ಬರ ಅನುದಾನ ಕೇಳಿದ್ದು 4700 ಕೋಟಿ ಕೊಟ್ಟಿದ್ದು 1782 ಕೋಟಿ

Team Udayavani, Jan 6, 2017, 3:45 AM IST

drought-k8KD–621×414@LiveM.jpg

ಉದಯವಾಣಿ ದೆಹಲಿ ಪ್ರತಿನಿಧಿ: ಕೇಂದ್ರ ಬರ ಅಧ್ಯಯನ ತಂಡದ ವರದಿಯ ಶಿಫಾರಸ್ಸಿನಂತೆ ರಾಜ್ಯದಲ್ಲಿನ ಬರ ನಿವಾರಣೆಗಾಗಿ 1782.44 ಕೋಟಿ ರೂ. ಅನುದಾನ ನೀಡುವುದಾಗಿ ಕೇಂದ್ರ ಸರ್ಕಾರ ಘೋಷಿಸಿದೆ. ರಾಜ್ಯದಲ್ಲಿ ತೀವ್ರ ಬರವಿದ್ದು 4702.54 ಕೋಟಿ ರೂ.ಅನುದಾನ ನೀಡಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ರಾಜ್ಯ ಸರ್ಕಾರ ಕೇಂದ್ರಕ್ಕೆ ಮನವಿ ಸಲ್ಲಿಸಿತ್ತು. 

ಗುರುವಾರ ಗೃಹ ಸಚಿವ ರಾಜನಾಥ್‌ ಸಿಂಗ್‌ ನೇತೃತ್ವದಲ್ಲಿ ಗೃಹ ಕಚೇರಿಯಲ್ಲಿ ನಡೆದ ಉನ್ನತ ಮಟ್ಟದ ಸಮಿತಿಯ ಸಭೆಯಲ್ಲಿ ಕೇಂದ್ರ ಸರ್ಕಾರದ ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯಡಿ 1782.44 ಕೋಟಿ ರೂ. ನೀಡುವ ನಿರ್ಧಾರ ಕೈಗೊಳ್ಳಲಾಗಿದೆ. ಶೀಘ್ರದಲ್ಲಿಯೇ ಈ ಅನುದಾನದ ಹಣವನ್ನು ರಾಜ್ಯಕ್ಕೆ ಬಿಡುಗಡೆಗೊಳಿಸಲಾಗುವುದು ಎಂದು ಸಮಿತಿ ತಿಳಿಸಿದೆ. 

ಗರಿಷ್ಠ ಪರಿಹಾರ: 
ರಾಜ್ಯದ ಮನವಿಗೆ ಹೋಲಿಸಿದರೆ ಘೋಷಣೆಯಾದ ಪರಿಹಾರದ ಮೊತ್ತ ಕಡಿಮೆ. ಆದರೆ ಹಿಂದಿನ ಪರಿಹಾರಗಳನ್ನು ಗಮನಿಸಿದರೆ ಈ ಸಲ ಗರಿಷ್ಠ ಪ್ರಮಾಣದ ಅನುದಾನವನ್ನು ಕೇಂದ್ರ ಸರ್ಕಾರ ರಾಜ್ಯಕ್ಕೆ ನೀಡಿದೆ ಎನ್ನಲಾಗಿದೆ.2015-16ರ ಸಾಲಿನಲ್ಲಿ ಬರ ಪರಿಹಾರವಾಗಿ ರಾಜ್ಯವು ಕೇಂದ್ರದಿಂದ 3,830 ಕೋಟಿ ರೂ. ಕೇಳಿತ್ತು. ಆದರೆ ಕೇಂದ್ರ ಸರ್ಕಾರ 1540 ಕೋಟಿ ರೂ. ನೀಡಿತ್ತು. 

