ಉತ್ತರ, ಪೂರ್ವ ಭಾರತದಲ್ಲಿ ಬಿರುಗಾಳಿ ಮಳೆಗೆ 54 ಸಾವು

Team Udayavani, May 30, 2018, 10:57 AM IST

uttara.jpg

ಹೊಸದಿಲ್ಲಿ: ವಾಡಿಕೆಗಿಂತ ಮೂರು ದಿನಗಳ ಮೊದಲೇ ಕೇರಳಕ್ಕೆ ಮುಂಗಾರು ಪ್ರವೇಶಿಸಿದ್ದರೆ, ಅದಕ್ಕೆ ಪೂರಕವಾಗಿ ದೇಶದ ಉತ್ತರ ಮತ್ತು ಪೂರ್ವ ಭಾಗಗಳ 5 ರಾಜ್ಯಗಳಲ್ಲಿ ಮಂಗಳವಾರ ಧೂಳು ಬಿರುಗಾಳಿ, ಮಳೆ, ಗುಡುಗು ಸಿಡಿಲಿಂದಾಗಿ 54 ಮಂದಿ ಅಸುನೀಗಿದ್ದಾರೆ. 

ಬಿಹಾರದಲ್ಲಿ 19, ಉತ್ತರ ಪ್ರದೇಶದಲ್ಲಿ 17, ಜಾರ್ಖಂಡ್‌ನ‌ಲ್ಲಿ 12, ಮಧ್ಯಪ್ರದೇಶದಲ್ಲಿ 4 ಹಾಗೂ ಪಶ್ಚಿಮ ಬಂಗಾಲದಲ್ಲಿ 2 ಮಂದಿ ಅಸುನೀಗಿದ್ದಾರೆ. ಬಿಹಾರದಲ್ಲಿ ಧಾರಾಕಾರ ಮಳೆ, ಗುಡುಗು ಮತ್ತು ಸಿಡಿಲಿನಿಂದಾಗಿ ಹಾನಿ ಉಂಟಾಗಿದೆ. ಗಂಗಾ ನದಿಗೆ ಹೊಂದಿಕೊಂಡಂತಿರುವ ನಾಲ್ಕು ಜಿಲ್ಲೆಗಳಲ್ಲಿ 19 ಮಂದಿ ಅಸುನೀಗಿದ್ದು, ಮೃತರಲ್ಲಿ ಮಹಿಳೆಯರು, ಮಕ್ಕಳೂ ಸೇರಿದ್ದಾರೆ. ಗಯಾ ಜಿಲ್ಲೆಯಲ್ಲಿ ಛಾವಣಿ ಬಿದ್ದು, ಮರ ಮುರಿದು ಬಿದ್ದು ಐವರು ಅಸುನೀಗಿದ್ದಾರೆ. 

ಇನ್ನು ಉತ್ತರ ಪ್ರದೇಶದಲ್ಲಿ ಪ್ರಾಕೃತಿಕ ವಿಪತ್ತಿನಲ್ಲಿ ಒಟ್ಟು 17 ಮಂದಿ ಅಸುನೀಗಿ, 10 ಮಂದಿ ಗಾಯಗೊಂಡಿದ್ದಾರೆ. ಗುಡುಗು-ಸಿಡಿಲಿನಿಂದ ಕೂಡಿದ ಮಳೆಯ ಜತೆ ಪ್ರತಿ ಗಂಟೆಗೆ 50ರಿಂದ 70 ಕಿಮೀ ವೇಗದಲ್ಲಿ ಗಾಳಿಯೂ ಬೀಸುತ್ತಿತ್ತು. ಹೀಗಾಗಿ ಎಲ್ಲೆಡೆ ವಿದ್ಯುತ್‌ ಕಂಬಗಳು, ಮರಗಳು ಉರುಳಿ ಬಿದ್ದಿವೆ. ಉನ್ನಾವ್‌ ಜಿಲ್ಲೆಯಲ್ಲಿ 5, ಕನೌಜ್‌ ಮತ್ತು ರಾಯ್‌ಬರೇಲಿಯಲ್ಲಿ ತಲಾ ಮೂವರು, ಕಾನ್ಪುರ, ಫಿಲಿಭಿತ್‌, ಗೊಂಡಾ ಜಿಲ್ಲೆಗಳಲ್ಲಿ ತಲಾ ಇಬ್ಬರು ಅಸುನೀಗಿದ್ದಾರೆ.

