ಪುಲ್ವಾಮಾ ದುರಂತಕ್ಕೆ 4 ವರ್ಷ: ವೀರ ಯೋಧರನ್ನು ನೆನೆದ ಪ್ರಧಾನಿ ಮೋದಿ
Team Udayavani, Feb 14, 2023, 10:15 AM IST
ಹೊಸದಿಲ್ಲಿ: ಜಮ್ಮು ಕಾಶ್ಮೀರದ ಪುಲ್ವಾಮಾದಲ್ಲಿ 2019ರ ಫೆಬ್ರವರಿ 14ರಂದು ನಡೆದ ಘೋರ ದುರಂತದಲ್ಲಿ ಮಡಿದ ವೀರ ಯೋಧರನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿ ನೆನೆದಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಪ್ರಧಾನಿ ನರೇಂದ್ರ ಮೋದಿ ಅವರು, “ಪುಲ್ವಾಮಾದಲ್ಲಿ ಈ ದಿನ ನಾವು ಕಳೆದುಕೊಂಡ ನಮ್ಮ ಪರಾಕ್ರಮಿಗಳನ್ನು ನೆನಪಿಸಿಕೊಳ್ಳುತ್ತೇನೆ. ಅವರ ಅತ್ಯುನ್ನತ ತ್ಯಾಗವನ್ನು ನಾವು ಎಂದಿಗೂ ಮರೆಯುವುದಿಲ್ಲ. ಅವರ ಧೈರ್ಯವು ಬಲಿಷ್ಠ ಮತ್ತು ಅಭಿವೃದ್ಧಿ ಹೊಂದಿದ ಭಾರತವನ್ನು ನಿರ್ಮಿಸಲು ನಮ್ಮನ್ನು ಪ್ರೇರೇಪಿಸುತ್ತದೆ” ಎಂದಿದ್ದಾರೆ.
ಇದನ್ನೂ ಓದಿ:ಪ್ರೇಮಿಗಳ ದಿನವನ್ನು ವಿರೋಧಿಸಿ ಬೀದಿ ನಾಯಿಗಳ ಮದುವೆ ಮಾಡಿಸಿ ಪ್ರತಿಭಟಿಸಿದ ಹಿಂದೂಪರ ಸಂಘಟನೆ
2019ರ ಫೆಬ್ರವರಿ 14ರಂದು ಜಮ್ಮು ಕಾಶ್ಮೀರದ ಪುಲ್ವಾಮಾದಲ್ಲಿ ಸಿಆರ್ ಪಿಎಫ್ ಯೋಧರ ಮೇಲೆ ಉಗ್ರ ದಾಳಿ ನಡೆಸಲಾಗಿತ್ತು. ಜಮ್ಮುವಿನಿಂದ ಶ್ರೀನಗರಕ್ಕೆ 2,500 ಕ್ಕೂ ಹೆಚ್ಚು ಸೆಂಟ್ರಲ್ ರಿಸರ್ವ್ ಪೊಲೀಸ್ ಫೋರ್ಸ್ (CRPF) ಸಿಬ್ಬಂದಿಗಳು ಸಾಗುತ್ತಿದ್ದ 78 ವಾಹನಗಳನ್ನು ಗುರಿಯಾಗಿಸಿದ ಭಯೋತ್ಪಾದಕರು ದಾಳಿ ನಡೆಸಿದ್ದರು. ಘಟನೆಯಲ್ಲಿ 40 ಭಾರತೀಯ ಕೇಂದ್ರೀಯ ಮೀಸಲು ಪೊಲೀಸ್ ಪಡೆ (CRPF) ಸಿಬ್ಬಂದಿ ಹುತಾತ್ಮರಾಗಿದ್ದರು.
ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಲೆಥಾಪೋರಾದಲ್ಲಿ ದಾಳಿ ನಡೆಸಲಾಗಿತ್ತು.
Remembering our valorous heroes who we lost on this day in Pulwama. We will never forget their supreme sacrifice. Their courage motivates us to build a strong and developed India.
— Narendra Modi (@narendramodi) February 14, 2023
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jharkhand; ಇಂಡಿಯಾ ಒಕ್ಕೂಟದ “ಸಪ್ತ ಗ್ಯಾರಂಟಿ’!: ಮಹಿಳೆಯರಿಗೆ ಮಾಸಿಕ 2,500 ರೂ.
T-Shirt: ಫ್ಲಿಪ್‌ಕಾರ್ಟ್, ಮೀಶೋದಲ್ಲಿ ಲಾರೆನ್ಸ್ ಬಿಷ್ಣೋಯ್ ಟೀಶರ್ಟ್ ಮಾರಾಟ: ಆಕ್ರೋಶ
Supreme Court: ಬೇಕಾಬಿಟ್ಟಿ ಖಾಸಗಿ ಆಸ್ತಿ ಸ್ವಾಧೀನ ಸಲ್ಲ;ವಿಶೇಷ ಪ್ರಕರಣದಲ್ಲಷ್ಟೇ ಸ್ವಾಧೀನ
Madarsa Act: ಯುಪಿ ಮದರಸಾ ಕಾಯ್ದೆ ಸಿಂಧುತ್ವ ಎತ್ತಿಹಿಡಿದ ಸುಪ್ರೀಂ
Kharge: ಬೆಂಗಳೂರಿಗೆ ಬಂದು ನನ್ನ ಜತೆ ಚರ್ಚೆಗೆ ನಿಲ್ಲಿ: ಪ್ರಧಾನಿ ಮೋದಿಗೆ ಖರ್ಗೆ ಸವಾಲು
MUST WATCH
ಹೊಸ ಸೇರ್ಪಡೆ
Afro-Asia Cup: 2 ದಶಕಗಳ ಬಳಿಕ ಆಫ್ರೋ -ಏಷ್ಯಾ ಕಪ್?
Jharkhand; ಇಂಡಿಯಾ ಒಕ್ಕೂಟದ “ಸಪ್ತ ಗ್ಯಾರಂಟಿ’!: ಮಹಿಳೆಯರಿಗೆ ಮಾಸಿಕ 2,500 ರೂ.
T-Shirt: ಫ್ಲಿಪ್‌ಕಾರ್ಟ್, ಮೀಶೋದಲ್ಲಿ ಲಾರೆನ್ಸ್ ಬಿಷ್ಣೋಯ್ ಟೀಶರ್ಟ್ ಮಾರಾಟ: ಆಕ್ರೋಶ
Daily Horoscope; ಇಷ್ಟಾರ್ಥ ಸಿದ್ಧಿಯ ದಿನ..ಉದ್ಯೋಗ ಸ್ಥಾನದಲ್ಲಿ ಸದ್ಯಕ್ಕೆ ನಿಶ್ಚಿಂತೆ
Milk: ಕರ್ನಾಟಕ ಗಡಿಯ ಹಾಲು ಕೇರಳ ಪಾಲು! ಖರೀದಿ ದರ ಇಲ್ಲಿಗಿಂತ ಕೇರಳದಲ್ಲೇ ಅಧಿಕ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.