Tamil Nadu: ಕಾರು – ಟ್ರಕ್ ಮುಖಾಮುಖಿ ಢಿಕ್ಕಿ; ಭೀಕರ ಅಪಘಾತದಲ್ಲಿ 6 ಮಂದಿ ಮೃತ್ಯು
Team Udayavani, Jan 28, 2024, 3:24 PM IST
ಚೆನ್ನೈ: ಕಾರು – ಟ್ರಕ್ ಮುಖಾಮುಖಿ ಢಿಕ್ಕಿ ಸಂಭವಿಸಿ 6 ಮಂದಿ ಮೃತಪಟ್ಟಿರುವ ಭೀಕರ ಘಟನೆ ಭಾನುವಾರ(ಜ.28 ರಂದು) ಮುಂಜಾನೆ ದಕ್ಷಿಣ ತಮಿಳುನಾಡಿನ ಸಿಂಗಿಲಿಪಟ್ಟಿ -ಪುನ್ನಯ್ಯಪುರಂ ನಡುವಿನ ರಸ್ತೆಯಲ್ಲಿ ನಡೆದಿದೆ.
ಕಾರ್ತಿಕ್, ವೇಲ್ ಮನೋಜ್, ಸುಬ್ರಮಣಿ, ಮನೋಹರನ್ ಮತ್ತು ಪೋತಿರಾಜ್ ಅವರು ಕುಟ್ರಾಲಂಗೆ ವಾರಾಂತ್ಯದ ಪ್ರವಾಸಕ್ಕೆ ತೆರಳಿ ಮನೆಗೆ ಮರಳುತ್ತಿರುವ ವೇಳೆ ಈ ಅಪಘಾತ ಸಂಭವಿಸಿದೆ.
ಕಾರಿನ ಚಾಲಕ ವಾಹನ ಚಾಲನೆ ವೇಳೆ ನಿದ್ರಾಮಂಪರಿನಲ್ಲಿದ್ದ ಪರಿಣಾಮ ಮುಂದೆ ಬರುತ್ತಿದ್ದ ಕೇರಳಕ್ಕೆ ಹೋಗುತ್ತಿದ್ದ ಟ್ರಕ್ ಗೆ ಮುಖಾಮುಖಿಯಾಗಿ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ.
ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಆರು ಜನರಲ್ಲಿ ಐವರು ಸ್ಥಳದಲ್ಲೇ ಸಾವನ್ನಪ್ಪಿದರೆ, ಒಬ್ಬರು ಆಸ್ಪತ್ರೆಗೆ ಸಾಗಿಸುವಾಗ ವೇಳೆ ಮೃತಪಟ್ಟಿದ್ದಾರೆ ಎಂದು ವರದಿ ತಿಳಿಸಿದೆ.
ಪೊಲೀಸರು ಮತ್ತು ಅಗ್ನಿಶಾಮಕ ಮತ್ತು ರಕ್ಷಣಾ ತಂಡಗಳು ಆಗಮಿಸಿ 30 ನಿಮಿಷದಲ್ಲಿ ಮೃತದೇಹಗಳನ್ನು ಹೊರತೆಗೆದಿದ್ದಾರೆ.
ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ತಿರುನಲ್ವೇಲಿ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದ್ದು, ಪೊಲೀಸರು ಘಟನೆಯ ಬಗ್ಗೆ ತನಿಖೆ ಆರಂಭಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
Old cars ಬಿಕರಿಗೆ ಶೇ.18 ಜಿಎಸ್ಟಿ! ; ವಿತ್ತ ಸಚಿವೆ ನೇತೃತ್ವದ ಜಿಎಸ್ಟಿ ಸಭೆ ತೀರ್ಮಾನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಅವಹೇಳನಕಾರಿ ಪದಬಳಕೆ: ಪ್ರಸಾದ್ ರಾಜ್ ಕಾಂಚನ್ ಖಂಡನೆ
Puttur: ತೆಂಕಿಲದಲ್ಲಿ ರಿಕ್ಷಾ ಅಪಘಾತ: ಚಾಲಕ ಸಾವು
Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್ ಬಾಂಡ್’ ಚಿತ್ರ
N Kannaiah Naidu ಅವರಿಗೆ ಗೌರವಧನ ನೀಡಲು ಮರೆತ ತುಂಗಭದ್ರಾ ಬೋರ್ಡ್, ಜಲಸಂಪನ್ಮೂಲ ಇಲಾಖೆ
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.