ಇತ್ತೀಚೆಗಷ್ಟೇ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ, ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯ ಮಾನದಂಡಗಳನ್ನು ಅನ್ವಯಿಸಿ ರಾಜ್ಯಕ್ಕೆ 4702.54 ಕೋಟಿ ರೂ. ಪರಿಹಾರ ಒದಗಿಸಬೇಕು ಎಂದು ಮನವಿ ಮಾಡಿಕೊಂಡಿದ್ದರು. ಆದರೆ ಕೇಂದ್ರ ಸರ್ಕಾರ ಕಳೆದ ನವೆಂಬರ್‌ ಮೊದಲ ವಾರದಲ್ಲಿ ರಾಜ್ಯದ ಬರ ಪೀಡಿತ ಪ್ರದೇಶಗಳಿಗೆ ತನ್ನ ಆಂತರಿಕ ತಂಡವನ್ನು ಕಳುಹಿಸಿದ್ದು, ಆ ಸಮಿತಿಯ ಅಧ್ಯಯನ ವರದಿಯ ಶಿಫಾರಸ್ಸಿನಂತೆ ಅನುದಾನ ನೀಡಿದೆ.

ಗೃಹ ಸಚಿವಾಲಯದ ಅಧಿಕಾರಿಗಳು ಸೇರಿದಂತೆ ನೀತಿ ಆಯೋಗದ ಉಪ ಮುಖ್ಯಸ್ಥ ಡಾ.ಅರವಿಂದ ಪಾನಗಢಿಯಾ, ಗೃಹ ಸಚಿವಾಲಯದ ಕಾರ್ಯದರ್ಶಿ ರಾಜೀವ್‌ ಮೆಹ್ರಷಿ ಮೊದಲಾದ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.

ನಿರಾಸೆಯಾಗಿದೆ: ಕೃಷ್ಣಬೈರೇಗೌಡ
ಈ ಕುರಿತು ಪ್ರತಿಕ್ರಿಯಿಸಿದ ಕೃಷಿ ಸಚಿವ ಕೃಷ್ಣ ಬೈರೇಗೌಡ, ಕೇಂದ್ರದ ನಿರ್ಧಾರದಿಂದ ರಾಜ್ಯಕ್ಕೆ ತೀವ್ರ ನಿರಾಸೆಯಾಗಿದೆ ಎಂದರು. ಈ ಸಲ ಬರ ಪರಿಹಾರಕ್ಕೆ ಬೇರೆ ಯಾವುದೇ ರಾಜ್ಯಗಳು ಮನವಿ ಮಾಡಿರಲಿಲ್ಲ. ಹೀಗಾಗಿ ರಾಜ್ಯಕ್ಕೆ ಹೆಚ್ಚಿನ ಅನುದಾನ ಸಿಗುವ ವಿಶ್ವಾಸವಿತ್ತು. ಕೇಂದ್ರದಿಂದ ಕಡಿಮೆ ಅನುದಾನ ಸಿಗಬಹುದೆಂದು ನಿರೀಕ್ಷಿಸಿ, ಮುಖ್ಯಮಂತ್ರಿಗಳ ನೇತೃತ್ವದಲ್ಲಿ ಹೆಚ್ಚಿನ ಪರಿಹಾರ ನೀಡುವಂತೆ ಪ್ರಧಾನಿ ಅವರಿಗೂ ಮನವಿ ಮಾಡಿಕೊಂಡಿದ್ದೆವು. ಆದರೆ ನಮ್ಮ ಮನವಿಗೆ ಕೇಂದ್ರ ಸರ್ಕಾರ ಸ್ಪಂದಿಸಿಲ್ಲ. ಹೆಚ್ಚಿನ ಪರಿಹಾರಕ್ಕಾಗಿ ಇನ್ನೊಮ್ಮೆ ಪ್ರಧಾನಿ ಅವರನ್ನು ಭೇಟಿ ಮಾಡುವ ಕುರಿತು ಮುಖ್ಯಮಂತ್ರಿಗಳ ಜೊತೆ ಚರ್ಚಿಸುತ್ತೇನೆ ಎಂದು ಅವರು ತಿಳಿಸಿದರು. 

