ಸಾಲ ವಾಪಸ್ ನೀಡದ ಕಾರಣ ಮಹಿಳೆಯ ಅಪ್ರಾಪ್ತ ಮಗಳನ್ನು ವಿವಾಹವಾದ 40 ವರ್ಷದ ವ್ಯಕ್ತಿ
ಪರಸ್ಪರ ಒಪ್ಪಿಗೆಯ ಮೇರೆಗೆ ವಿವಾಹ ಎಂದ 11 ವರ್ಷದ ಬಾಲಕಿ.!
Team Udayavani, May 1, 2023, 8:57 AM IST
ಪಾಟ್ನಾ: 11 ವರ್ಷದ ಅಪ್ರಾಪ್ತ ಬಾಲಕಿಯನ್ನು ವಿವಾಹವಾದ ವ್ಯಕ್ತಿಯೊಬ್ಬನನ್ನು ಪೋಕ್ಸೊ ಕಾಯ್ದೆಯಡಿ ಪೊಲೀಸರು ಬಂಧಿರುವ ಘಟನೆ ಬಿಹಾರದ ಸಿವಾನ್ ನಲ್ಲಿ ನಡೆದಿದೆ.
ಲಕ್ಷ್ಮೀಪುರ ಗ್ರಾಮದ ನಿವಾಸಿ ಮಹೇಂದ್ರ ಪಾಂಡೆ (40) ಬಂಧಿತ ಆರೋಪಿ.
ಬಾಲಕಿಯ ತಾಯಿಗೆ ಆರೋಪಿ ಮಹೇಂದ್ರ ಪಾಂಡೆ 2 ಲಕ್ಷ ರೂ. ಸಾಲವನ್ನು ನೀಡಿದ್ದ. ಸಾಲವನ್ನು ಆಕೆ ವಾಪಾಸ್ ಕೊಡದ ಕಾರಣಕ್ಕೆ ಮಹೇಂದ್ರ ಮಹಿಳೆಯ ಅಪ್ರಾಪ್ತ ಮಗಳನ್ನು ಮದುವೆಯಾಗಿದ್ದಾನೆ ಎಂದು ದೂರಿನಲ್ಲಿ ಹೇಳಲಾಗಿದೆ.
ಮೈರ್ವಾ ಪೊಲೀಸ್ ಠಾಣೆಯಲ್ಲಿ ಮಹಿಳೆ ಈ ಬಗ್ಗೆ ದೂರು ನೀಡಿದ್ದು,ಆರೋಪಿಯನ್ನು ಪೋಕ್ಸೊ ಕಾಯಿದೆಯಡಿಯಲ್ಲಿ ಬಂಧಿಸಲಾಗಿದೆ.
ಬಂಧನದ ಬಳಿಕ ಬಾಲಕಿ ಹಾಗೂ ಆರೋಪಿ ತಾವಿಬ್ಬರು ಪರಸ್ಪರ ಒಪ್ಪಿಗೆಯ ಮೇರೆಗೆ ವಿವಾಹವಾಗಿದ್ದಾರೆ ಎಂದು ಪೊಲೀಸರ ಮುಂದೆ ಹೇಳಿದ್ದಾರೆ.
ಆರೋಪಿ ಮಹೇಂದ್ರ ಪಾಂಡೆಗೆ ಈಗಾಗಲೇ ಒಂದು ಪತ್ನಿ ಇದ್ದಾರೆ ಎಂದು ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.