5 ರಾಜ್ಯಗಳ ಚುನಾವಣೆ: ಯಾರ ಬಲ ಎಷ್ಟು?
Team Udayavani, Jan 5, 2017, 3:45 AM IST
ಬಹುನಿರೀಕ್ಷಿತ 5 ರಾಜ್ಯಗಳ ಚುನಾವಣೆಗೆ ದಿನಾಂಕ ಪ್ರಕಟವಾಗಿದೆ. ಇದರೊಂದಿಗೆ ರಾಜಕೀಯ ಪಕ್ಷಗಳ ಚುನಾವಣಾ ಚಟುವಟಿಕೆಗಳಿಗೂ ಚಾಲನೆ ಸಿಕ್ಕಿದೆ. ರಾಜಕೀಯವಾಗಿ ಅತ್ಯಂತ ಮಹತ್ವವಾಗಿರುವ, ಮುಂದಿನ ದಿನಗಳಲ್ಲಿ ಕೇಂದ್ರ ಸರ್ಕಾರದ ಹಲವು ಲೆಕ್ಕಾಚಾರಗಳಿಗೂ ಬಲ ತುಂಬಲಿರುವ ಈ 5 ರಾಜ್ಯಗಳಲ್ಲಿ ಹಾಲಿ ಯಾರ ಅಧಿಕಾರವಿದೆ, ಮುಂದಿನ ಜಿದ್ದಾಜಿದ್ದಿನ ಹಾದಿಯ ಕುರಿತ ವಿಶ್ಲೇಷಣೆ ಇಲ್ಲಿದೆ
ಉತ್ತರಪ್ರದೇಶ
ಐದು ವರ್ಷಗಳಿಂದ ಎಸ್‌ಪಿ ಅಧಿಕಾರದಲ್ಲಿದ್ದು, ಅಖೀಲೇಶ್ ಸಿಎಂ ಆಗಿದ್ದಾರೆ. ಇತ್ತೀಚೆಗೆ ಸಮಾಜವಾದಿ ಪಕ್ಷದಲ್ಲಿ ಆಂತರಿಕ ಕಚ್ಚಾಟ ಮಿತಿಮೀರಿರುವುದು ಋಣಾತ್ಮಕ ಪರಿಣಾಮ ಬೀರುವ ಸಾಧ್ಯತೆ ಇದೆ. 14 ವರ್ಷದ ಬಳಿಕ ಗದ್ದುಗೆಗೇರಲು ಬಿಜೆಪಿ ಪ್ರಯತ್ನಿಸುತ್ತಿದೆ. ಸಮಾಜ ವಾದಿಗಳ ಜಗಳದ ಸಹಾಯದಿಂದ ಮಾಯಾವತಿ ಅವರು ಮತ್ತೂಮ್ಮೆ ಅಧಿಕಾರ ಹಿಡಿಯಲು ಯತ್ನಿಸುತ್ತಿದ್ದಾರೆ. ಕಾಂಗ್ರೆಸ್ ಪಕ್ಷ ಮೈತ್ರಿಗಾಗಿ ಕಾಯುತ್ತಿದೆ. ಮೇಲ್ನೋಟಕ್ಕೆ ಬಿಜೆಪಿ- ಬಿಜೆಪಿ- ಎಸ್ಪಿ ನಡುವೆ ತ್ರಿಕೋನ ಸ್ಪರ್ಧೆ ಕಂಡುಬರುತ್ತಿದೆ.
ಪಂಜಾಬ್
ಹತ್ತು ವರ್ಷಗಳಿಂದ ಶಿರೋಮಣಿ ಅಕಾಲಿದಳ ಹಾಗೂ ಬಿಜೆಪಿ ಮೈತ್ರಿಕೂಟ ಅಧಿಕಾರದಲ್ಲಿದೆ. ಪ್ರಕಾಶ್ ಸಿಂಗ್ ಬಾದಲ್ ಸಿಎಂ, ಸರ್ಕಾರಕ್ಕೆ ಆಡಳಿತ ವಿರೋಧಿ ಅಲೆ ಕಾಡುತ್ತಿದೆ. ಅದರ ಲಾಭ ಯಾರಿಗೆ ಆಗುತ್ತದೆ ಎಂಬುದರ ಮೇಲೆ ಗೆಲುವು ನಿರ್ಧಾರವಾಗಲಿದೆ. ಅಮರೀಂದರ್ ಸಿಂಗ್ ಮುಂದಾಳತ್ವದಲ್ಲಿ ಕಾಂಗ್ರೆಸ್ ಹೋರಾಡುತ್ತಿದೆ. ಎರಡು ಪಕ್ಷಗಳ ಕೋಟೆಯಾಗಿದ್ದ ಪಂಜಾಬ್‌ನಲ್ಲಿ ಇದೇ ಮೊದಲ ಬಾರಿಗೆ ಆಮ್ ಆದ್ಮಿ ಪಕ್ಷ ಭಾರಿ ಸಂಚಲನ ಮೂಡಿಸಿದೆ. ಕಾಂಗ್ರೆಸ್- ಆಪ್ ನಡುವೆ ನೇರ ಹಣಾಹಣಿ ಏರ್ಪಟ್ಟಿದೆ.
