Heavy Rain: ನಿರ್ಮಾಣ ಹಂತದಲ್ಲಿದ್ದ ಅಪಾರ್ಟ್‌ಮೆಂಟ್‌ನ ಗೋಡೆ ಕುಸಿದು 7 ಮಂದಿ ಸಾವು
Team Udayavani, May 8, 2024, 5:27 PM IST
ಹೈದರಾಬಾದ್: ಭಾರೀ ಮಳೆಯಿಂದಾಗಿ ನಿರ್ಮಾಣ ಹಂತದಲ್ಲಿದ್ದ ಅಪಾರ್ಟ್‌ಮೆಂಟ್‌ನ ತಡೆಗೋಡೆ ಕುಸಿದು ನಾಲ್ಕು ವರ್ಷದ ಮಗು ಸೇರಿದಂತೆ ಏಳು ಮಂದಿ ಸಾವನ್ನಪ್ಪಿರುವ ಘಟನೆ ಬಾಚುಪಲ್ಲಿ ಪ್ರದೇಶದಲ್ಲಿ ನಡೆದಿದೆ.
ಮೃತರು ಒಡಿಶಾ ಮತ್ತು ಛತ್ತೀಸ್‌ಗಢಕ್ಕೆ ಸೇರಿದ ವಲಸೆ ಕಾರ್ಮಿಕರಾಗಿದ್ದು, ಮಂಗಳವಾರ(ಮೇ.7 ರಂದು) ಸಂಜೆ ಈ ಘಟನೆ ನಡೆದಿದೆ ಎಂದು ಬಾಚುಪಲ್ಲಿ ಪೊಲೀಸರು ತಿಳಿಸಿದ್ದಾರೆ.
ಮೃತ ದೇಹಗಳನ್ನು ಅವಶೇಷಗಳಡಿಯಿಂದ ಬುಧವಾರ ಮುಂಜಾನೆ ಹೊರತೆಗೆಯಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ.
ಮಂಗಳವಾರ ತೆಲಂಗಾಣದ ಹಲವೆಡೆ ಭಾರೀ ಮಳೆ ಸುರಿದಿದ್ದು, ಕೆಲವೆಡೆ ಜನಜೀವನ ಅಸ್ತವ್ಯಸ್ತಗೊಂಡಿದೆ. ನಗರದ ಹಲವು ಪ್ರದೇಶ ಜಲಾವೃತಗೊಂಡು ಟ್ರಾಫಿಕ್ ಬ್ಲಾಕ್ ಆಗಿದೆ. ವಿವಿಧೆಡೆ ಡಿಆರ್‌ಎಫ್ (ವಿಪತ್ತು ಪರಿಹಾರ ಪಡೆ) ತಂಡಗಳನ್ನು ನಿಯೋಜಿಸಲಾಗಿದೆ ಮತ್ತು ನಗರದ ವಿವಿಧ ಸ್ಥಳಗಳಲ್ಲಿ ನೀರು ನಿಂತಿರುವುದು ಮತ್ತು ಬಿದ್ದ ಮರಗಳನ್ನು ತೆರವುಗೊಳಿಸಲಾಗುತ್ತಿದೆ ಎಂದು ಗ್ರೇಟರ್ ಹೈದರಾಬಾದ್ ಮಹಾನಗರ ಪಾಲಿಕೆ ಅಧಿಕಾರಿಗಳು ತಿಳಿಸಿದ್ದಾರೆ.
ಸಂಬಂಧಪಟ್ಟ ಅಧಿಕಾರಿಗಳು ವಿವಿಧ ಜಲಾವೃತ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tamil Nadu: ಗೋ ಮಾಂಸ ತಿನ್ನೋದು ಸರಿ ಎಂದಾದರೆ ಮೂತ್ರ ಯಾಕೆ ಬೇಡ: ಬಿಜೆಪಿ
Delhi Polls: ದಿಲ್ಲಿ ವಿಧಾನಸಭೆಯ 70 ಸ್ಥಾನಕ್ಕೆ ಬರೋಬ್ಬರಿ 699 ಅಭ್ಯರ್ಥಿಗಳು ಸ್ಪರ್ಧೆ!
Supreme Court: ಟೆಕಿ ಅತುಲ್ ಪುತ್ರನನ್ನು ಅಜ್ಜಿ ಸುಪರ್ದಿಗೆ ನೀಡಲು ಸುಪ್ರೀಂ ನಕಾರ
NRI: ಸಂಸತ್ತಿನಲ್ಲಿ ಎನ್‌ಆರ್‌ಐ ಪ್ರಾತಿನಿಧ್ಯ: ಸ್ಥಾಯಿ ಸಮಿತಿ ಸಭೇಲಿ ಚರ್ಚೆ
Dog’s Revenge: ತನಗೆ ಡಿಕ್ಕಿ ಹೊಡೆದ ಕಾರಿನ ಮೇಲೆ ಸೇಡು ತೀರಿಸಿಕೊಂಡ ಶ್ವಾನ…