ಲಾರಿ-ಆಟೋ ರಿಕ್ಷಾ ನಡುವೆ ಭೀಕರ ಅಪಘಾತ: 6 ಮಂದಿ ಸಾವು
Team Udayavani, Mar 14, 2021, 5:21 PM IST
ಆಂದ್ರ ಪ್ರದೇಶ: ಲಾರಿ ಮತ್ತು ಆಟೋರಿಕ್ಷಾ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಆರು ಜನರು ಅಸುನೀಗಿದ್ದು, ಉಳಿದ ಏಳು ಜನರಿಗೆ ಗಂಭೀರ ಗಾಯಗಳಾದ ಘಟನೆ ಆಂದ್ರಪ್ರದೇಶದ ಕೃಷ್ಣ ಜಿಲ್ಲೆಯ ಗೊಲ್ಲಪಾಳಿ ಬಳಿ ನಡೆಸಿದೆ.
ಇಂದು (ಮಾ.14) ಬೆಳಿಗ್ಗೆ 6 ಘಂಟೆ ಸುಮಾರಿಗೆ ಘಟನೆ ಸಂಭವಿಸಿದ್ದು, ಮೃತರನ್ನು ಒ. ರಮೇಶ್, ನಾಗರಾಜು, ಭೂಕ್ಯ ಸೋಮ್ಲಾ, ಬರ್ಮಾವತ್ ಬೇಬಿ, ಸ್ವಾನಾ ಮತ್ತು ನಾಗು ಎಂದು ಗುರುತಿಸಲಾಗಿದೆ.
ಬುಡಕಟ್ಟು ಕುಗ್ರಾಮವಾಗಿರುವ ಲಾಯಾನ್ ತಾಂಡದ ವ್ಯಕ್ತಿಗಳು ಇವರಾಗಿದ್ದು, ಇವರು ತಮ್ಮ ಕೃಷಿ ಕಾರ್ಯದ ನಿಮಿತ್ತ ಪ್ರಯಾಣ ಮಾಡುತ್ತಿದ್ದರು ಎಂದು ನುಜ್ವಿದ್ ಉಪ ಪೊಲೀಸ್ ವರಿಷ್ಠಾಧಿಕಾರಿ ಬಿ. ಶ್ರೀನಿವಾಸಲು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ:ಪ್ರವಾಸಿ ತಾಣದಲ್ಲಿ ರಸ್ತೆ ಬದಿ ಮೂತ್ರ ವಿಸರ್ಜನೆ : ಪರಿಸರ ಹೋರಾಟಗಾರ್ತಿ ಲಿಸಿಪ್ರಿಯಾ ಆಕ್ರೋಶ
ಆಟೋ ರಿಕ್ಷಾದಲ್ಲಿ ಕಾರ್ಮಿಕರು ತೆರಳುತ್ತಿದ್ದ ವೇಳೆ ಎದುರಿನಿಂದ ಬಂದಿರುವ ಲಾರಿ ಆಟೋ ರಿಕ್ಷಾಕ್ಕೆ ಡಿಕ್ಕಿ ಹೊಡೆದಿದ್ದು, ಆ ಬಳಿಕ ಲಾರಿ ಚಾಲಕ ಲಾರಿಯನ್ನು ನಿಲ್ಲಿಸದೆ ಅಲ್ಲಿಂದ ಪರಾರಿಯಾಗಿದ್ದಾನೆ.
ಘಟನೆ ಸಂಭವಿಸಿದ ತಕ್ಷಣ ಸ್ಥಳಿಯರು ಪೊಲೀಸರಿಗೆ ಮಾಹಿತಿ ನೀಡಿದ್ದು, ಆ ಬಳಿಕ ಸ್ಥಳಿಯರನ್ನು ಒಳಗೊಂಡಂತೆ ಪೊಲೀಸರು ಗಾಯಗೊಂಡವರನ್ನು ವಿಜಯವಾಡದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಇನ್ನು ಸ್ಥಳದಲ್ಲಿಯೇ 5 ಜನರು ಮೃತಪಟ್ಟಿದ್ದು, ಆಸ್ಪತ್ರೆಗೆ ಕೊಂಡೊಯ್ಯುವಾಗ ದಾರಿ ಮಧ್ಯೆ ಒಬ್ಬರು ಮೃತಪಟ್ಟಿದ್ದಾರೆ ಎಂದು ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tobacco: ತಂಬಾಕು ಮೇಲಿನ ಚಿತ್ರ ಸಹಿತ ಎಚ್ಚರಿಕೆ ಗಾತ್ರ ಶೀಘ್ರ ಹಿರಿದು!
Coconut: ಕೊಬ್ಬರಿಯ ಕನಿಷ್ಠ ಬೆಂಬಲ ಬೆಲೆ 422 ರೂ. ಹೆಚ್ಚಳ: ಕೇಂದ್ರ ಸಂಪುಟ
laws: ಕಠಿಣ ಕಾಯ್ದೆ ಇರುವುದು ಸ್ತ್ರೀ ರಕ್ಷಣೆಗೆ, ದುರ್ಬಳಕೆ ಸಲ್ಲ: ಸುಪ್ರೀಂ ಕೋರ್ಟ್
ಡಿ. 26: ಶಬರಿಮಲೆಯಲ್ಲಿ ಮಂಡಲ ಪೂಜೆ
BJP ಪೂರ್ವಾಂಚಲಿಗಳನ್ನು ರೋಹಿಂಗ್ಯಾಗಳೆಂದು ಮತಗಳನ್ನು ಅಳಿಸುತ್ತಿದೆ: ಕೇಜ್ರಿವಾಲ್ ಆರೋಪ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Tobacco: ತಂಬಾಕು ಮೇಲಿನ ಚಿತ್ರ ಸಹಿತ ಎಚ್ಚರಿಕೆ ಗಾತ್ರ ಶೀಘ್ರ ಹಿರಿದು!
Coconut: ಕೊಬ್ಬರಿಯ ಕನಿಷ್ಠ ಬೆಂಬಲ ಬೆಲೆ 422 ರೂ. ಹೆಚ್ಚಳ: ಕೇಂದ್ರ ಸಂಪುಟ
laws: ಕಠಿಣ ಕಾಯ್ದೆ ಇರುವುದು ಸ್ತ್ರೀ ರಕ್ಷಣೆಗೆ, ದುರ್ಬಳಕೆ ಸಲ್ಲ: ಸುಪ್ರೀಂ ಕೋರ್ಟ್
Daily Horoscope: ಈ ರಾಶಿಯವರಿಗಿಂದು ಅನಿರೀಕ್ಷಿತ ಮೂಲದಿಂದ ಧನಪ್ರಾಪ್ತಿ
Mangaluru: ಬಾಲಕಿ, ಮಹಿಳೆಯ ವೀಡಿಯೋ ಚಿತ್ರೀಕರಣ: ಆರೋಪಿಗೆ 5 ವರ್ಷಗಳ ಜೈಲು ಶಿಕ್ಷೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.