ಏಕಾಏಕಿ ಯು-ಟರ್ನ್ ತೆಗೆದ ಟ್ರಕ್ ಚಾಲಕ… ಕಾರು ಡಿಕ್ಕಿ ಹೊಡೆದು 6 ಮಂದಿ ಸ್ಥಳದಲ್ಲೇ ಮೃತ್ಯು
Team Udayavani, May 8, 2024, 5:15 PM IST
ರಾಜಸ್ಥಾನ: ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದ ಟ್ರಕ್ ಒಂದು ಇದ್ದಕಿದ್ದಂತೆ ಯು-ಟರ್ನ್ ತೆಗೆದುಕೊಂಡ ಪರಿಣಾಮ ಹಿಂದಿನಿಂದ ವೇಗವಾಗಿ ಬರುತ್ತಿದ್ದ ಕಾರು ಟ್ರಕ್ ಗೆ ಡಿಕ್ಕಿ ಹೊಡೆದು ಆರು ಮಂದಿ ಸ್ಥಳದಲ್ಲೇ ಮೃತಪಟ್ಟ ಘಟನೆ ರಾಜಸ್ಥಾನದ ದೆಹಲಿ-ಮುಂಬೈ ಎಕ್ಸ್‌ಪ್ರೆಸ್‌ವೇನಲ್ಲಿ ಸಂಭವಿಸಿದೆ.
ಘಟನೆ ನಡೆದ ಬಳಿಕ ಚಾಲಕ ಸ್ಥಳದಿಂದ ಪರಾರಿಯಾಗಿದ್ದು ಪೊಲೀಸರು ಟ್ರಕ್ ಅನ್ನು ವಶಪಡಿಸಿಕೊಂಡಿದ್ದಾರೆ.
ಮೃತರನ್ನು ಮನೀಶ್ ಶರ್ಮಾ, ಅವರ ಪತ್ನಿ ಅನಿತಾ ಶರ್ಮಾ, ಸತೀಶ್ ಶರ್ಮಾ, ಪೂನಂ, ಅವರ ಚಿಕ್ಕಮ್ಮ ಸಂತೋಷ್ ಮತ್ತು ಅವರ ಸ್ನೇಹಿತ ಕೈಲಾಶ್ ಎಂದು ಗುರುತಿಸಲಾಗಿದೆ.
ಘಟನೆಯಲ್ಲಿ ಮನನ್ ಮತ್ತು ದೀಪಾಲಿ ಎಂಬ ಇಬ್ಬರು ಮಕ್ಕಳು ಗಂಭೀರವಾಗಿ ಗಾಯಗೊಂಡಿದ್ದು ಅವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಘಟನೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು ದೃಶ್ಯದಲ್ಲಿ ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದ ಟ್ರಕ್ ಒಮ್ಮಿಂದೊಮ್ಮೆಲೆ ಯು- ಟರ್ನ್ ಹೊಡೆದಿದ್ದಾನೆ ಈ ವೇಳೆ ಅದೇ ಮಾರ್ಗವಾಗಿ ವೇಗವಾಗಿ ಸಾಗುತ್ತಿದ್ದ ಕಾರು ಟ್ರಕ್ ಗೆ ನೇರವಾಗಿ ಡಿಕ್ಕಿ ಹೊಡೆದಿದೆ ಪರಿಣಾಮ ಕಾರಿನಲ್ಲಿದ್ದ ಆರು ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಕಾರಿನಲ್ಲಿದ್ದವರು ಸಿಕರ್ ಜಿಲ್ಲೆಯಿಂದ ರಣಥಂಬೋರ್‌ನ ತ್ರಿನೇತ್ರ ಗಣೇಶ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ತೆರಳುತ್ತಿದ್ದರು ಎಂದು ಹೇಳಲಾಗಿದ್ದು ಈ ವೇಳೆ ರಾಜಸ್ಥಾನದ ಸವಾಯಿ ಮಾಧೋಪುರ್ ಜಿಲ್ಲೆಯ ಬನಾಸ್ ನದಿ ಸೇತುವೆ ಬಳಿ ಸಂಚರಿಸುವ ವೇಳೆ ಅಪಘಾತ ಸಂಭವಿಸಿದೆ.
ಮೃತ ಕುಟುಂಬಕ್ಕೆ ಮುಖ್ಯಮಂತ್ರಿ ಭಜನಲಾಲ್ ಶರ್ಮಾ ಸಂತಾಪ ಸೂಚಿಸಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡುಯುವ ಮಕ್ಕಳಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಇದನ್ನೂ ಓದಿ: ಪ್ರಜ್ವಲ್ ಪ್ರಕರಣ ತನಿಖೆಯಲ್ಲಿದ್ದರೂ ಬಿಜೆಪಿಯಿಂದ ರಾಜಕೀಯ:ಸಚಿವ ಬಿ. ನಾಗೇಂದ್ರ
📽️ Watch | 6 Of Family Killed After Car Rams Truck Taking U-Turn On Rajasthan Highway https://t.co/XQWOwM4DQV pic.twitter.com/fCS6p1Hoza
— NDTV (@ndtv) May 8, 2024
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Cyclone Fengal: ತಿರುವಣ್ಣಾಮಲೈಯಲ್ಲಿ ಭೂ ಕುಸಿತ: 7 ಮಂದಿ ಪೈಕಿ ನಾಲ್ವರ ಮೃತದೇಹ ಪತ್ತೆ
Nagpura: ರಾಜಕೀಯ ಎಂದರೆ ಅತೃಪ್ತ ಆತ್ಮಗಳ ಸಮುದ್ರ: ಕೇಂದ್ರ ಸಚಿವ ನಿತಿನ್ ಗಡ್ಕರಿ
Dal Lake: ಶ್ರೀನಗರದಲ್ಲಿ ಏಷ್ಯಾದ ಮೊದಲ ಜಲ ಸಾರಿಗೆ ʼಉಬರ್ ಶಿಕಾರಾʼ ಆರಂಭ
Alappuzha: ಬಸ್ ಗೆ ಡಿಕ್ಕಿ ಹೊಡೆದ ಕಾರು; ಐವರು ವೈದ್ಯಕೀಯ ವಿದ್ಯಾರ್ಥಿಗಳ ಸಾ*ವು
New District: “ಮಹಾ ಕುಂಭಮೇಳ’ ಈಗ ಉತ್ತರಪ್ರದೇಶದ ಹೊಸ ಜಿಲ್ಲೆ!
MUST WATCH
ಭಾರತ-ಆಸ್ಟ್ರೇಲಿಯಾ 2ನೇ ಟೆಸ್ಟ್‌ಗಾಗಿ ಅಡಿಲೇಡ್‌ಗೆ ಆಗಮಿಸಿದ ಟೀಮ್ ಇಂಡಿಯಾ
60 ಅಡಿ ಆಳದ ಬಾವಿಗೆ ಬಿದ್ದ 94 ವರ್ಷದ ಅಜ್ಜಿಯ ರಕ್ಷಣೆ
ಶ್ರೀ ಕೃಷ್ಣನ ಸೇವೆಗೆ ಬದುಕನ್ನೇ ಮುಡಿಪಾಗಿಟ್ಟ ಪ್ರಭಾಕರ ಉಳ್ಳೂರು
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.