವಳನ್ನು ಕರೆದುಕೊಂಡು ಹೋಗಿ ಕಾರಿನಲ್ಲಿ ಅತ್ಯಾಚಾರ ಎಸಗಿದ್ದಾರೆ. ಈ ಬಗ್ಗೆ ಪೊಲೀಸರು ಡಿಎನ್ಎ ಸ್ಯಾಂಪಲ್ ವರದಿ ಸೇರಿದಂತೆ ಆರೋಪ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Henley Passport Index: ಸಿಂಗಾಪುರಕ್ಕೆ ಮೊದಲ ಸ್ಥಾನ: ಭಾರತದ ಪಾಸ್ಪೋರ್ಟ್ ಎಷ್ಟು ಸದೃಢ?
Dense Fog: ದೆಹಲಿ-ಲಖನೌ ಹೆದ್ದಾರಿಯಲ್ಲಿ ಸರಣಿ ಅಪಘಾತ, ವಿಮಾನ, ರೈಲು ಸಂಚಾರದಲ್ಲಿ ವ್ಯತ್ಯಯ
ಸೊಸೆಯಾಗಿ ಬರಬೇಕಾಗಿದ್ದವಳನ್ನೇ ಮದುವೆಯಾದ ಅಪ್ಪ… ಬೇಸರದಿಂದ ಸನ್ಯಾಸಿಯಾಗಲು ಹೊರಟ ಮಗ
Bhopal: ಬಿಜೆಪಿ ಮಾಜಿ ಶಾಸಕ ಸಿಂಗ್ ನಿವಾಸದ ಮೇಲೆ ಐಟಿ ದಾಳಿ; ನಗದು, 3 ಮೊಸಳೆ ಪತ್ತೆ!
ಪರೀಕ್ಷೆಯಿಂದ ತಪ್ಪಿಸಿಕೊಳ್ಳಲು 23ಶಾಲೆಗೆ ಬಾಂಬ್ ಬೆದರಿಕೆ ಹಾಕಿದ್ದ 12ನೇ ತರಗತಿ ವಿದ್ಯಾರ್ಥಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.