ಕೇಂದ್ರ ಸರ್ಕಾರ ಈಗ ಬಿಡುಗಡೆ ಮಾಡಿರುವ ಮೊತ್ತ ಬಹಳ ಕಡಿಮೆಯಾಗಿದ್ದು, ಈ ಹಿಂದೆ ಕೇಳಿದ್ದ ಮೊತ್ತವನ್ನೇ ನೀಡಬೇಕೆಂದು ಮತ್ತೂಮ್ಮೆ ಕೇಂದ್ರಕ್ಕೆ ಮನವಿ ಸಲ್ಲಿಸಲಾಗುವುದು. 
– ಸಿದ್ದರಾಮಯ್ಯ 

ಕಳೆದ ವರ್ಷ ಕೇಂದ್ರ ಸರ್ಕಾರ 1,500 ಕೋಟಿ ರೂ. ಬರ ಪರಿಹಾರ ನೀಡಿದ್ದರೂ, ರಾಜ್ಯ ಸರ್ಕಾರ ಅದನ್ನು ಸಮರ್ಪಕವಾಗಿ ಬಳಿಸಿಕೊಂಡಿಲ್ಲ. ಆದರೂ ಹೆಚ್ಚಿನ ಪರಿಹಾರ ನೀಡುವಂತೆ ಕೇಂದ್ರದ ಮೇಲೆ ಒತ್ತಡ ಹೇರುತ್ತೇನೆ.
– ಯಡಿಯೂರಪ್ಪ

ಟಾಪ್ ನ್ಯೂಸ್

1-modi-bg

Hala Modi; ಮಿನಿ ಹಿಂದೂಸ್ಥಾನಕ್ಕೆ ಸಾಕ್ಷಿಯಾಗುತ್ತಿದ್ದೇನೆ: ಕುವೈಟ್ ನಲ್ಲಿ ಮೋದಿ

1-mohali

Mohali; ಬಹುಮಹಡಿ ಕಟ್ಟಡ ಕುಸಿತ: ಹಲವರು ಸಿಲುಕಿರುವ ಶಂಕೆ

kejriwal 2

Delhi excise policy; ಕೇಜ್ರಿವಾಲ್ ವಿಚಾರಣೆಗೆ ಲೆಫ್ಟಿನೆಂಟ್ ಗವರ್ನರ್ ಅನುಮತಿ ಪಡೆದ ಇಡಿ

Year Ender 2024: ಈ ವರ್ಷ ಅತೀ ಹೆಚ್ಚು ಗಳಿಕೆ ಕಂಡ ಭಾರತೀಯ ಸಿನಿಮಾಗಳ ಪಟ್ಟಿ ಇಲ್ಲಿದೆ..

Year Ender 2024: ಈ ವರ್ಷ ಅತೀ ಹೆಚ್ಚು ಗಳಿಕೆ ಕಂಡ ಭಾರತೀಯ ಸಿನಿಮಾಗಳ ಪಟ್ಟಿ ಇಲ್ಲಿದೆ..

1-russia

9/11-ಶೈಲಿಯಲ್ಲಿ ರಷ್ಯಾದ ವಸತಿ ಕಟ್ಟಡಗಳ ಮೇಲೆ ಉಕ್ರೇನ್ ನಿಂದ ಸರಣಿ ಡ್ರೋನ್ ದಾಳಿ!

