ಮೂರು ಅಂತಸ್ತಿನ ಕಟ್ಟಡದಲ್ಲಿ ಬೆಂಕಿ ಅವಘಡ : ಮೂರು ಮಕ್ಕಳು ಸೇರಿ ಐದು ಮಂದಿ ಸಾವು
7-ಮಂದಿ-ರಕ್ಷಣೆ
Team Udayavani, Aug 26, 2022, 11:02 AM IST
ಉತ್ತರ ಪ್ರದೇಶ : ಮೊರಾದಾಬಾದ್ ಜಿಲ್ಲೆಯಲ್ಲಿರುವ ಮೂರು ಅಂತಸ್ತಿನ ಕಟ್ಟಡವೊಂದರಲ್ಲಿ ಬೆಂಕಿ ಅವಘಡ ಸಂಭವಿಸಿ ಐವರು ಸಾವನ್ನಪ್ಪಿರುವ ಘಟನೆ ಮೊರದಾಬಾದ್ ನಗರದ ಗಲ್‍ಶಹೀದ್ ಪ್ರದೇಶದಲ್ಲಿ ಸಂಭವಿಸಿದೆ.
ಘಟನೆಯಲ್ಲಿ ಇಬ್ಬರು ಮಹಿಳೆಯರು ಮತ್ತು ಮೂವರು ಮಕ್ಕಳು ಸಾವನ್ನಪ್ಪಿದ್ದು ಏಳು ಮಂದಿಯನ್ನು ರಕ್ಷಣೆ ಮಾಡಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ.
ಕಟ್ಟಡದ ಮೂರನೇ ಅಂತಸ್ತಿನಲ್ಲಿ ಬೆಂಕಿ ಅವಘಡ ಸಂಭವಿಸಿದ ಕೂಡಲೇ ಐದು ಅಗ್ನಿಶಾಮಕ ದಳ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿದ್ದು ಈ ವೇಳೆ ಐವರು ಸಜೀವ ದಹನಗೊಂಡಿದ್ದು ಏಳು ಮಂದಿಯನ್ನು ರಕ್ಷಣಾ ತಂಡ ರಕ್ಷಣೆ ಮಾಡಿ ಮೊರಾದಾಬಾದ್ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.
ಮೊರದಾಬಾದ್ ಜಿಲ್ಲಾಧಿಕಾರಿ ಶೈಲೇಂದ್ರ ಸಿಂಗ್ ಮತ್ತು ಹಿರಿಯ ಪೊಲೀಸ್ ಅಧೀಕ್ಷಕ ಹೇಮಂತ ಕುತಿಯಾಲ್ ಸ್ಥಳಕ್ಕೆ ಆಗಮಿಸಿ ಪರಿಹಾರ ಕಾರ್ಯಾಚರಣೆ ವೀಕ್ಷಿಸಿದರು.
ಇದನ್ನೂ ಓದಿ : Update: ಸೊನಾಲಿ ಪೋಗಟ್ ಸಾವಿನ ಪ್ರಕರಣ; ಗೋವಾದಲ್ಲಿ ಇಬ್ಬರು ಸಹಾಯಕರು ವಶಕ್ಕೆ
ಘಟನೆ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ambedkar Remarks: ಕನಸಲ್ಲೂ ಅಂಬೇಡ್ಕರ್‌ರನ್ನು ಅವಮಾನಿಸಿಲ್ಲ: ಅಮಿತ್ ಶಾ
Hydarabad: ಪುಷ್ಪ-2 ಚಿತ್ರದ ಪ್ರದರ್ಶನ ವೇಳೆ ಗಾಯಗೊಂಡಿದ್ದ ಬಾಲಕನ ಸ್ಥಿತಿ ಗಂಭೀರ
ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್
Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ
Mumbai: ಗೇಟ್‌ವೇ ಆಫ್ ಇಂಡಿಯಾ ಬಳಿ ಮುಳುಗಿದ 67 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.