ಮಳೆಯಿಂದ ತೊಂದರೆಗೆ ಈಡಾಗಿರುವ ಜಿಲ್ಲೆಗಳಲ್ಲಿ ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆಗಳು ಶುರುವಾಗಿವೆ. ಮನೆ ಕಳೆದುಕೊಂಡವರಿಗೆ ಶಿಬಿರಗಳನ್ನು ಆರಂಭಿಸುವಂತೆ ಜಿಲ್ಲಾಧಿಕಾರಿಗಳಿಗೆ ಉತ್ತರ ಪ್ರದೇಶ ಸರಕಾರ ಆದೇಶಿಸಿದೆ. ಬಿಹಾರ ಮತ್ತು ಉತ್ತರ ಪ್ರದೇಶಗಳಲ್ಲಿ ಗಾಳಿ, ಗುಡುಗು-ಸಿಡಿಲು ಸಹಿತ ಮಳೆ ಮುಂದಿನ ಕೆಲ ದಿನಗಳ ಕಾಲ ಬೀಳಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. 

ಅರಣ್ಯಾಧಿಕಾರಿಗಳ ನಿಟ್ಟುಸಿರು: ಇದೇ ವೇಳೆ ಉತ್ತರ ಪ್ರದೇಶದ ಪೂರ್ವ ಭಾಗಗಳಲ್ಲಿ ಮಂಗಳವಾರ ಗರಿಷ್ಠ ತಾಪಮಾನ 47 ಡಿಗ್ರಿ ಸೆಲ್ಸಿಯಸ್‌ ದಾಖಲಾಗಿತ್ತು. ಇನ್ನು ಬೇಸಗೆ ಅವಧಿಯಲ್ಲಿ ಕಾಡ್ಗಿಚ್ಚಿನಿಂದ ಕಂಗೆಟ್ಟಿದ್ದ ಉತ್ತರಾಖಂಡದ ಹಲವು ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗಿದೆ. ಹೀಗಾಗಿ ಕಾಡ್ಗಿಚ್ಚು ನಿಯಂತ್ರಿಸುವಲ್ಲಿ ಹರಸಾಹಸ ನಡೆಸುತ್ತಿದ್ದ ಅರಣ್ಯ ಇಲಾಖೆ ಅಧಿಕಾರಿಗಳು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ.

ಜಾರ್ಖಂಡ್‌ನ‌ ಫ‌ಕುರ್‌ ಮತ್ತು ಛತ್ರಾ ಜಿಲ್ಲೆಗಳಲ್ಲಿ ಸಿಡಿಲು ಬಡಿದು 12 ಮಂದಿ ಸಾವನ್ನಪ್ಪಿದ್ದಾರೆ. ಮಧ್ಯ ಪ್ರದೇಶದಲ್ಲಿ ಮಳೆ ಪ್ರಕೋಪಕ್ಕೆ ನಾಲ್ವರು ಸಾವನ್ನಪ್ಪಿದರೆ, ಪಶ್ಚಿಮ ಬಂಗಾಳದಲ್ಲಿ ಇಬ್ಬರು ಕೊನೆಯುಸಿರೆಳೆದಿದ್ದಾರೆ. ಒಟ್ಟಾರೆಯಾಗಿ ಈ ತಿಂಗಳ ಆರಂಭದಿಂದ ಮಂಗಳವಾರ ಸಂಜೆಯ ವರೆಗೆ ಉತ್ತರ ಭಾರತದಲ್ಲಿ ಪ್ರಾಕೃತಿಕ ವಿಕೋಪಕ್ಕೆ ಒಟ್ಟು 290 ಮಂದಿ ಅಸುನೀಗಿದ್ದಾರೆ.

