IT; ಬ್ಯಾಂಕ್ ಖಾತೆಯಿಂದ 65 ಕೋಟಿ ರೂ. ವಿತ್ಡ್ರಾಗೆ ಐಟಿ ಇಲಾಖೆ ಯತ್ನ: ಕಾಂಗ್ರೆಸ್
Team Udayavani, Feb 21, 2024, 11:48 PM IST
ಹೊಸದಿಲ್ಲಿ: ಹಿಂದಿನ ವರ್ಷಗಳ ತೆರಿಗೆ ಪಾವತಿಗೆ ಸಂಬಂಧಿಸಿದ ಪ್ರಕರಣ ನ್ಯಾಯಾಲಯದಲ್ಲಿ ವಿಚಾರಣೆ ಹಂತದಲ್ಲಿರುವಾಗಲೇ ಕಾಂಗ್ರೆಸ್ನ ವಿವಿಧ ಬ್ಯಾಂಕ್ ಖಾತೆಗಳಿಂದ ಒಟ್ಟು 65 ಕೋಟಿ ರೂ.ಗಳನ್ನು ಕಡಿತಗೊಳಿಸುವಂತೆ ಆದಾಯ ತೆರಿಗೆ ಇಲಾಖೆ ಸೂಚಿಸಿದೆ ಎಂದು ಕಾಂಗ್ರೆಸ್ ಆರೋಪಿಸಿದೆ. ಇದು ಪ್ರಜಾಸತ್ತಾತ್ಮಕ ನಡೆಯಲ್ಲ ಎಂದು ಕಾಂಗ್ರೆಸ್ ಖಜಾಂಚಿ ಅಜಯ್ ಮಾಕನ್ ಆರೋಪಿಸಿದ್ದಾರೆ.
ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, “ಆದಾಯ ತೆರಿಗೆ ಮೇಲ್ಮನವಿ ಪ್ರಾಧಿಕಾರದಲ್ಲಿ ತೆರಿಗೆ ಪಾವತಿಗೆ ಸಂಬಂಧಿಸಿದ ಪ್ರಕರಣ ವಿಚಾರಣೆ ಹಂತದಲ್ಲಿದೆ. ಆದರೆ ಕಾಂಗ್ರೆಸ್ ಮತ್ತು ಯುವ ಕಾಂಗ್ರೆಸ್ನ ವಿವಿಧ ಬ್ಯಾಂಕ್ ಖಾತೆಗಳಿಂದ 65 ಕೋಟಿ ರೂ. ಕಡಿತಗೊಳಿಸುವಂತೆ ಆದಾಯ ತೆರಿಗೆ ಇಲಾಖೆಯು ಬ್ಯಾಂಕ್ಗಳಿಗೆ ಪತ್ರ ಬರೆದಿದೆ’ ಎಂದು ತಿಳಿಸಿದ್ದಾರೆ.
“ಇದಕ್ಕೂ ಮುನ್ನ, ರಿಟರ್ನ್ಸ್ ಸಲ್ಲಿಕೆಯಲ್ಲಿ ವ್ಯತ್ಯಾಸಗಳು ಕಂಡುಬಂದಿವೆ ಎಂದಿದ್ದ ಐಟಿ ಇಲಾಖೆ 210 ಕೋಟಿ ರೂ. ವಸೂಲಿ ಮಾಡಲು ಮುಂದಾಗಿತ್ತು. ಈ ಸಂಬಂಧ ಕಾಂಗ್ರೆಸ್ ಆದಾಯ ತೆರಿಗೆ ಮೇಲ್ಮನವಿ ಪ್ರಾಧಿಕಾರದ ಮೊರೆ ಹೋದ ಬಳಿಕ, ಪ್ರಾಧಿಕಾರವು ಇದಕ್ಕೆ ತಡೆ ನೀಡಿತ್ತು. ಆದರೂ ಪಕ್ಷದ ಬ್ಯಾಂಕ್ ಖಾತೆಗಳಿಂದ ಹಣ ಕಡಿತದ ಕ್ರಮ ಪ್ರಜಾಸತ್ತಾತ್ಮ ಕವಾದ ನಡೆಯಲ್ಲ,’ ಎಂದ ಅವರು, “ತನಿಖಾ ಸಂಸ್ಥೆಗಳು ವಿಚಾರಣೆಯನ್ನು ಅನಿಯಂತ್ರಿತವಾಗಿ ನಡೆಸುವುದನ್ನು ರೂಢಿಸಿಕೊಂಡರೆ ಪ್ರಜಾಪ್ರಭುತ್ವವೇ ನಾಶವಾದಂತೆ’ ಎಂದು ದೂರಿದ್ದಾರೆ.
ಆದಾಯ ತೆರಿಗೆ ಇಲಾಖೆಯ ಕ್ರಮವನ್ನು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ ಸೇರಿದಂತೆ ಕಾಂಗ್ರೆಸ್ನ ಅನೇಕ ನಾಯಕರು ಖಂಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Allu Arjun ನಿವಾಸದಲ್ಲಿ ದಾಂಧಲೆ!; 8 ಮಂದಿ ಬಂಧನ: ಕೃತ್ಯ ಎಸಗಿದ್ದು ಯಾರು?
Vasundhara Raje ಬೆಂಗಾವಲು ವಾಹನ ಪಲ್ಟಿ; ನಾಲ್ವರು ಪೊಲೀಸರಿಗೆ ಗಾಯ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Mohan Bhagwat; ತಿಳಿವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.