ಮರಕ್ಕೆ ಕಾರು ಢಿಕ್ಕಿ : ಏಳು ಮಂದಿ ಸಾವು; ಮೂವರಿಗೆ ಗಂಭೀರ ಗಾಯ
Team Udayavani, Mar 13, 2019, 6:49 AM IST
ದೇವರಿಯಾ, ಉತ್ತರ ಪ್ರದೇಶ : ಉತ್ತರ ಪ್ರದೇಶದ ದೇವರಿಯಾ ಜಿಲ್ಲೆಯಲ್ಲಿ ಕಾರೊಂದು ಮರಕ್ಕೆ ಢಿಕ್ಕಿ ಹೊಡೆದ ಭೀಕರ ದುರಂತದಲ್ಲಿ 7 ಮಂದಿ ಮೃತಪಟ್ಟು ಇತರ ಮೂವರು ಗಂಭೀರವಾಗಿ ಗಾಯಗೊಂಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಕಾರಿನಲ್ಲಿದ್ದವರು ಮದುವೆ ಕಾರ್ಯಕ್ರಮದಲ್ಲಿ ಭಾಗವಹಿಸಿ ನಿನ್ನೆ ಮಂಗಳವಾರ ತಡ ರಾತ್ರಿ ಮರಳುತ್ತಿದ್ದರು. ಇವರು ಪ್ರಯಾಣಿಸುತ್ತಿದ್ದ ಕಾರು ದೇವರಿಯಾ-ರುದ್ರಪುರ ರಸ್ತೆಯಲ್ಲಿ ಮರಕ್ಕೆ ಢಿಕ್ಕಿ ಹೊಡೆಯಿತು ಎಂದು ಸರ್ಕಲ್ ಆಫೀಸರ್ ವರುಣ್ ಮಿಶ್ರಾ ತಿಳಿಸಿದ್ದಾರೆ.
ಮರಕ್ಕೆ ಢಿಕ್ಕಿ ಹೊಡೆದ ಕಾರು ಅನಂತರ ಅಡಿ ಮೇಲಾಗಿ ಉರುಳಿ ಬಿತ್ತು.ಕಾರಿನಲ್ಲಿದ್ದವರು ಖೋರ್ಮಾ ಗ್ರಾಮದ ನಿವಾಸಿಗಳು.
ಮೃತರನ್ನು ಸಚಿನ್ (18), ಬಹಾದ್ದೂರ್ (45) ಶಿವ ಪೂಜನ್ (70), ದಲ್ ಸಿಂಗಾರ್ (68) ಇಂದು ಗುರುತಿಸಲಾಗಿದೆ. ಇನ್ನೂ ಮೂವರು ಮೃತರ ಗುರುತು ಪತ್ತೆ ಹಚ್ಚುವ ಕೆಲಸ ನಡೆದಿದೆ. ಗಾಯಾಳುಗಳನ್ನು ಗೋರಖ್‌ಪುರ ಮೆಡಿಕಲ್ ಕಾಲೇಜ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Encounter: ಉತ್ತರಪ್ರದೇಶದಲ್ಲಿ ಎನ್‌ಕೌಂಟರ್: 3 ಶಂಕಿತ ಖಲಿಸ್ಥಾನಿ ಉಗ್ರರ ಹತ್ಯೆ
Parliament: ಸಂಸದರ ತಳ್ಳಾಟ: ಇಂದು ಸಂಸತ್ ಭವನಕ್ಕೆ ದಿಲ್ಲಿ ಪೊಲೀಸರ ಭೇಟಿ?
Former Supreme Court Judge ವಿ.ಸುಬ್ರಹ್ಮಣಿಯನ್ ಎನ್‌ಎಚ್‌ಆರ್‌ಸಿ ಮುಖ್ಯಸ್ಥ
Shatrughan Sinha ಪುತ್ರಿ ವಿವಾಹ ಬಗ್ಗೆ ವಿಶ್ವಾಸ್ ವಿವಾದಾಸ್ಪದ ಹೇಳಿಕೆ
Maharashtra: ನಿಗದಿತ ಮಾರ್ಗ ಬಿಟ್ಟು ಬೇರೆಡೆ ಸಾಗಿದ ವಂದೇ ಭಾರತ್ ರೈಲು!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Intervention: ಗೃಹ ಇಲಾಖೆಯಲ್ಲಿ ಯಾರ ಹಸ್ತಕ್ಷೇಪವೂ ಇಲ್ಲ: ಸಚಿವ ಪರಮೇಶ್ವರ್
Encounter: ಉತ್ತರಪ್ರದೇಶದಲ್ಲಿ ಎನ್‌ಕೌಂಟರ್: 3 ಶಂಕಿತ ಖಲಿಸ್ಥಾನಿ ಉಗ್ರರ ಹತ್ಯೆ
Investment: 9.8 ಸಾವಿರ ಕೋಟಿ ರೂ. 9 ಯೋಜನೆಗೆ ಒಪ್ಪಿಗೆ: ಸಿಎಂ ಸಿದ್ದರಾಮಯ್ಯ
Growers Meet: ಕಾಫಿಗೆ ಜಗತ್ತಿನೆಲ್ಲೆಡೆ ಮಾರುಕಟ್ಟೆ ಸೃಷ್ಟಿ ಅಗತ್ಯ: ಪಿಯೂಷ್ ಗೋಯಲ್
Congress Government: ಸಿದ್ದರಾಮಯ್ಯ ಅವಧಿಯಲ್ಲೇ ದ್ವೇಷದ ರಾಜಕಾರಣ ಬೇಸರ ತಂದಿದೆ: ಸೋಮಣ್ಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.