ಪಿಯು ಹಂತದ 5000 ವಿದ್ಯಾರ್ಥಿಗಳಿಗೆ ರಿಲಯನ್ಸ್ ಫೌಂಡೇಷನ್ ವಿದ್ಯಾರ್ಥಿವೇತನ
Team Udayavani, May 23, 2023, 5:08 PM IST
ಮುಂಬಯಿ: ರಿಲಯನ್ಸ್ ಫೌಂಡೇಷನ್ ನಿಂದ 27 ರಾಜ್ಯಗಳ 5 ಸಾವಿರ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನವನ್ನು ನೀಡಲಾಗುತ್ತಿದೆ.
ಪದವಿ ಶಿಕ್ಷಣದ ಮೊದಲ ವರ್ಷದಲ್ಲಿರುವ ಈ ವಿದ್ಯಾರ್ಥಿಗಳಿಗೆ ತಮ್ಮ ವ್ಯಾಸಂಗದ ಅವಧಿಯಲ್ಲಿ ಸುಮಾರು 2 ಲಕ್ಷ ರೂಪಾಯಿ ನೀಡಲಾಗುವುದು. ಮುಂದಿನ 10 ವರ್ಷಗಳಲ್ಲಿ 50 ಸಾವಿರ ವಿದ್ಯಾರ್ಥಿವೇತನವನ್ನು ನೀಡುವುದಾಗಿ ರಿಲಯನ್ಸ್ ಫೌಂಡೇಷನ್ 2022ರ ಡಿಸೆಂಬರ್ ನಲ್ಲಿ ಘೋಷಣೆ ಮಾಡಿತು. ವಿದ್ಯಾರ್ಥಿವೇತನ ನೀಡುವುದರ ಜೊತೆಗೆ ಆಯ್ಕೆಯಾದ ವಿದ್ಯಾರ್ಥಿಗಳನ್ನು ಹಳೆಯ ವಿದ್ಯಾರ್ಥಿಗಳ ಜಾಲಕ್ಕೆ ಜೋಡಣೆ ಮಾಡಲಾಗುತ್ತದೆ.
ರಿಲಯನ್ಸ್ ಫೌಂಡೇಷನ್‌ನ ಸಿಇಒ ಜಗನ್ನಾಥ್ ಕುಮಾರ್ ಮಾತನಾಡಿ, “ರಿಲಯನ್ಸ್ ಫೌಂಡೇಷನ್ ವಿದ್ಯಾರ್ಥಿವೇತನವು ಯುವ ಜನರ ಕನಸುಗಳಿಗೆ ರೆಕ್ಕೆಗಳನ್ನು ನೀಡುತ್ತದೆ ಎಂದು ನಾವು ಭಾವಿಸುತ್ತೇವೆ. ಭಾರತದ ವಿವಿಧ ಭೌಗೋಳಿಕ ಪ್ರದೇಶಗಳಲ್ಲಿ ವಿವಿಧ ವಿಷಯಗಳನ್ನು ಅಧ್ಯಯನ ಮಾಡುವ ವಿದ್ಯಾರ್ಥಿಗಳಿಂದ ವಿದ್ಯಾರ್ಥಿವೇತನಕ್ಕೆ ಆಯ್ಕೆ ಮಾಡಲಾಗುತ್ತದೆ. ಹೆಣ್ಣು ಮತ್ತು ಗಂಡು ಮಕ್ಕಳಿಗೆ ಸಮಾನ ಪ್ರಾತಿನಿಧ್ಯ ನೀಡಲಾಗಿದೆ. ಆಯ್ಕೆಯಾದ ವಿದ್ಯಾರ್ಥಿಗಳನ್ನು ನಾವು ಅಭಿನಂದಿಸುತ್ತೇವೆ ಮತ್ತು ಅವರು ತಮ್ಮ ಕನಸುಗಳನ್ನು ನನಸಾಗಿಸುವ ಜೊತೆಗೆ ಭಾರತದ ಪ್ರಗತಿಗೆ ಕೊಡುಗೆ ನೀಡುತ್ತಾರೆ ಎಂಬ ವಿಶ್ವಾಸವಿದೆ,” ಎಂದು ಹೇಳಿದ್ದಾರೆ.
