ಓಖಿ ಚಂಡಮಾರುತ ಅಬ್ಬರಕ್ಕೆ 9 ಬಲಿ
Team Udayavani, Dec 1, 2017, 6:00 AM IST
ಚೆನ್ನೈ/ತಿರುವನಂತಪುರ: ಬಂಗಾಲ ಕೊಲ್ಲಿಯಲ್ಲಿ ಕಾಣಿಸಿ ಕೊಂಡಿದ್ದ ವಾಯುಭಾರ ಕುಸಿತ ಗುರುವಾರ ಹಠಾತ್ ಆಗಿ ಚಂಡ ಮಾರುತದ ರೂಪತಾಳಿದೆ. ಪರಿಣಾಮ ತಮಿಳುನಾಡು, ಕೇರಳ ಹಾಗೂ ಲಕ್ಷದ್ವೀಪದಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, 9 ಮಂದಿಯನ್ನು ಬಲಿ ಪಡೆದುಕೊಂಡಿದೆ. “ಓಖಿ’ ಚಂಡಮಾರುತ ಲಕ್ಷ ದ್ವೀಪದತ್ತ ಸಾಗಿದೆ.
ಗಾಳಿಯ ವೇಗ ಗಂಟೆಗೆ 65-75 ಕಿ.ಮೀ. ಇರಲಿದ್ದು, ಯಾವುದೇ ಕಾರಣಕ್ಕೂ ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಸೂಚಿಸಲಾಗಿದೆ. ಲಕ್ಷದ್ವೀಪ ಪ್ರವೇಶಿಸುತ್ತಿದ್ದಂತೆ, ಇದು ತೀವ್ರ ಚಂಡಮಾರುತವಾಗಿ ಮಾರ್ಪಾಡಾಗುವ ಸಾಧ್ಯತೆಯಿದ್ದು, ಎಲ್ಲ ರೀತಿಯ ಸವಾಲು ಎದುರಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ರಾಷ್ಟ್ರೀಯ ವಿಪತ್ತು ನಿರ್ವಹಣ ಪಡೆ (ಎನ್‌ಡಿಆರ್‌ಎಫ್)ಯ 2 ತಂಡ ಗಳು (60 ಮಂದಿ) ಈಗಾಗಲೇ ಕನ್ಯಾಕುಮಾರಿಯನ್ನು ತಲುಪಿದ್ದು, 47 ಮಂದಿಯ ಇನ್ನೊಂದು ತಂಡವನ್ನು ಕೇರಳದ ಕೊಚ್ಚಿಯಲ್ಲಿ ಸನ್ನದ್ಧ ಸ್ಥಿತಿಯಲ್ಲಿಡಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
5 ಸಾವು: ದಕ್ಷಿಣ ತಮಿಳುನಾಡು ಹಾಗೂ ಕೇರಳದಲ್ಲಿ ವರುಣನ ಅಬ್ಬರ ಹೆಚ್ಚಿದ್ದು, ಹಲವು ಪ್ರದೇಶಗಳು ಜಲಾವೃತವಾಗಿವೆ. ತಮಿಳುನಾಡಿನಲ್ಲಿ ನಾಲ್ವರು ಮೃತಪಟ್ಟರೆ, ಕೇರಳದಲ್ಲಿ ಆಟೋ ರಿಕ್ಷಾದ ಮೇಲೆ ಮರ ಬಿದ್ದ ಪರಿಣಾಮ, ಚಾಲಕ ಅಸುನೀಗಿದ್ದಾರೆ. ತೂತುಕುಡಿ, ತಿರುನೆಲ್ವೇಲಿ, ಕನ್ಯಾಕುಮಾರಿ, ವಿರುಧುನಗರ ಸಹಿತ 7 ಜಿಲ್ಲೆಗಳಲ್ಲಿ ಶಾಲೆ, ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಕನ್ಯಾಕುಮಾರಿ ಮತ್ತು ತೂತುಕುಡಿ ಜಿಲ್ಲೆಗಳಲ್ಲಿ 500ಕ್ಕೂ ಹೆಚ್ಚು ಮರಗಳು ಧರೆಗುಳಿದಿದ್ದು, ಹಲವಾರು ಮನೆ, ಕಟ್ಟಡಗಳಿಗೆ ಹಾನಿಯಾಗಿದೆ. ಇನ್ನೊಂದೆಡೆ, ಬುಧವಾರ ರಾತ್ರಿ ಮೀನುಗಾರಿಕೆಗೆಂದು ಸಮುದ್ರಕ್ಕಿಳಿದಿದ್ದ 13 ಮಂದಿ ಮೀನುಗಾರರು ನಾಪತ್ತೆಯಾಗಿದ್ದಾರೆ..