ಟಾಪ್ ನ್ಯೂಸ್

ಲೋಕೋಪಯೋಗಿ To ಸಾಹಿತ್ಯಕ್ಷೇತ್ರ: ಚಲನಚಿತ್ರದ ಮೂಲಕ ಖ್ಯಾತಿಗಳಿಸಿದ ನಾ.ಡಿಸೋಜ ಕಾದಂಬರಿಗಳು…

ಲೋಕೋಪಯೋಗಿ To ಸಾಹಿತ್ಯಕ್ಷೇತ್ರ: ಚಲನಚಿತ್ರದ ಮೂಲಕ ಖ್ಯಾತಿಗಳಿಸಿದ ನಾ.ಡಿಸೋಜ ಕಾದಂಬರಿಗಳು…

Actor Darshan: ಮೈಸೂರಿಗೆ ತೆರಳಲು ದರ್ಶನ್‌ಗೆ ನೀಡಿದ್ದ 2 ವಾರಗಳ ಗಡುವು ಅಂತ್ಯ

Actor Darshan: ಮೈಸೂರಿಗೆ ತೆರಳಲು ದರ್ಶನ್‌ಗೆ ನೀಡಿದ್ದ 2 ವಾರಗಳ ಗಡುವು ಅಂತ್ಯ

India’s first case of HMPV infection detected in Bangalore

HMPV Virus: ಭಾರತದ ಮೊದಲ ಎಚ್‌ಎಂಪಿವಿ ಸೋಂಕು ಪ್ರಕರಣ ಬೆಂಗಳೂರಿನಲ್ಲಿ ಪತ್ತೆ

Toxic: ಯಶ್‌ ಬರ್ತ್‌ ಡೇಗೆ ʼಟಾಕ್ಸಿಕ್‌ʼನಿಂದ ಸಿಗಲಿದೆ ಬಿಗ್‌ ಅಪ್ಡೇಟ್; ಫ್ಯಾನ್ಸ್‌ ಥ್ರಿಲ್

Toxic: ಯಶ್‌ ಬರ್ತ್‌ ಡೇಗೆ ʼಟಾಕ್ಸಿಕ್‌ʼನಿಂದ ಸಿಗಲಿದೆ ಬಿಗ್‌ ಅಪ್ಡೇಟ್; ಫ್ಯಾನ್ಸ್‌ ಥ್ರಿಲ್

Hunasuru: ಬೊಲೆರೋ ವಾಹನಕ್ಕೆ ಡಿಕ್ಕಿ ಹೊಡೆದು ನದಿಗೆ ಬಿದ್ದ ಬೈಕ್ ಸವಾರ ಮೃತ್ಯು

Hunasuru: ಬೊಲೆರೋ ವಾಹನಕ್ಕೆ ಡಿಕ್ಕಿ ಹೊಡೆದು ನದಿಗೆ ಬಿದ್ದ ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

Chhattisgarh: ಪತ್ರಕರ್ತ ಮುಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಹೈದರಾಬಾದ್‌ನಲ್ಲಿ ಬಂಧನ

Chhattisgarh: ಪತ್ರಕರ್ತ ಮುಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಹೈದರಾಬಾದ್‌ನಲ್ಲಿ ಬಂಧನ

Honnavara: ಲಾರಿ ಪಲ್ಟಿಯಾಗಿ ಇಬ್ಬರು ಸಾವು; ಮೂವರಿಗೆ ಗಾಯ

Honnavara: ಲಾರಿ ಪಲ್ಟಿಯಾಗಿ ಇಬ್ಬರು ಸಾವು; ಮೂವರಿಗೆ ಗಾಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chhattisgarh: ಪತ್ರಕರ್ತ ಮುಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಹೈದರಾಬಾದ್‌ನಲ್ಲಿ ಬಂಧನ

Chhattisgarh: ಪತ್ರಕರ್ತ ಮುಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಹೈದರಾಬಾದ್‌ನಲ್ಲಿ ಬಂಧನ

