ಎನ್‌ಕೌಂಟರ್: ಐವರು ಉಗ್ರರು ಫಿನಿಶ್; 2 ವಾರಗಳ ಅವಧಿಯಲ್ಲಿ 25 ಮಂದಿಯ ಸದೆಬಡಿದ ಭದ್ರತಾ ಪಡೆ
ಸಿಆರ್‌ಪಿಎಫ್ ಮತ್ತು ಸೇನೆ ಜಂಟಿ ಕಾರ್ಯಾಚರಣೆಯಲ್ಲಿ ಯಶಸ್ಸು
Team Udayavani, Jun 11, 2020, 8:07 AM IST
ಸಾಂದರ್ಭಿಕ ಚಿತ್ರ
ಶ್ರೀನಗರ: ದಕ್ಷಿಣ ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಬುಧವಾರ ಮತ್ತೂಂದು ಮಹತ್ವದ ಕಾರ್ಯಾಚರಣೆ ನಡೆಸಿರುವ ಭದ್ರತಾ ಪಡೆ, ಐವರು ಉಗ್ರರನ್ನು ಹೊಡೆದುರುಳಿಸುವಲ್ಲಿ ಯಶಸ್ವಿಯಾಗಿದೆ. ಈ ಮೂಲಕ ಕೇವಲ ಎರಡು ವಾರಗಳ ಅವಧಿಯಲ್ಲಿ ಕಣಿವೆ ರಾಜ್ಯದಲ್ಲಿ 25 ಉಗ್ರರನ್ನು ಮುಗಿಸಿದಂತಾಗಿದೆ.
ಶೋಪಿಯಾನ್ ಜಿಲ್ಲೆಯ ಸುಗೂ ಹೆಂಧಮಾ ಪ್ರದೇಶದಲ್ಲಿ ಉಗ್ರರು ಅವಿತಿರುವ ಸುಳಿವಿನ ಮೇರೆಗೆ ಬುಧವಾರ ಮುಂಜಾನೆ ಪೊಲೀಸರು, ಸಿಆರ್‌ಪಿಎಫ್ ಹಾಗೂ ಸೇನೆಯ ಜಂಟಿ ತಂಡವು ಶೋಧ ಕಾರ್ಯಾ ಚರಣೆ ಕೈಗೊಂಡಿತ್ತು. ಬೆಳಗಿನ ಜಾವ 5.30ರ ವೇಳೆಗೆ ಏಕಾಏಕಿ ಉಗ್ರರು ಗುಂಡಿನ ಮಳೆಗರೆಯ ತೊಡ ಗಿದರು. ಆಗ ಭದ್ರತಾ ಪಡೆ ಹಾಗೂ ಉಗ್ರರ ನಡುವೆ ಗುಂಡಿನ ಚಕಮಕಿ ಆರಂಭವಾಯಿತು.
ಆರಂಭದಲ್ಲಿ ಮೂವರು ಉಗ್ರರನ್ನು ಹತ್ಯೆಗೈದರೆ, ನಂತರ ಮತ್ತೂಬ್ಬನನ್ನು ಹೊಡೆದುರುಳಿಸಲಾಯಿತು ಎಂದು ಸೇನೆಯ ವಕ್ತಾರರು ತಿಳಿಸಿದ್ದಾರೆ. ಮುಂಜಾ ಗ್ರತಾ ಕ್ರಮವಾಗಿ ಜಿಲ್ಲಾದ್ಯಂತ ಇಂಟರ್ನೆಟ್ ಸೇವೆ ಯನ್ನು ಸ್ಥಗಿತಗೊಳಿ ಸಲಾಗಿತ್ತು ಎಂದೂ ಅವರು ಮಾಹಿತಿ ನೀಡಿದ್ದಾರೆ. ಪ್ರಸಕ್ತ ವಾರದಲ್ಲಿ ಶೋಪಿ ಯಾನ್ ಜಿಲ್ಲೆಯಲ್ಲಿ ನಡೆದ ಮೂರನೇ ಎನ್ ಕೌಂಟರ್ ಇದಾಗಿದ್ದು, ಭಾನುವಾರ ಮತ್ತು ಸೋಮ ವಾರ ನಡೆದ ಗುಂಡಿನ ಚಕಮಕಿಯಲ್ಲಿ ಹಿಜ್ಬುಲ್ ಮುಜಾಹಿದೀನ್‌ನ 9 ಉಗ್ರರನ್ನು ಹೊಡೆದುರುಳಿಸಲಾಗಿತ್ತು.
ಪಾಕ್‌ನಿಂದ ಶೆಲ್ ದಾಳಿ: ಇದೇ ವೇಳೆ, ರಜೌರಿ ಜಿಲ್ಲೆಯ ನೌಶೆರಾ ವಲಯದ ಗಡಿ ನಿಯಂತ್ರಣ ರೇಖೆ ಉದ್ದಕ್ಕೂ ಬುಧವಾರ ಪಾಕಿಸ್ತಾನದ ಸೇನೆ ಶೆಲ್ ದಾಳಿ ನಡೆಸಿದೆ. ಭಾರತೀಯ ಸೇನೆಯೂ ಅದಕ್ಕೆ ತಕ್ಕ ಪ್ರತ್ಯುತ್ತರ ನೀಡಿದೆ ಎಂದು ರಕ್ಷಣಾ ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mourning: ಮನಮೋಹನ್ ಸಿಂಗ್ ನಿಧನ; ದೇಶಾದ್ಯಂತ 7 ದಿನ ಶೋಕಾಚರಣೆ ಘೋಷಿಸಿದ ಕೇಂದ್ರ ಸರಕಾರ
Sabarimala: ಸಾವಿರಾರು ಭಕ್ತರಿಂದ ಮಂಡಲ ಪೂಜೆ ವೀಕ್ಷಣೆ
Passes Away: ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ವಿಧಿವಶ
Congress ಅಧಿವೇಶನದಿಂದ ಬಿಜೆಪಿ ಆತಂಕ, ಹೀಗಾಗಿ ಅಪಪ್ರಚಾರ: ಸುರ್ಜೇವಾಲಾ
Critical: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಆರೋಗ್ಯದಲ್ಲಿ ಏರುಪೇರು; ಏಮ್ಸ್ಗೆ ದಾಖಲು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.