ಒಖೀ ಹೆಸರು ಬಂದದ್ದೆಲ್ಲಿಂದ?: ಈ ಚಂಡಮಾರುತಕ್ಕೆ “ಓಖಿ’ ಎಂದು ನಾಮಕರಣ ಮಾಡಿದ್ದು ಬಾಂಗ್ಲಾದೇಶ. ಬಂಗಾಲಿ ಭಾಷೆಯಲ್ಲಿ “ಕಣ್ಣು’ ಎಂದು ಇದರ ಅರ್ಥ.
ರಾಜ್ಯದಲ್ಲೂ ಮಳೆ: ಕೇರಳದ ದಕ್ಷಿಣ ಕರಾವಳಿಯಲ್ಲಿ “ಓಖಿ’ ಚಂಡಮಾರುತದ ಪ್ರಭಾವ ತಕ್ಕಮಟ್ಟಿಗೆ ನೆರೆಯ ಕರ್ನಾಟಕದ ಮೇಲೂ ಆಗಿದೆ. ಇದರಿಂದಾಗಿ ಅಲ್ಲಲ್ಲಿ ಹಗುರವಾದ ಮಳೆಯಾಗುತ್ತಿದ್ದು, ಇನ್ನೂ ಎರಡು-ಮೂರು ದಿನ ಇದೇ ವಾತಾವರಣ ಮುಂದುವರಿಯಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sambhal Violence: ಮೃತರ ಸಂಖ್ಯೆ ನಾಲ್ಕಕ್ಕೆ, ಇಂಟರ್ನೆಟ್ ಸ್ಥಗಿತ, ನಿಷೇಧಾಜ್ಞೆ ಜಾರಿ
Parliament Winter Session: ಇಂದಿನಿಂದ ಸಂಸತ್ ಅಧಿವೇಶನ.. ವಕ್ಫ್ ಸೇರಿ 16 ಮಸೂದೆ ಮಂಡನೆ?
ಗೂಗಲ್ ಮ್ಯಾಪ್ ನಂಬಿ ಸೇತುವೆಯಿಂದ ನದಿಗೆ ಬಿದ್ದ ಕಾರು, ಮದುವೆಗೆ ಹೊರಟಿದ್ದ ಮೂವರು ಮೃತ್ಯು
India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್ ಪೂರೈಕೆ ಶುರು
Maharashtra Election: ಅಘಾಡಿ ಸೋಲಿಗೆ ಉದ್ಧವ್,ಶರದ್ ಕಾರಣ: ಕಾಂಗ್ರೆಸ್
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Drink & Drive Case: ಕುಡಿದು ವಾಹನ ಚಾಲನೆ; ʼಮಂಜುಮ್ಮೆಲ್ ಬಾಯ್ಸ್ʼ ನಟ ಬಂಧನ
Dandeli: ಬೇಡರ ಶಿರಗೂರಿನ ರೈತರ ಗದ್ದೆಗಳಲ್ಲಿ ಮತ್ತೆ ಕಾಣಿಕೊಂಡ ಕಾಡಾನೆಗಳು
IPL Mega Auction: ಮೊದಲ ದಿನದ ಹರಾಜಿನ ಬಳಿಕ ಆರ್ ಸಿಬಿ ತಂಡ ಹೀಗಿದೆ ನೋಡಿ
Arrested: ಹೊಯ್ಸಳ ಪೊಲೀಸ್ ಮೇಲೆ ಹಲ್ಲೆ; ಬಂಧನ
Sambhal Violence: ಮೃತರ ಸಂಖ್ಯೆ ನಾಲ್ಕಕ್ಕೆ, ಇಂಟರ್ನೆಟ್ ಸ್ಥಗಿತ, ನಿಷೇಧಾಜ್ಞೆ ಜಾರಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.