5,8,9,11ನೇ ತರಗತಿ ಪರೀಕ್ಷೆ ಫಲಿತಾಂಶಕ್ಕೆ ಸುಪ್ರೀಂ ತಡೆ; ಕರ್ನಾಟಕ ಸರ್ಕಾರಕ್ಕೆ ತರಾಟೆ
ಪರೀಕ್ಷೆ ನಡೆಸುವ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ತಡೆ
Team Udayavani, Apr 8, 2024, 1:18 PM IST
ಹೊಸದಿಲ್ಲಿ: 5, 8, 9 ಮತ್ತು 11 ನೇ ತರಗತಿಗಳ ಬೋರ್ಡ್ ಪರೀಕ್ಷೆಗಳ ಫಲಿತಾಂಶಗಳನ್ನು ಪ್ರಕಟಿಸಲು ಸುಪ್ರೀಂ ಕೋರ್ಟ್ ಸೋಮವಾರ ತಡೆಯಾಜ್ಞೆ ನೀಡಿದೆ.
ರಾಜ್ಯದ ಪಠ್ಯಕ್ರಮ ಅನುಸರಿಸುವ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳ 5, 8, 9 ಮತ್ತು 11ನೇ ತರಗತಿಗಳಿಗೆ ಬೋರ್ಡ್ ಪರೀಕ್ಷೆ ನಡೆಸಲು ಅನುಮತಿ ನೀಡಿರುವ ಕರ್ನಾಟಕ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ಸೋಮವಾರ ತಡೆಯಾಜ್ಞೆ ನೀಡಿದೆ.
“ನೀವು ದೇಶದ ಸಂಪೂರ್ಣ ಶಿಕ್ಷಣ ವ್ಯವಸ್ಥೆಯನ್ನು ಹಾಳು ಮಾಡಿದ್ದೀರಿ. ಈಗ ನೀವು ಅದನ್ನು ಸಂಕೀರ್ಣಗೊಳಿಸಲು ಬಯಸುತ್ತೀರಿ. ದಯವಿಟ್ಟು ಹಾಗೆ ಮಾಡಬೇಡಿ” ಎಂದು ಸುಪ್ರೀಂ ಕೋರ್ಟ್ ಕರ್ನಾಟಕ ಸರ್ಕಾರದ ವಕೀಲರಿಗೆ ತೀವ್ರ ತರಾಟೆಗೆ ತೆಗೆದುಕೊಂಡಿದೆ.
ನ್ಯಾಯಮೂರ್ತಿಗಳಾದ ಬೇಲಾ ಎಂ ತ್ರಿವೇದಿ ಮತ್ತು ಪಂಕಜ್ ಮಿಥಾಲ್ ಅವರನ್ನೊಳಗೊಂಡ ನ್ಯಾಯಪೀಠವು ಈ ತರಗತಿಗಳ ಪರೀಕ್ಷೆಗಳ ಫಲಿತಾಂಶಗಳ ಘೋಷಣೆಗೆ ತಡೆ ನೀಡಿದೆ. ಈ ಹಿಂದೆ ಕರ್ನಾಟಕ ಹೈಕೋರ್ಟ್ ನ ನಿರ್ದೇಶನದ ಮೇರೆಗೆ ಕಳೆದ ತಿಂಗಳು ಬೋರ್ಡ್ ಪರೀಕ್ಷೆ ನಡೆಸಲಾಗಿತ್ತು.
5, 8, 9 ಮತ್ತು 11ನೇ ತರಗತಿ ಬೋರ್ಡ್ ಪರೀಕ್ಷೆ ನಡೆಸುವ ರಾಜ್ಯ ಸರ್ಕಾರದ ನಿರ್ಧಾರವನ್ನು ಮಾರ್ಚ್ 22ರಂದು ನ್ಯಾಯಮೂರ್ತಿ ಕೆ.ಸೋಮಶೇಖರ್ ಹಾಗೂ ನ್ಯಾಯಮೂರ್ತಿ ಕೆ.ರಾಜೇಶ್ ರೈ ಅವರಿದ್ದ ವಿಭಾಗೀಯ ಪೀಠ ಎತ್ತಿಹಿಡಿದಿತ್ತು.
ಸದ್ಯ ಯಾವುದೇ ಶಾಲೆಗಳು ಸಹ ಫಲಿತಾಂಶ ಪ್ರಕಟಿಸಬಾರದು. ಮುಂದಿನ ಆದೇಶದವರೆಗೆ ಕಾಯಬೇಕು ಎಂದು ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ. ಮಾರ್ಚ್ನಲ್ಲಿ ಬೋರ್ಡ್ ಪರೀಕ್ಷೆಗೆ ಅನುಮತಿ ನೀಡಿ ಆದೇಶ ನೀಡಿದ್ದ ಹೈಕೋರ್ಟ್, ಸ್ಥಗಿತಗೊಂಡಿರುವ ಪರೀಕ್ಷೆ ಮುಂದುವರಿಸಲು ಸೂಚನೆ ನೀಡಿತ್ತು. ಅದರಂತೆ ಬಳಿಕ ಶಾಲೆಗಳು ಪರೀಕ್ಷೆಗಳನ್ನು ನಡೆಸಿದ್ದವು. ಇದೀಗ ಫಲಿತಾಂಶ ಪ್ರಕಟವಾಗುವ ಸಂದರ್ಭದಲ್ಲೇ ಸುಪ್ರೀಂ ಕೋರ್ಟ್ ತಡೆಯಾಜ್ಞೆ ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Havyaka Sammelana; ಅಡಿಕೆ ಬೆಳೆಗಾರರ ಹಿತ ಕಾಯಲು ಕೇಂದ್ರ ಬದ್ಧ: ಶೋಭಾ ಕರಂದ್ಲಾಜೆ
Havyaka ಭಾಷೆಗೆ ಅಕಾಡೆಮಿ ಅಥವಾ ಅಧ್ಯಯನ ಪೀಠ ಅಗತ್ಯ: ರವಿಶಂಕರ್ ಭಟ್
Ramnagar; 30ಕ್ಕೂ ಅಧಿಕ ಊರುಗಳಲ್ಲಿ ಆತಂಕ ಹುಟ್ಟಿಸಿದ್ದ ಕಾಡಾನೆ ಸೆರೆ
Yakshagana;ಅಧ್ಯಯನ, ಪಾತ್ರ ಜ್ಞಾನದಿಂದಷ್ಟೇ ಕಲಾವಿದ ರಂಗಸ್ಥಳದಲ್ಲಿ ಮೆರೆಯಲು ಸಾಧ್ಯ
Drugs; ಮಾರಾಟ, ಸೇವನೆ : ಮಂಗಳೂರು 1,090, ಉಡುಪಿ 116 ಪ್ರಕರಣ ದಾಖಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.