ರೈತರಿಗೆ ನೇರವಾಗಿ ಎಕರೆಗೆ 4 ಸಾವಿರ ನಗದು ಘೋಷಣೆ
Team Udayavani, Jan 3, 2019, 6:47 AM IST
ನವದೆಹಲಿ: ಮುಂಬರುವ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ರೈತರನ್ನು ಮೆಚ್ಚಿಸಲು ಕೇಂದ್ರ ಸರ್ಕಾರ ಪ್ರತಿ ಎಕರೆಗೆ 4 ಸಾವಿರ ರೂ. ನೇರ ನಗದು ಘೋಷಣೆ ಮಾಡುವ ಸಾಧ್ಯತೆಯಿದೆ.ಅಷ್ಟೇ ಅಲ್ಲ, ಪ್ರತಿ ರೈತರಿಗೆ 1 ಲಕ್ಷ ರೂ. ಬಡ್ಡಿ ರಹಿತ ಸಾಲ ಸೌಲಭ್ಯವನ್ನೂ ಇದೇ ವೇಳೆ ಘೋಷಿಸಬಹುದಾಗಿದೆ.
ನೇರ ನಗದು ಪಾವತಿಗಾಗಿ ಸರ್ಕಾರಕ್ಕೆ 2 ಲಕ್ಷ ಕೋಟಿ ರೂ. ಹೊರೆಯಾದರೆ, ಬಡ್ಡಿ ರಹಿತ ಸಾಲಕ್ಕಾಗಿ ಸರ್ಕಾರಕ್ಕೆ 28-30 ಸಾವಿರ ಕೋಟಿ ರೂ.ಹೊರೆಯಾಗಲಿದೆ. ಈಗಾಗಲೇ ರಸಗೊಬ್ಬರಕ್ಕೆ ನೀಡಲಾಗುತ್ತಿರುವ ಸಬ್ಸಿಡಿ ಹಾಗೂ ಇತರ ಸಣ್ಣ ಸ್ಕೀಮ್‌ಗಳನ್ನು ಇದರಲ್ಲಿಸೇರ್ಪಡೆಗೊಳಿಸುವ ಸಾಧ್ಯತೆಯಿದೆ.
ಪಂಚರಾಜ್ಯ ಚುನಾವಣೆಯಲ್ಲಿ ಬಿಜೆಪಿ 3 ರಾಜ್ಯಗಳಲ್ಲಿ ಭಾರಿ ಸೋಲುಂಡ ಹಿನ್ನೆಲೆಯಲ್ಲಿ ರೈತರಿಗಾಗಿ ಯೋಜನೆ ಗಳನ್ನು ಪ್ರಕಟಿಸಲು ಕೇಂದ್ರ ಸರ್ಕಾರ ನಿರ್ಧರಿಸಿದ್ದು, ಇದಕ್ಕಾಗಿ ಪ್ರಧಾನಿ ಸಚಿವಾಲಯ ಮತ್ತು ನೀತಿ ಆಯೋಗ ಸಭೆ ನಡೆಸಿ ಈ ಯೋಜನೆಯನ್ನು ರೂಪಿಸಿದೆ ಎನ್ನಲಾಗಿದೆ. ಈ ವಾರದಲ್ಲೇ
ಈ ಯೋಜನೆಯನ್ನು ಅಂತಿಮಗೊಳಿ ಸುವ ಸಾಧ್ಯತೆಯಿದೆ. ವಿವಿಧ ಖಾತೆಗಳ ಅಧಿಕಾರಿಗಳೆಲ್ಲರೂ ಒಟ್ಟಾಗಿ ಈ ಯೋಜನೆಯನ್ನು ಅಂತಿಮಗೊಳಿಸುವಂತೆ ಪ್ರಧಾನಿ ಸಚಿವಾಲಯ ಸೂಚಿಸಿತ್ತು.
