ಹಳಿ ತಪ್ಪಿದ ರೈಲು: ಐವರು ಪ್ರಯಾಣಿಕರ ದುರ್ಮರಣ
Team Udayavani, Oct 11, 2018, 6:00 AM IST
ರಾಯ್‌ಬರೇಲಿ: ನ್ಯೂ ಫರಕ್ಕಾ ಎಕ್ಸ್‌ಪ್ರೆಸ್ ರೈಲಿನ ಎಂಜಿನ್ ಹಾಗೂ ಐದು ಬೋಗಿಗಳು ಹಳಿ ತಪ್ಪಿದ ಪರಿಣಾಮ ಐವರು ಪ್ರಯಾಣಿಕರು ಮೃತಪಟ್ಟು, 30ಕ್ಕೂ ಹೆಚ್ಚು ಮಂದಿ ಗಾಯಗೊಂಡ ಘಟನೆ ಉತ್ತರಪ್ರದೇಶದ ರಾಯ್‌ಬರೇಲಿ ಸಮೀಪ ಸಂಭವಿಸಿದೆ. ಗಾಯಾಳುಗಳಲ್ಲಿ 7 ಮಂದಿಯ ಸ್ಥಿತಿ ಚಿಂತಾಜನಕವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ರಾಯ್‌ಬರೇಲಿಯ ಹರ್ಚಂದ್‌ಪುರ ಬಳಿ ಬುಧವಾರ ಬೆಳಗಿನಜಾವ 6.10ರ ಸುಮಾರಿಗೆ ಈ ದುರಂತ ಸಂಭವಿಸಿದೆ. 300 ಜನ ಪ್ರಯಾಣಿಸುತ್ತಿದ್ದ ರೈಲು ಹಳಿ ತಪ್ಪಿದ ಸುದ್ದಿ ತಿಳಿಯುದ್ದಂತೆ, ಸ್ಥಳಕ್ಕೆ ಧಾವಿಸಿದ 40ಕ್ಕೂ ಹೆಚ್ಚು ಎನ್‌ಡಿಆರ್‌ಎಫ್ ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆಯಲ್ಲಿ ಪಾಲ್ಗೊಂಡು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದರು. ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಉಗ್ರರ ಕೃತ್ಯ ಇರಬಹುದೇ ಎಂದು ತಿಳಿದುಕೊಳ್ಳಲು ಉಗ್ರ ನಿಗ್ರಹ ದಳದ ಸಿಬ್ಬಂದಿಯನ್ನೂ ಸ್ಥಳಕ್ಕೆ ಕರೆಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
2 ಲಕ್ಷ ರೂ. ಪರಿಹಾರ: ಉತ್ತರಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಗಾಯಾಳು ಗಳಿಗೆ ಅಗತ್ಯ ಸೌಲಭ್ಯ ಕಲ್ಪಿಸಲು ಸೂಚಿಸಿ ದ್ದಾರೆ. ಅಲ್ಲದೆ, ಸಾವಿಗೀಡಾದವರ ಕುಟುಂಬಕ್ಕೆ ತಲಾ 2 ಲಕ್ಷ ರೂ., ಗಾಯಾಳುಗಳಿಗೆ ಚಿಕಿತ್ಸೆಗಾಗಿ ತಲಾ 50,000 ರೂ. ಪರಿಹಾರ ಘೋಷಿಸಿದ್ದಾರೆ. ರೈಲು ದುರಂತಕ್ಕೆ ಆಘಾತ ವ್ಯಕ್ತಪಡಿಸಿರುವ ಪ್ರಧಾನಿ ಮೋದಿ, ಮೃತರ ಕುಟುಂಬಗಳಿಗೆ ಸಾಂತ್ವನ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Choreographer ರೆಮೋ ಡಿಸೋಜಾ ವಿರುದ್ಧದ ಪ್ರಕರಣ ದೆಹಲಿ ಕೋರ್ಟ್ ಗೆ ವರ್ಗಾಯಿಸಿದ ಸುಪ್ರೀಂ
Parliament; ಪ್ರಿಯಾಂಕಾ ಗಾಂಧಿ- ರಾಹುಲ್ ಜತೆ ಸೇರಿ ಬಿಜೆಪಿ ನಿದ್ದೆಗೆಡಿಸುತ್ತಾರೆ :ಪೈಲಟ್
Goa ಕರಾವಳಿಯಲ್ಲಿ ನೌಕಾಪಡೆಯ ಸಬ್ ಮರೈನ್ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!
Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
MUST WATCH
ಹೊಸ ಸೇರ್ಪಡೆ
Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ
Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ
ಶ್ರೀಮಂತ ಟೊಕಿಯೊ ಈ ದುಸ್ಥಿತಿಗೆ ತಲುಪಿದ್ಯಾಕೆ…ಈ ದೇಶವೀಗ ಸೆ*ಕ್ಸ್ ಟೂರಿಸಂ ಹಬ್ಬ!
BJP Protest: ʼ1,500 ವರ್ಷದ ಹಿಂದೆ ಅಲ್ಲಾನು ಇರಲಿಲ್ಲ ಮುಲ್ಲಾನೂ ಇರಲಿಲ್ಲʼ: ಸಿ.ಟಿ.ರವಿ
Choreographer ರೆಮೋ ಡಿಸೋಜಾ ವಿರುದ್ಧದ ಪ್ರಕರಣ ದೆಹಲಿ ಕೋರ್ಟ್ ಗೆ ವರ್ಗಾಯಿಸಿದ ಸುಪ್ರೀಂ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.