ಭೀಕರ ರಸ್ತೆ ಅಪಘಾತ ; ತೀರ್ಥಯಾತ್ರೆಗೆ ತೆರಳಿದ್ದ 7 ಮಂದಿ ಸಾವು, 15ಕ್ಕೂ ಹೆಚ್ಚು ಮಂದಿಗೆ ಗಾಯ
Team Udayavani, Aug 20, 2022, 7:50 AM IST
ಜೈಪುರ : ಟ್ರ್ಯಾಕ್ಟರ್ ಮತ್ತು ಟ್ರಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ತೀರ್ಥಯಾತ್ರೆಗೆ ಹೋಗಿ ಹಿಂದಿರುಗುತ್ತಿದ್ದ ೭ ಮಂದಿ ಯಾತ್ರಿಕರು ಸಾವನ್ನಪ್ಪಿ, ಹದಿನೈದಕ್ಕೂ ಹೆಚ್ಚು ಮಂದಿ ಗಾಯಗೊಂಡ ಘಟನೆ ರಾಜಸ್ಥಾನದ ಪಾಲಿ ಜಿಲ್ಲೆಯಲ್ಲಿ ಶುಕ್ರವಾರ ರಾತ್ರಿ ನಡೆದಿದೆ.
ಘಟನೆಯಲ್ಲಿ ಹದಿನೈದಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಒದಗಿಸಲಾಗುತ್ತಿದೆ.
ಯಾತ್ರಿಕರು ಜೈಸಲ್‌ಮೆರ್ ರಾಮದೇವ್ರಾ ಮಂದಿರಕ್ಕೆ ಭೇಟಿ ನೀಡಿ ತಮ್ಮ ಊರಿಗೆ ಹಿಂತಿರುಗುತ್ತಿದ್ದ ವೇಳೆ ರಾಜಸ್ಥಾನದ ಪಾಲಿ ಸಮೀಪ ಎದುರಿನಿಂದ ಬಂದ ಟ್ರಕ್ ಗೆ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ.
ಘಟನೆ ಕುರಿತು ಸುಮೇರ್‌ಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಅಧಿಕಾರಿ ರಾಮೇಶ್ವರ ಭಾಟಿ ತಂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಈ ಅವಘಡಕ್ಕೆ ಪ್ರಧಾನಿ ನರೇಂದ್ರ ಮೋದಿ ಸಹಿತ ಹಲವಾರು ಗಣ್ಯರು ಸಂತಾಪ ಸೂಚಿಸಿದ್ದಾರೆ.
ಇದನ್ನೂ ಓದಿ : ಫೂಟ್ ಓವರ್ ಬ್ರಿಡ್ಜ್ ನಲ್ಲಿ ಆಟೋ ಚಲಾಯಿಸಿ ಸುದ್ದಿಯಾದ ಚಾಲಕ; ವಿಡಿಯೋ ವೈರಲ್
The accident in Pali, Rajasthan is saddening. In this hour of grief, my thoughts are with the bereaved families. I pray for a speedy recovery of those injured: PM @narendramodi
— PMO India (@PMOIndia) August 19, 2022
Rajasthan | Visuals from the accident site at Sumerpur in Pali district where a tractor collided with a truck leaving over 5 people dead & as many as 25 injured https://t.co/FPHSNP85Wm pic.twitter.com/mpbScSImt5
— ANI MP/CG/Rajasthan (@ANI_MP_CG_RJ) August 19, 2022
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rajasthan:150 ಅಡಿ ಆಳದ ಕೊಳವೆ ಬಾವಿಗೆ ಬಿದ್ದ ಮಗು; 3 ದಿನಕ್ಕೆ ಕಾಲಿಟ್ಟ ರಕ್ಷಣಾ ಕಾರ್ಯ
Maharashtra: ಬಾಸ್ ಜತೆ ಸೆ*ಕ್ಸ್‌ಗೆ ಒಪ್ಪದ ಪತ್ನಿಗೆ ಐಟಿ ಉದ್ಯೋಗಿ ತಲಾಖ್
PM Modi: ಇಂದು ಕೆನ್-ಬೆತ್ವಾ ನದಿ ಜೋಡಣೆಗೆ ಮೋದಿ ಶಂಕುಸ್ಥಾಪನೆ
A.B.Vajpayee Birth Century: ಅಜಾತಶತ್ರು, ಬಹುಮುಖಿ ವ್ಯಕ್ತಿತ್ವದ ಅಟಲ್ ಬಿಹಾರಿ ವಾಜಪೇಯಿ
Election Commission: ದಾಖಲಾದ ಮತದಲ್ಲಿಏರಿಕೆ ಆಗುವುದು ಸಾಮಾನ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.