ಅಪ್ಪನನ್ನೇ ಬದಲಿಸಿದ ಅತಿಶಿ: ಪ್ರಿಯಾಂಕಾ ಬೆನ್ನಲ್ಲೇ ವಿವಾದಾತ್ಮಕ ಹೇಳಿಕೆ ನೀಡಿದ ಬಿಧುರಿ

ಅಪ್ಪನನ್ನೇ ಬದಲಿಸಿದ ಅತಿಶಿ: ಪ್ರಿಯಾಂಕಾ ಬೆನ್ನಲ್ಲೇ ವಿವಾದಾತ್ಮಕ ಹೇಳಿಕೆ ನೀಡಿದ ಬಿಧುರಿ

Prashant Kishor

Prashant Kishor: ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಪ್ರಶಾಂತ್‌ ಕಿಶೋರ್‌ ಬಂಧನ

supreme-Court

Protect: ಹೆತ್ತವರನ್ನು ಸಾಕದಿದ್ದರೆ ಗಿಫ್ಟ್ ಡೀಡ್‌ ರದ್ದು: ಸುಪ್ರೀಂ ಕೋರ್ಟ್‌

ವಲಸೆ ನಿಯಮ ಸಡಿಲಿಸಿದ ನ್ಯೂಜಿಲ್ಯಾಂಡ್‌ ಸರಕಾರ‌; ಭಾರತೀಯರಿಗೆ ಹೆಚ್ಚಿನ ಅವಕಾಶ ಸಾಧ್ಯತೆ

ವಲಸೆ ನಿಯಮ ಸಡಿಲಿಸಿದ ನ್ಯೂಜಿಲ್ಯಾಂಡ್‌ ಸರಕಾರ‌; ಭಾರತೀಯರಿಗೆ ಹೆಚ್ಚಿನ ಅವಕಾಶ ಸಾಧ್ಯತೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Bengaluru: ಸೆಂಟ್ರಿಂಗ್‌ ಮರ ಬಿದ್ದು ಬಾಲಕಿ ಸಾವು: ಎಂಜಿನಿಯರ್‌ ವಶಕ್ಕೆ

Bengaluru: ಸೆಂಟ್ರಿಂಗ್‌ ಮರ ಬಿದ್ದು ಬಾಲಕಿ ಸಾವು: ಎಂಜಿನಿಯರ್‌ ವಶಕ್ಕೆ

ಲೋಕೋಪಯೋಗಿ To ಸಾಹಿತ್ಯಕ್ಷೇತ್ರ: ಚಲನಚಿತ್ರದ ಮೂಲಕ ಖ್ಯಾತಿಗಳಿಸಿದ ನಾ.ಡಿಸೋಜ ಕಾದಂಬರಿಗಳು…

ಲೋಕೋಪಯೋಗಿ To ಸಾಹಿತ್ಯಕ್ಷೇತ್ರ: ಚಲನಚಿತ್ರದ ಮೂಲಕ ಖ್ಯಾತಿಗಳಿಸಿದ ನಾ.ಡಿಸೋಜ ಕಾದಂಬರಿಗಳು…

Actor Darshan: ಮೈಸೂರಿಗೆ ತೆರಳಲು ದರ್ಶನ್‌ಗೆ ನೀಡಿದ್ದ 2 ವಾರಗಳ ಗಡುವು ಅಂತ್ಯ

Actor Darshan: ಮೈಸೂರಿಗೆ ತೆರಳಲು ದರ್ಶನ್‌ಗೆ ನೀಡಿದ್ದ 2 ವಾರಗಳ ಗಡುವು ಅಂತ್ಯ

India’s first case of HMPV infection detected in Bangalore

HMPV Virus: ಭಾರತದ ಮೊದಲ ಎಚ್‌ಎಂಪಿವಿ ಸೋಂಕು ಪ್ರಕರಣ ಬೆಂಗಳೂರಿನಲ್ಲಿ ಪತ್ತೆ

Toxic: ಯಶ್‌ ಬರ್ತ್‌ ಡೇಗೆ ʼಟಾಕ್ಸಿಕ್‌ʼನಿಂದ ಸಿಗಲಿದೆ ಬಿಗ್‌ ಅಪ್ಡೇಟ್; ಫ್ಯಾನ್ಸ್‌ ಥ್ರಿಲ್

Toxic: ಯಶ್‌ ಬರ್ತ್‌ ಡೇಗೆ ʼಟಾಕ್ಸಿಕ್‌ʼನಿಂದ ಸಿಗಲಿದೆ ಬಿಗ್‌ ಅಪ್ಡೇಟ್; ಫ್ಯಾನ್ಸ್‌ ಥ್ರಿಲ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.