ಉತ್ತರಾಖಂಡ
ಐದು ವರ್ಷದಿಂದ ಕಾಂಗ್ರೆಸ್ ಅಧಿಕಾರದಲ್ಲಿದೆ. ಮೊದಲು ವಿಜಯ್ ಬಹುಗುಣ, ಈಗ ಹರೀಶ್ ರಾವತ್ ಮುಖ್ಯಮಂತ್ರಿ. ಪದಚ್ಯುತಿ ಬಳಿಕ ಬಹುಗುಣ ಕಾಂಗ್ರೆಸ್ಸಿನ ವಿರುದ್ಧ ಬಂಡೆದ್ದು, 9 ಶಾಸಕರ ಜತೆ ಬಿಜೆಪಿ ಸೇರಿದ್ದಾರೆ. ಉತ್ತರಾಖಂಡದಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರಿದ ಕೇಂದ್ರ ಸರ್ಕಾರದ ವಿರುದ್ಧ ಸೇಡು ತೀರಿಸಿಕೊಳ್ಳುವ ತವಕದಲ್ಲಿ ರಾವತ್ ಇದ್ದಾರೆ. ಅವರನ್ನು ಕೆಳಗಿಳಿಸಿ ಅಧಿಕಾರಕ್ಕೇರಲು ಬಿಜೆಪಿ ಪ್ರಯತ್ನಿಸುತ್ತಿದೆ. ಈ ರಾಜ್ಯದಲ್ಲಿ ಎರಡೂ ಪಕ್ಷಗಳ ನಡುವೆ ಹಣಾಹಣಿ ಏರ್ಪಟ್ಟಿದೆ.
ಮಣಿಪುರ
15 ವರ್ಷಗಳಿಂದ ಕಾಂಗ್ರೆಸ್ ಅಧಿಕಾರದಲ್ಲಿದೆ. ಅಂದಿನಿಂದಲೂ ಓಕ್ರಮ್ ಇಬೋಬಿ ಸಿಂಗ್ ಮುಖ್ಯಮಂತ್ರಿ. ಅಸ್ಸಾಂ ಗೆಲುವಿನ ಖುಷಿಯಲ್ಲಿರುವ ಬಿಜೆಪಿ ಈ ರಾಜ್ಯದಲ್ಲೂ ಕಾಂಗ್ರೆಸ್ಸನ್ನು ಮಣಿಸಲು ಭರ್ಜರಿ ತಂತ್ರಗಳನ್ನು ರೂಪಿಸುತ್ತಿದೆ. ಮಣಿಪುರದವರೇ ಆಗಿರುವ ಬಾಕ್ಸರ್ ಮೇರಿ ಕೋಮ್ ಅವರನ್ನು ರಾಜ್ಯಸಭೆಗೆ ಕಳಿಸಿರುವ ಆ ಪಕ್ಷ, ಅವರನ್ನು ವಿಧಾನಸಭೆ ಚುನಾವಣೆಗೂ ಬಳಸಿಕೊಳ್ಳಲು ಮುಂದಾಗಿದೆ. ಅಧಿಕಾರ ಉಳಿಸಿಕೊಳ್ಳಲು ಕಾಂಗ್ರೆಸ್ ಕೂಡ ಶ್ರಮಿಸುತ್ತಿದೆ.