ಸದ್ಯ ಬೆಳೆ ಸಾಲಕ್ಕೆ ಶೇ. 4 ರ ಬಡ್ಡಿ ವಿಧಿಸಲಾಗುತ್ತಿದೆ. ಆದರೆ ಈ ಹೊಸ ವಿಧದ ಸಾಲಕ್ಕೆ 1 ಲಕ್ಷ ರೂ.ವರೆಗೆ ಬ್ಯಾಂಕ್‌ಗಳು ಬಡ್ಡಿ ವಿಧಿಸುವಂತಿಲ್ಲ. ಅಲ್ಲದೆ ಎಕರೆಗೆ 50 ಸಾವಿರ ರೂ. ಬಡ್ಡಿ ರಹಿತ ಸಾಲವನ್ನು ನಿಗದಿಪಡಿಸಲಾಗಿದ್ದು, ಒಬ್ಬರ ರೈತರಿಗೆ 1 ಲಕ್ಷ ರೂ.ವರೆಗೆ ನೀಡಬಹುದಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rahul Gandhi ಭರವಸೆಗಳನ್ನು ನೀಡುತ್ತಾರೆ ಮತ್ತು ವಿದೇಶಕ್ಕೆ ಹಾರುತ್ತಾರೆ: ಶಾ ವಾಗ್ದಾಳಿ
PM Modi ಅವರು ಜೋ ಬೈಡೆನ್ ಅವರಂತೆ ನೆನಪಿನ ಶಕ್ತಿ ಕಳೆದುಕೊಳ್ಳುತ್ತಿದ್ದಾರೆ: ರಾಹುಲ್ ಗಾಂಧಿ
Resign: ಶಿರೋಮಣಿ ಅಕಾಲಿದಳದ ಅಧ್ಯಕ್ಷ ಸ್ಥಾನಕ್ಕೆ ಸುಖಬೀರ್ ಸಿಂಗ್ ಬಾದಲ್ ರಾಜೀನಾಮೆ
Maharashtra; ನಮ್ಮ ಮೈತ್ರಿ ಕೂಟ ಗೆದ್ದು ಮಹಾರಾಷ್ಟ್ರ ಉಳಿಸಲಿದೆ: ಡಿ.ಕೆ. ಶಿವಕುಮಾರ್
Nara Ramamurthy: ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಸಹೋದರ ನಾರಾ ರಾಮಮೂರ್ತಿ ನಾಯ್ಡು ನಿಧನ
MUST WATCH
ಹೊಸ ಸೇರ್ಪಡೆ
Rahul Gandhi ಭರವಸೆಗಳನ್ನು ನೀಡುತ್ತಾರೆ ಮತ್ತು ವಿದೇಶಕ್ಕೆ ಹಾರುತ್ತಾರೆ: ಶಾ ವಾಗ್ದಾಳಿ
ICC: ಬಿಸಿಸಿಐನ ಆಕ್ಷೇಪದ ನಂತರ ಚಾಂಪಿಯನ್ಸ್ ಟ್ರೋಫಿ ಪ್ರವಾಸದ ಸ್ಥಳ ಪರಿಷ್ಕರಣೆ
BJP;ಯತ್ನಾಳ್ ರನ್ನು ತಡೆಯದಿದ್ದರೆ ನಾನೂ ಪ್ರತ್ಯೇಕ ಪಾದಯಾತ್ರೆ ಮಾಡುತ್ತೇನೆ:ರೇಣುಕಾಚಾರ್ಯ
Team India: ದ.ಆಫ್ರಿಕಾ ವಿರುದ್ದದ ಗೆಲುವಿನೊಂದಿಗೆ ಪಾಕ್ ದಾಖಲೆ ಮುರಿದ ಟೀಂ ಇಂಡಿಯಾ
Udupi: ಸಿಎನ್‌ಜಿ ಪೂರೈಕೆಯಲ್ಲಿ ಕೊರತೆಯಾಗದಂತೆ ಕ್ರಮ ಕೈಗೊಳ್ಳಿ: ಸಂಸದ ಕೋಟ ಸೂಚನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.