ರಿಲಯನ್ಸ್ ಫೌಂಡೇಷನ್ ನಿಂದ ಪದವಿಪೂರ್ವ ವಿದ್ಯಾರ್ಥಿವೇತನವನ್ನು ವಿದ್ಯಾರ್ಥಿಯ ಅರ್ಹತೆ ಮತ್ತು ಆರ್ಥಿಕ ಸ್ಥಿತಿಯ ಆಧಾರದ ಮೇಲೆ ನೀಡಲಾಗುತ್ತದೆ. ವಿದ್ಯಾರ್ಥಿಗಳು ಇಂಜಿನಿಯರಿಂಗ್/ತಂತ್ರಜ್ಞಾನ, ವಿಜ್ಞಾನ, ವೈದ್ಯಕೀಯ, ವಾಣಿಜ್ಯ, ಕಲೆ, ವ್ಯಾಪಾರ/ವ್ಯವಸ್ಥಾಪನೆ, ಕಂಪ್ಯೂಟರ್, ಕಾನೂನು, ಆರ್ಕಿಟೆಕ್ಚರ್ ಮುಂತಾದ ಕ್ಷೇತ್ರಗಳಿಂದ ಈ ವರ್ಷಕ್ಕೆ ಆಯ್ಕೆಯಾಗಿದ್ದಾರೆ. 2022-23ರ ಅವಧಿಗೆ 4,984 ಶಿಕ್ಷಣ ಸಂಸ್ಥೆಗಳಲ್ಲಿ ಅಧ್ಯಯನ ಮಾಡುತ್ತಿರುವ ಸುಮಾರು 40,000 ಅರ್ಜಿದಾರರಿಂದ 5,000 ವಿದ್ಯಾರ್ಥಿಗಳನ್ನು ಆಯ್ಕೆ ಮಾಡಲಾಗಿದೆ. ಯಶಸ್ವಿ
ವಿದ್ಯಾರ್ಥಿಗಳಲ್ಲಿ ಶೇ 51ರಷ್ಟು ಬಾಲಕಿಯರು, 99 ದಿವ್ಯಾಂಗರು ವಿದ್ಯಾರ್ಥಿ ವೇತನವನ್ನು ಪಡೆದಿದ್ದಾರೆ. ಕಟ್ಟುನಿಟ್ಟಾದ ಮಾನದಂಡಗಳ ಆಧಾರದ ಮೇಲೆ ಆಯ್ಕೆಯನ್ನು ಮಾಡಲಾಗುತ್ತದೆ, ಇವುಗಳಲ್ಲಿ ‘ಅರ್ಹತಾ ಪರೀಕ್ಷೆ’, 12ನೇ ತರಗತಿ (ದ್ವಿತೀಯ ಪಿಯುಸಿ) ಅಂಕಗಳು ಮತ್ತು ಇತರ ಮಾನದಂಡಗಳು ಸೇರಿವೆ.
ವಿದ್ಯಾರ್ಥಿಗಳಿಗೆ ಅವರ ಆಯ್ಕೆಯ ಬಗ್ಗೆ ನೇರ ಮಾಹಿತಿ ನೀಡಲಾಗುವುದು. ಅರ್ಜಿದಾರರು www.reliancefoundation.org ನಲ್ಲಿ ಫಲಿತಾಂಶಗಳನ್ನು ಪರಿಶೀಲಿಸಬಹುದು.
2022-23ರ ಅವಧಿಗೆ ಆಯ್ಕೆಯಾದ ರಿಲಯನ್ಸ್ ಫೌಂಡೇಷನ್ ಸ್ನಾತಕೋತ್ತರ ಕಲಿಕಾರ್ಥಿಗಳ ಪಟ್ಟಿಯನ್ನು ಜುಲೈನಲ್ಲಿ ಪ್ರಕಟಿಸುವ ನಿರೀಕ್ಷೆಯಿದೆ. ರಿಲಯನ್ಸ್ ಫೌಂಡೇಷನ್ ಪದವಿಪೂರ್ವ ಸ್ಕಾಲರ್‌ಶಿಪ್ ಸೆಷನ್ 2023-24ಕ್ಕಾಗಿ ಅರ್ಜಿಗಳನ್ನು ಮುಂಬರುವ ತಿಂಗಳಲ್ಲಿ ಆಹ್ವಾನಿಸಬಹುದು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Birthday Party: ಬರ್ತ್‌ಡೇ ಪಾರ್ಟಿ ಮುಗಿಸಿ ಬರುತ್ತಿದ್ದ ಮೂವರನ್ನು ಗುಂಡಿಕ್ಕಿ ಹತ್ಯೆ…
Arrested: ನಟ ಸುನಿಲ್ ಪಾಲ್, ಮುಸ್ತಾಕ್ ಅಪಹರಣ; ಎನ್‌ಕೌಂಟರ್ ಮೂಲಕ ಪ್ರಮುಖ ಆರೋಪಿ ಬಂಧನ
ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ
Jaipur: ಶ್ರೀಮಂತ ಪುರುಷರನ್ನು ಮೋಡಿ ಮಾಡುವ ʼಕಿಲಾಡಿ ವಧುʼ; ಇವಳು ಪೀಕಿದ್ದು ಕೋಟಿ ಕೋಟಿ ಹಣ
Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್ ಹೆಸರಲ್ಲಿ ವಂಚನೆ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Birthday Party: ಬರ್ತ್‌ಡೇ ಪಾರ್ಟಿ ಮುಗಿಸಿ ಬರುತ್ತಿದ್ದ ಮೂವರನ್ನು ಗುಂಡಿಕ್ಕಿ ಹತ್ಯೆ…
Belagavi; ಬಹಳ ನೋವಾಗಿದೆ, ನೂರು ಸಿ.ಟಿ.ರವಿ ಬಂದರೂ ಹೆದರುವುದಿಲ್ಲ: ಲಕ್ಷ್ಮೀ ಹೆಬ್ಬಾಳಕರ
Cricket: ಚಾಂಪಿಯನ್ಸ್ ಟ್ರೋಫಿ ವೇಳಾಪಟ್ಟಿ ಅಂತಿಮ; ಭಾರತದ ಪಂದ್ಯಗಳಿಗೆ ಯುಎಇ ಆತಿಥ್ಯ
Arrested: ನಟ ಸುನಿಲ್ ಪಾಲ್, ಮುಸ್ತಾಕ್ ಅಪಹರಣ; ಎನ್‌ಕೌಂಟರ್ ಮೂಲಕ ಪ್ರಮುಖ ಆರೋಪಿ ಬಂಧನ
Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.