5 ದಿನ ಸಿಬಿಐ ವಶಕ್ಕೆ
Team Udayavani, Dec 11, 2018, 6:00 AM IST
ಹೊಸದಿಲ್ಲಿ: ಅಗಸ್ಟಾ ಕಾಪ್ಟರ್ ಹಗರಣದ ಮಧ್ಯವರ್ತಿ ಕ್ರಿಶ್ಚಿಯನ್ ಮೈಕೆಲ್‌ನ ಬಂಧನಾವಧಿಯನ್ನು 5 ದಿನಗಳವರೆಗೆ ವಿಸ್ತರಿಸಲಾಗಿದೆ. ಡಿ. 10ರಂದು ಆತನನ್ನು 5 ದಿನಗಳ ಕಾಲ ಸಿಬಿಐ ವಶಕ್ಕೆ ಒಪ್ಪಿಸಲಾಗಿತ್ತು. ಅವಧಿ ಪೂರ್ಣಗೊಂಡ ಹಿನ್ನೆಲೆಯಲ್ಲಿ ಆತನನ್ನು ಸೋಮವಾರ ವಿಶೇಷ ಸಿಬಿಐ ನ್ಯಾಯಾಲಯದ ನ್ಯಾಯಾಧೀಶ ಅರವಿಂದ್ ಕುಮಾರ್ ಅವರ ಮುಂದೆ ಹಾಜರುಪಡಿಸ ಲಾಗಿತ್ತು. ಈ ವೇಳೆ ಹೆಚ್ಚಿನ ಮಾಹಿತಿಗಾಗಿ ಆತನನ್ನು ಮತ್ತಷ್ಟು ವಿಚಾರಣೆಗೊಳಿಸುವ ಇಂಗಿತವನ್ನು ಸಿಬಿಐ ವ್ಯಕ್ತಪಡಿಸಿತು. ಅಲ್ಲದೆ, ಆತ ತನಿಖೆಯಲ್ಲಿ ಸಹಕರಿಸುತ್ತಿಲ್ಲ ಎಂದೂ ಆರೋಪಿಸಿತು. ಸಿಬಿಐ ಕೋರಿಕೆ ಪರಿಗಣಿಸಿದ ನ್ಯಾಯಾಧೀಶರು, ಮೈಕೆಲ್‌ನನ್ನು ಪುನಃ 5 ದಿನಗಳವರೆಗೆ ಸಿಬಿಐ ವಶಕ್ಕೊಪ್ಪಿಸಿ ಆದೇಶ ಹೊರಡಿಸಿದರು. ಇದೇ ವೇಳೆ, ಮೈಕಲ್, ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ತಾನು ಈ ಹಿಂದೆ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಹಿಂಪಡೆದು, ಹೊಸದಾಗಿ ಮತ್ತೂಂದು ಅರ್ಜಿಯನ್ನು ಸಲ್ಲಿಸಿದ್ದಾನೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Army Wepon: ಭಾರತದ ಬತ್ತಳಿಕೆಗೆ ದೇಸಿ ಹೈಪರ್‌ಸಾನಿಕ್ ಅಸ್ತ್ರ !
Mobs Storm: ಮಣಿಪುರದಲ್ಲಿ ಭುಗಿಲೆದ್ದ ಹಿಂಸಾಚಾರ!, ಮೈತೇಯಿ ಸಮುದಾಯದಿಂದ ಭಾರೀ ಪ್ರತಿಭಟನೆ
Maharashtra: ಮತಗಟ್ಟೆ ಬಳಿ ಚಪ್ಪಲಿ ನಿಷೇಧಿಸಿ ಎಂದು ಮಹಾಪಕ್ಷೇತರ ಅಭ್ಯರ್ಥಿ ಮನವಿ!
ಮನುಷ್ಯ ನೀನು ದಂಡ, ಸತ್ತು ಹೋಗು!: ಎಐ ಚಾಟ್‌ಬಾಟ್ ಹೇಳಿಕೆ
Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ
MUST WATCH
ಹೊಸ ಸೇರ್ಪಡೆ
Mangaluru: ಕೇರಳ ಏಜೆನ್ಸಿಯಿಂದ ಇಸ್ರೇಲ್‌ನಲ್ಲಿ ಉದ್ಯೋಗದ ಆಮಿಷ
Kyiv: ಉಕ್ರೇನ್ ವಿದ್ಯುತ್ ಸ್ಥಾವರ ಮೇಲೆ ರಷ್ಯಾ 120 ಕ್ಷಿಪಣಿ ದಾಳಿ
Army Wepon: ಭಾರತದ ಬತ್ತಳಿಕೆಗೆ ದೇಸಿ ಹೈಪರ್‌ಸಾನಿಕ್ ಅಸ್ತ್ರ !
Mobs Storm: ಮಣಿಪುರದಲ್ಲಿ ಭುಗಿಲೆದ್ದ ಹಿಂಸಾಚಾರ!, ಮೈತೇಯಿ ಸಮುದಾಯದಿಂದ ಭಾರೀ ಪ್ರತಿಭಟನೆ
Puttur: ಮಹಿಳೆಯ ಮಾನಭಂಗಕ್ಕೆ ಯತ್ನ; ಆರೋಪಿಗೆ ಜೈಲು ಶಿಕ್ಷೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.