ಭೋಪಾಲ್‌ನಲ್ಲಿ 64 ತಬ್ಲಿಘಿಗಳ ಬಂಧನ ; ಮಧ್ಯಪ್ರದೇಶ ಪೊಲೀಸರ ಕಾರ್ಯಾಚರಣೆ
Team Udayavani, May 17, 2020, 5:51 AM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಭೋಪಾಲ್: ವಿದೇಶೀಯರ ಕಾಯಿದೆ ಉಲ್ಲಂಘಿಸಿ, ವಿವಿಧ ಧಾರ್ಮಿಕ ಸಮಾವೇಶಗಳಲ್ಲಿ ಪಾಲ್ಗೊಂಡ ತಬ್ಲಿಘಿ ಜಮಾಅತ್‌ನ 64 ವಿದೇಶೀಯರನ್ನು ಭೋಪಾಲ್ ಪೊಲೀಸರು ಬಂಧಿಸಿದ್ದಾರೆ.
ಇದಕ್ಕೂ ಮುನ್ನ ವೀಸಾ ನಿಯಮ ಉಲ್ಲಂಘನೆ ಆರೋಪದಡಿ ಭೋಪಾಲ್‌ನ ವಿವಿಧ ಪೊಲೀಸ್ ಠಾಣೆಗಳಲ್ಲಿ ಇವರ ವಿರುದ್ಧ 7 ಪ್ರಕರಣಗಳು ದಾಖಲಾಗಿದ್ದವು.
ಇವರು ದಿಲ್ಲಿಯ ನಿಜಾಮುದ್ದೀನ್ ನಲ್ಲಿ ನಡೆದಿದ್ದ ಸಮಾವೇಶದಲ್ಲಿ ಪಾಲ್ಗೊಂಡಿದ್ದರೆ, ಇಲ್ಲವೇ ಎಂಬುದು ತಿಳಿದು ಬಂದಿಲ್ಲ. ಆದರೆ, ಪ್ರವಾಸಿ ವೀಸಾದಡಿ ಭಾರತಕ್ಕೆ ಆಗಮಿಸಿರುವ ಇವರು, ಧಾರ್ಮಿಕ ಸಮಾವೇಶಗಳಲ್ಲಿ ಪಾಲ್ಗೊಳ್ಳುವಂತಿಲ್ಲ.
ಸ್ಥಳೀಯ ನ್ಯಾಯಾಲಯ ಇವರ ಜಾಮೀನು ಅರ್ಜಿಯನ್ನು ತಿರಸ್ಕರಿಸಿದ್ದು, ಶುಕ್ರವಾರ ಇವರನ್ನು ಬಂಧಿಸಲಾಗಿದೆ.
ಕಿರ್ಗಿಸ್ಥಾನ್, ಉಜ್ಬೇಕಿಸ್ಥಾನ್, ಕಜಕಿಸ್ಥಾನ್, ತಾಂಜಾನಿಯಾ, ದಕ್ಷಿಣ ಆಫ್ರಿಕಾ, ಮ್ಯಾನ್ಮಾರ್ ಹಾಗೂ ಇತರ ದೇಶಗಳಿಂದ ಇವರು ಆಗಮಿಸಿದ್ದಾರೆ.
ಬಂಧಿತರಲ್ಲಿ ಕೆಲವರಿಗೆ ಈ ಹಿಂದೆ ಕೋವಿಡ್ ಸೋಂಕು ಇರುವುದು ದೃಢಪಟ್ಟಿದೆ. ಬಂಧಿತರನ್ನು ಕ್ವಾರಂಟೈನ್‌ನಲ್ಲಿ ಇಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
66 ಮಂದಿಗೆ ಮಾತ್ರ ಕೋವಿಡ್ ಸೋಂಕು
ಈ ಮಧ್ಯೆ, ದಿಲ್ಲಿಯಲ್ಲಿ ಮಾತನಾಡಿದ ಜಮಾಯತ್ ಉಲೆಮಾ-ಎ- ಹಿಂದ್‌ನ ಅಧ್ಯಕ್ಷ ಮೌಲಾನಾ ಅರ್ಷದ್ ಮದನಿ, ದಿಲ್ಲಿಯ ನಿಜಾಮುದ್ದೀನ್‌ನಲ್ಲಿ ನಡೆದಿದ್ದ ಸಮಾವೇಶದ ವೇಳೆ 47 ರಾಷ್ಟ್ರಗಳಿಂದ ಆಗಮಿಸಿದ್ದ ಸುಮಾರು 1,640ಕ್ಕೂ ಹೆಚ್ಚು ವಿದೇಶಿ ತಬ್ಲಿಘಿ ಜಮಾಯತ್‌ನ ಸದಸ್ಯರು ಭಾರತದಲ್ಲಿದ್ದರು.
ಆ ಪೈಕಿ, ಕೇವಲ 64 ಮಂದಿಯಲ್ಲಿ ಮಾತ್ರ ಕೋವಿಡ್ ಸೋಂಕು ದೃಢಪಟ್ಟಿದೆ. ಇನ್ನಿಬ್ಬರು ಕೋವಿಡ್ ಸೋಂಕಿಗೆ ಬಲಿಯಾಗಿದ್ದಾರೆ ಎಂಬ ಮಾಹಿತಿ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Owaisi; ತಿರುಪತಿಯಲ್ಲಿ ಮುಸ್ಲಿಂ ಸ್ಟಾಫ್ ಇಲ್ಲದಿರುವಾಗ ವಕ್ಫ್ ನಲ್ಲೇಕೆ ಹಿಂದೂಗಳು
Sparks Row; ಉಗ್ರರನ್ನು ಹ*ತ್ಯೆ ಮಾಡಬಾರದು…: ಫಾರೂಕ್ ಅಬ್ದುಲ್ಲಾ ಹೇಳಿಕೆ
INDIA bloc; ಜಾರ್ಖಂಡ್ ಸೀಟು ಹಂಚಿಕೆ ಒಪ್ಪಂದ ಅಂತಿಮ: ಜೆಎಂಎಂಗೆ 43 ಸ್ಥಾನ
Shiv Sena ; ಭಾರೀ ವಿವಾದದ ಬಳಿಕ ಶೈನಾ ಕ್ಷಮೆ ಯಾಚಿಸಿದ ಅರವಿಂದ್ ಸಾವಂತ್
MUST WATCH
ಹೊಸ ಸೇರ್ಪಡೆ
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Subrahmanya; ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ
Kundapura; ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬೈಕ್: ಸವಾರ ದುರ್ಮರ*ಣ
J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.