ಗೋವಾ
ಕಳೆದ ಐದು ವರ್ಷಗಳಿಂದ ಬಿಜೆಪಿ ಅಧಿಕಾರದಲ್ಲಿದೆ. ಆರಂಭದಲ್ಲಿ ಮನೋಹರ ಪರ್ರಿಕರ್ ಹಾಗೂ ಲಕ್ಷ್ಮೀಕಾಂತ ಪಾರ್ಸೆಕರ್ ಮುಖ್ಯಮಂತ್ರಿಯಾಗಿದ್ದಾರೆ. ಈ ರಾಜ್ಯದಲ್ಲಿ ಬಿಜೆಪಿ- ಕಾಂಗ್ರೆಸ್ ನಡುವೆ ಮೊದಲಿನಿಂದಲೂ ನೇರ ಹಣಾಹಣಿ ಇದೆ. ಆದರೆ ಈ ಬಾರಿ ಆಮ್ ಆದ್ಮಿ ಪಕ್ಷ ಕೂಡ ಅಖಾಡಕ್ಕೆ ಧುಮುಕಿ, ಅದೃಷ್ಟ ಪರೀಕ್ಷೆಗೆ ಇಳಿದಿದೆ. ಚುನಾವಣೆ ಘೋಷಣೆ ಬೆನ್ನಲ್ಲೇ, ಬಿಜೆಪಿ ಸರ್ಕಾರಕ್ಕೆ ನೀಡಿದ್ದ ಬೆಂಬಲವನ್ನು ಮಹಾರಾಷ್ಟ್ರ ಗೋಮಾಂತಕ್ ಪಾರ್ಟಿ ಹಿಂಪಡೆದು, ಕೊಂಚ ಶಾಕ್ ಕೊಟ್ಟಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Session:ನ.25- ಡಿ.20- ಸಂಸತ್ ಚಳಿಗಾಲದ ಅಧಿವೇಶನ;ಒಂದು ದೇಶ, ಒಂದು ಚುನಾವಣೆ ಮಸೂದೆ ಮಂಡನೆ?
DGP: ಮಹಾರಾಷ್ಟ್ರದ ನೂತನ ಡಿಜಿಪಿ ಆಗಿ ಐಪಿಎಸ್ ಅಧಿಕಾರಿ ಸಂಜಯ್ ವರ್ಮಾ ನೇಮಕ
Threat: ತಪ್ಪಾಯಿತೆಂದು ಕ್ಷಮೆ ಕೇಳಿ ಇಲ್ಲ 5ಕೋಟಿ ನೀಡಿ.. ಸಲ್ಮಾನ್ ಖಾನ್ ಗೆ ಮತ್ತೆ ಬೆದರಿಕೆ
Maharashtra poll ; ಕಣದಲ್ಲಿ ಉಳಿದಿದ್ದು 4,140 ಅಭ್ಯರ್ಥಿಗಳು
DMK ನಾಶವೇ ಹೊಸ ಪಕ್ಷದ ಉದ್ದೇಶ: ವಿಜಯ್ ವಿರುದ್ಧ ಸ್ಟಾಲಿನ್ ಕಿಡಿ
MUST WATCH
ಹೊಸ ಸೇರ್ಪಡೆ
Waqf Notice: ನೋಟಿಸ್ ಕಣ್ತಪ್ಪಿನ ಕಾರ್ಯವಲ್ಲ, ಸರಕಾರದ ವ್ಯವಸ್ಥಿತ ಷಡ್ಯಂತ್ರ: ವಿ.ಸುನೀಲ್
ODI Rankings: ಮತ್ತೆ ಅಗ್ರ ಹತ್ತರೊಳಗೆ ಬಂದ ಹರ್ಮನ್‌ಪ್ರೀತ್ ಕೌರ್
Kasaragod: ಸಿಡಿಲು ಬಡಿದು ಹಾನಿ; 25 ಲಕ್ಷ ರೂ. ನಷ್ಟ
Davanagere: ದೇವಸ್ಥಾನಗಳ ಆಸ್ತಿಗಳ ರಕ್ಷಣೆಗೆ ರಾಜ್ಯ ಸರ್ಕಾರ ಮುಂದಾಗಬೇಕು: ಪೇಜಾವರ ಶ್ರೀ
Shimoga; ವಿದ್ಯುತ್ ಬೇಲಿ ಸ್ಪರ್ಶಿಸಿ ಕಾಡಾನೆ ಸಾವು; ಜಮೀನು ಮಾಲೀಕನ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.