13 ರಂದು ದೇಶವ್ಯಾಪಿ ಪೆಟ್ರೋಲ್ ಬಂಕ್ ಮುಷ್ಕರ
Team Udayavani, Oct 8, 2017, 6:10 AM IST
ಮುಂಬೈ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಇದೇ 13ರಂದು ಪೆಟ್ರೋಲಿಯಂ ಡೀಲರ್ಗಳು ದೇಶವ್ಯಾಪಿ ಮುಷ್ಕರ ನಡೆಸಲಿದ್ದಾರೆ.
ಡೀಲರ್ಗಳ ಸಂಘಟನೆಯಾಗಿರುವ ಯುನೈಟೆಡ್ ಪೆಟ್ರೋಲಿಯಂ ಫ್ರಂಟ್ ಶನಿವಾರ ಈ ಕುರಿತು ಮಾಹಿತಿ ನೀಡಿದೆ. “13ರಂದು ದೇಶಾದ್ಯಂತ ತೈಲ ಕಂಪನಿ ಡೀಲರ್ಗಳ ಮುಷ್ಕರಕ್ಕೆ ಕರೆ ನೀಡಿದ್ದೇವೆ. ಉತ್ತಮ ಮಾರ್ಜಿನ್ ನೀಡಬೇಕು ಮತ್ತು ಪೆಟ್ರೋಲಿಯಂ ಉತ್ಪನ್ನಗಳನ್ನೂ ಸರಕು ಮತ್ತು ಸೇವಾ ತೆರಿಗೆ(ಜಿಎಸ್ಟಿ) ವ್ಯಾಪ್ತಿಗೆ ತರಬೇಕು ಎಂಬ ಬೇಡಿಕೆ ಮುಂದಿಟ್ಟಿದ್ದೇವೆ. ಇವು ಪೂರೈಸದಿದ್ದರೆ ಅಕ್ಟೋಬರ್ 27ರಿಂದ ಅನಿರ್ದಿಷ್ಟಾವಧಿವರೆಗೆ ತೈಲ ಖರೀದಿ ಮತ್ತು ಮಾರಾಟವನ್ನು ಸ್ಥಗಿತಗೊಳಿಸಲಾಗುತ್ತದೆ’ ಎಂದು ಸಂಘಟನೆ ತಿಳಿಸಿದೆ. ಯುನೈಟೆಡ್ ಪೆಟ್ರೋಲಿಯಂ ಫ್ರಂಟ್ ಅಡಿಯಲ್ಲಿ ಒಟ್ಟು 54,000 ಡೀಲರುಗಳಿದ್ದು, ಇವರೆಲ್ಲರೂ ಮುಷ್ಕರದಲ್ಲಿ ಭಾಗಿಯಾಗಲಿದ್ದಾರೆ.
ಕಳೆದ ವರ್ಷ ನವೆಂಬರ್ನಲ್ಲಿ ಹಲವು ಬೇಡಿಕೆಯನ್ನು ಮುಂದಿಡಲಾಗಿತ್ತಾದರೂ ತೈಲ ಕಂಪನಿಗಳು ಇದನ್ನು ನಿರ್ಲಕ್ಷಿಸಿವೆ ಎಂದು ಆರೋಪಿಸಿರುವ ಡೀಲರ್ಗಳು, ಪ್ರತಿ ತಿಂಗಳಿಗೆ ಡೀಲರ್ ಮಾರ್ಜಿನ್ ಹೆಚ್ಚಳ, ಹೂಡಿಕೆಗೆ ಸೂಕ್ತ ಲಾಭ, ಮಾನವ ಸಂಪನ್ಮೂಲ ಸಮಸ್ಯೆಗಳ ಪರಿಹಾರ, ನಷ್ಟ ನಿರ್ವಹಣೆ ಅಧ್ಯಯನ ಹಾಗೂ ಸಾರಿಗೆ ಮತ್ತು ಎಥೆನಾಲ್ ಮಿಶ್ರಣಕ್ಕೆ ಸಂಬಂಧಿಸಿದ ಸಮಸ್ಯೆ ನಿವಾರಣೆಗೆ ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.