ತಾಯಿಯ ಕ್ಯಾನ್ಸರ್ ಚಿಕಿತ್ಸೆಗೆ ಕೂಡಿಟ್ಟ ಹಣದಲ್ಲೇ ರಮ್ಮಿ ಆಡಿದ ಮಗ.. ಕೊನೆಗೆ ಜೀವ ಕಳೆದುಕೊಂಡ

ತಾಯಿಯ ಕ್ಯಾನ್ಸರ್ ಚಿಕಿತ್ಸೆಗೆ ಕೂಡಿಟ್ಟ ಹಣದಲ್ಲೇ ರಮ್ಮಿ ಆಡಿದ ಮಗ.. ಕೊನೆಗೆ ಜೀವ ಕಳೆದುಕೊಂಡ

ಸಿನೆಮಾ ಪೋಸ್ಟರ್‌ ಗಳ ಕೋಣೆಯಲ್ಲಿ-ಹಾಲಿವುಡ್‌ ನಿರ್ದೇಶಕರ ದಂಡು; ಮರೆ ಯಲಾಗದ ಅದ್ಭುತ ಕ್ಷಣ

ಸಿನೆಮಾ ಪೋಸ್ಟರ್‌ ಗಳ ಕೋಣೆಯಲ್ಲಿ-ಹಾಲಿವುಡ್‌ ನಿರ್ದೇಶಕರ ದಂಡು; ಮರೆ ಯಲಾಗದ ಅದ್ಭುತ ಕ್ಷಣ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-mohali

Mohali; ಬಹುಮಹಡಿ ಕಟ್ಟಡ ಕುಸಿತ: ಹಲವರು ಸಿಲುಕಿರುವ ಶಂಕೆ

rape

Ashram;89 ವರ್ಷದ ಆಶ್ರಮ ಗುರುವಿನ ಮೇಲೆ ಆತ್ಯಾಚಾ*ರ ಪ್ರಕರಣ ದಾಖಲು

kejriwal 2

Delhi excise policy; ಕೇಜ್ರಿವಾಲ್ ವಿಚಾರಣೆಗೆ ಲೆಫ್ಟಿನೆಂಟ್ ಗವರ್ನರ್ ಅನುಮತಿ ಪಡೆದ ಇಡಿ

ತಾಯಿಯ ಕ್ಯಾನ್ಸರ್ ಚಿಕಿತ್ಸೆಗೆ ಕೂಡಿಟ್ಟ ಹಣದಲ್ಲೇ ರಮ್ಮಿ ಆಡಿದ ಮಗ.. ಕೊನೆಗೆ ಜೀವ ಕಳೆದುಕೊಂಡ

ತಾಯಿಯ ಕ್ಯಾನ್ಸರ್ ಚಿಕಿತ್ಸೆಗೆ ಕೂಡಿಟ್ಟ ಹಣದಲ್ಲೇ ರಮ್ಮಿ ಆಡಿದ ಮಗ.. ಕೊನೆಗೆ ಜೀವ ಕಳೆದುಕೊಂಡ

mumbai1

ಮುಂಬೈ ದೋಣಿ ದುರಂತ: ನಾಪತ್ತೆಯಾಗಿದ್ದ ಬಾಲಕನ ಶವ ಪತ್ತೆ, ಮೃತರ ಸಂಖ್ಯೆ 15ಕ್ಕೆ ಏರಿಕೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-modi-bg

Hala Modi; ಮಿನಿ ಹಿಂದೂಸ್ಥಾನಕ್ಕೆ ಸಾಕ್ಷಿಯಾಗುತ್ತಿದ್ದೇನೆ: ಕುವೈಟ್ ನಲ್ಲಿ ಮೋದಿ

Kumble: ಯುವಕನ ಕೊಲೆ; ಆರು ಮಂದಿ ಅಪರಾಧಿಗಳು ಡಿ. 23ರಂದು ಶಿಕ್ಷೆ ತೀರ್ಪು ಘೋಷಣೆ

Kumble: ಯುವಕನ ಕೊಲೆ; ಆರು ಮಂದಿ ಅಪರಾಧಿಗಳು ಡಿ. 23ರಂದು ಶಿಕ್ಷೆ ತೀರ್ಪು ಘೋಷಣೆ

Shiroor: ಡಿವೈಡರ್‌ಗೆ ಕಾರು ಢಿಕ್ಕಿ

Shiroor: ಡಿವೈಡರ್‌ಗೆ ಕಾರು ಢಿಕ್ಕಿ

1-mohali

Mohali; ಬಹುಮಹಡಿ ಕಟ್ಟಡ ಕುಸಿತ: ಹಲವರು ಸಿಲುಕಿರುವ ಶಂಕೆ

rape

Ashram;89 ವರ್ಷದ ಆಶ್ರಮ ಗುರುವಿನ ಮೇಲೆ ಆತ್ಯಾಚಾ*ರ ಪ್ರಕರಣ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.