ಮೋದಿ ಸಮ್ಮುಖದಲ್ಲಿ 5 ರಫೇಲ್ ಶೀಘ್ರವೇ ಸೇನೆಗೆ ಸಮರ್ಪಣೆ
Team Udayavani, Aug 22, 2020, 1:07 AM IST
ಹೊಸದಿಲ್ಲಿ: ಹರಿಯಾಣದ ಅಂಬಾಲಾ ವಾಯುನೆಲೆಗೆ ಬಂದಿಳಿದಿರುವ 5 ರಫೇಲ್ ಯುದ್ಧ ವಿಮಾನಗಳ ಸೇನಾ ಸಮರ್ಪಣಾ ಸಮಾರಂಭ ಪ್ರಧಾನಿ ನರೇಂದ್ರ ಮೋದಿ ಸಮ್ಮುಖದಲ್ಲಿ ಶೀಘ್ರವೇ ನಡೆಯಲಿದೆ. ಈ ಐತಿಹಾಸಿಕ ಸಮಾರಂಭದಲ್ಲಿ ಫ್ರಾನ್ಸ್ ರಕ್ಷಣಾ ಸಚಿವ ಫ್ಲಾರೆನ್ಸ್ ಪಾರ್ಲಿ ಗಣ್ಯ ಅತಿಥಿಯಾಗಿ ಪಾಲ್ಗೊಳ್ಳಲಿದ್ದಾರೆ ಎಂದು ಮೂಲಗಳನ್ನು ಉಲ್ಲೇಖೀಸಿ “ದ ಇಕನಾಮಿಕ್ ಟೈಮ್ಸ್’ ವರದಿ ಮಾಡಿದೆ.
ಸಮಾರಂಭದ ನಿರ್ದಿಷ್ಟ ದಿನಾಂಕ ಇನ್ನೂ ಬಹಿರಂಗವಾಗಿಲ್ಲ. ಆಗಸ್ಟ್ ಅಂತಿಮ ಅಥವಾ ಸೆಪ್ಪಂಬರ್ ಮೊದಲ ವಾರದಲ್ಲಿ ಐಎಎಫ್ನ ಗೋಲ್ಡನ್ ಆ್ಯರೋಸ್ ಸ್ಕ್ವಾಡ್ರನ್‌ಗೆ ರಫೇಲ್ ಫೈಟರ್ ಜೆಟ್‌ಗಳನ್ನು ಅಧಿಕೃತವಾಗಿ ಸೇರ್ಪಡೆಗೊ ಳಿಸಲಾಗುತ್ತಿದೆ. ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸಮಾರಂಭದಲ್ಲಿ ಪಾಲ್ಗೊಳ್ಳುವ ನಿರೀಕ್ಷೆ ಇದೆ. ರಫೇಲ್ ಯುದ್ಧ ವಿಮಾನಗಳು ಹರಿಯಾಣದ ಅತ್ಯುನ್ನತ ಬೆಟ್ಟಗಳ ಮೇಲೆ ಈಗಾಗಲೇ ಹಾರಾಟ ತರಬೇತಿ ನಡೆಸುತ್ತಿವೆ. ಭಾರತೀಯ ನುರಿತ ಪೈಲಟ್‌ಗಳು ಯುದ್ಧ ವಿಮಾನದ ಶಸ್ತ್ರಾಸ್ತ್ರಗಳ ಮೂಲಕ ಗುಂಡು ಹಾರಿಸಿ, ಯಶಸ್ವಿ ಅಭ್ಯಾಸ ನಡೆಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
J&K: ವಾಜಪೇಯಿ ಬದುಕಿದ್ದರೆ ಜಮ್ಮು ಕಾಶ್ಮೀರ ಕೇಂದ್ರಾಡಳಿತ ಪ್ರದೇಶವಾಗುತ್ತಿರಲಿಲ್ಲ: ಒಮರ್
Session:ನ.25- ಡಿ.20- ಸಂಸತ್ ಚಳಿಗಾಲದ ಅಧಿವೇಶನ;ಒಂದು ದೇಶ, ಒಂದು ಚುನಾವಣೆ ಮಸೂದೆ ಮಂಡನೆ?
DGP: ಮಹಾರಾಷ್ಟ್ರದ ನೂತನ ಡಿಜಿಪಿ ಆಗಿ ಐಪಿಎಸ್ ಅಧಿಕಾರಿ ಸಂಜಯ್ ವರ್ಮಾ ನೇಮಕ
Threat: ತಪ್ಪಾಯಿತೆಂದು ಕ್ಷಮೆ ಕೇಳಿ ಇಲ್ಲ 5ಕೋಟಿ ನೀಡಿ.. ಸಲ್ಮಾನ್ ಖಾನ್ ಗೆ ಮತ್ತೆ ಬೆದರಿಕೆ
Maharashtra poll ; ಕಣದಲ್ಲಿ ಉಳಿದಿದ್ದು 4,140 ಅಭ್ಯರ್ಥಿಗಳು
MUST WATCH
ಹೊಸ ಸೇರ್ಪಡೆ
KSOU: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ; ಪ್ರವೇಶಾತಿ ಆರಂಭ
Ayushman Bharat; ಎಲ್ಲ ಖಾಸಗಿ ಆಸ್ಪತ್ರೆಗಳ ಸೇರ್ಪಡೆಗೆ ಸಂಸದರ ಸೂಚನೆ
J&K: ವಾಜಪೇಯಿ ಬದುಕಿದ್ದರೆ ಜಮ್ಮು ಕಾಶ್ಮೀರ ಕೇಂದ್ರಾಡಳಿತ ಪ್ರದೇಶವಾಗುತ್ತಿರಲಿಲ್ಲ: ಒಮರ್
Mangaluru: ಪಿಲಿಕುಳ ಮೃಗಾಲಯಕ್ಕೆ “ಏಷ್ಯಾಟಿಕ್ ಗಂಡು ಸಿಂಹ’ ಆಗಮನ
ನ.8 ರಂದು ಕಾಪು ದಂಡತೀರ್ಥ ಪದವಿ ಪೂರ್ವ ಕಾಲೇಜಿನ ರಜತ ಮಹೋತ್ಸವ ಸಮಾರಂಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.