Road mishap: ಶಾಲಾ ವ್ಯಾನ್ – ಬಸ್ ಢಿಕ್ಕಿ; ಚಾಲಕ, ಐವರು ವಿದ್ಯಾರ್ಥಿಗಳು ಮೃತ್ಯು
Team Udayavani, Oct 30, 2023, 12:55 PM IST
ಲಕ್ನೋ: ಶಾಲಾ ವ್ಯಾನ್ ಹಾಗೂ ಶಾಲಾ ಬಸ್ ನಡುವಿನ ಮುಖಾಮುಖಿ ಢಿಕ್ಕಿಯಲ್ಲಿ ವಿದ್ಯಾರ್ಥಿಗಳು ಸೇರಿ 6 ಮಂದಿ ಮೃತಪಟ್ಟಿರುವ ಘಟನೆ ಉತ್ತರ ಪ್ರದೇಶದ ನಂಬಿಗಂಜ್ ರಸ್ತೆಯಲ್ಲಿ ಸೋಮವಾರ ಮುಂಜಾನೆ (ಅ.3೦ ರಂದು) ನಡೆದಿದೆ.
ಉತ್ತರ ಪ್ರದೇಶದ ಬುಡೌನ್ ನಲ್ಲಿ ಈ ಘಟನೆ ಸಂಭವಿಸಿದ್ದು,ಓರ್ವ ವಿದ್ಯಾರ್ಥಿ, ವ್ಯಾನ್ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದು, ಐವರು ವಿದ್ಯಾರ್ಥಿಗಳು ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದಾರೆ ಎಂದು ವರದಿ ತಿಳಿಸಿದೆ.
ಶಾಲಾ ವ್ಯಾನ್ ಎಆರ್ ಪಿಎಸ್ ಇಂಗ್ಲಿಷ್ ಸ್ಕೂಲ್ ಗೆ ಮಿಯಾನ್ ಗ್ರಾಮದಿಂದ ಬರುತ್ತಿತ್ತು. ಈ ವೇಳೆ ಅದೇ ದಾರಿಯಲ್ಲಿ ಬರುತ್ತಿದ್ದ ಬಸ್ಸಿಗೆ ಢಿಕ್ಕಿ ಹೊಡೆದ ಪರಿಣಾಮ ಈ ಘಟನೆ ಸಂಭವಿಸಿದೆ ಎಂದು ವರದಿಯಾಗಿದೆ.
ಘಟನೆಯಲ್ಲಿ 16 ಮಂದಿ ವಿದ್ಯಾರ್ಥಿಗಳಿಗೆ ಗಾಯಗಳಾಗಿತ್ತು. ಆಸ್ಪತ್ರೆಗೆ ದಾಖಲಿಸಿದ ಬಳಿಕ ಇವರಲ್ಲಿ ನಾಲ್ವರು ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.
ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲಿಸಿದ್ದಾರೆ. ಈ ಸಂಬಂಧ ದೂರು ದಾಖಲಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕನಸಲ್ಲೂ ಅಂಬೇಡ್ಕರ್‌ರನ್ನು ಅವಮಾನಿಸಿಲ್ಲ: ಅಮಿತ್
Hydarabad: ಪುಷ್ಪ-2 ಚಿತ್ರದ ಪ್ರದರ್ಶನ ವೇಳೆ ಗಾಯಗೊಂಡಿದ್ದ ಬಾಲಕನ ಸ್ಥಿತಿ ಗಂಭೀರ
ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್
Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ
Mumbai: ಗೇಟ್‌ವೇ ಆಫ್ ಇಂಡಿಯಾ ಬಳಿ ಮುಳುಗಿದ 67 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು
MUST WATCH
ಹೊಸ ಸೇರ್ಪಡೆ
MUDA Scam: ಕೇಸ್ ವಾಪಸ್‌ಗೆ ಹಣದ ಆಮಿಷ? ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ದೂರು
Priyank Kharge: ಎಲ್ಲವನ್ನೂ ನ್ಯಾಯಾಂಗವೇ ಮಾಡೋದಾದ್ರೆ ಶಾಸಕಾಂಗ ಏಕೆ?
Krishna Byre Gowda: 16.5 ಸಾವಿರ ಗ್ರಾಮಗಳು ಈಗ ಪೋಡಿ ಮುಕ್ತ
Karnataka: ಶಕ್ತಿ ಯೋಜನೆ ಬಳಿಕ ನಿತ್ಯ ಪ್ರಯಾಣಿಕರ ಸಂಖ್ಯೆ 23 ಲಕ್ಷ ಏರಿಕೆ
ಮಾಜಿ ಸೈನಿಕರಿಗೆ ಭೂಮಿ ಬದಲು ಬಡಾವಣೆ: ಸಚಿವ ಕೃಷ್ಣ ಬೈರೇಗೌಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.