Tragedy: ಕಾರು ಪಲ್ಟಿಯಾಗಿ ಮಕ್ಕಳು ಸೇರಿದಂತೆ ಒಂದೇ ಕುಟುಂಬದ 7 ಮಂದಿ ಮೃತ್ಯು, ಸಿಎಂ ಸಂತಾಪ
Team Udayavani, Oct 17, 2024, 10:29 AM IST
ಹೈದರಾಬಾದ್: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಪಲ್ಟಿಯಾದ ಪರಿಣಾಮ ಮಕ್ಕಳು ಸೇರಿದಂತೆ ಕಾರಿನಲ್ಲಿದ್ದ ಏಳು ಮಂದಿ ಮೃತಪಟ್ಟಿರುವ ಘಟನೆ ಬುಧವಾರ(ಅ. 16) ರಾತ್ರಿ ಸಂಭವಿಸಿದೆ.
ತೆಲಂಗಾಣದ ಭೀಮ್ಲಾ ತಾಂಡಾದಲ್ಲಿ ವಾಸವಿದ್ದ ಕುಟುಂಬವೊಂದು ಕಾರ್ಯಕ್ರಮ ನಿಮಿತ್ತ ತೂಪ್ರಾಣಕ್ಕೆ ತೆರಳಿತ್ತು ಕಾರ್ಯಕ್ರಮ ಮುಗಿಸಿ ಭೀಮ್ಲಾ ತಾಂಡಾಕ್ಕೆ ವಾಪಸಾಗುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆ ಬದಿ ನೀರು ತುಂಬಿದ್ದ ಹೊಂಡಕ್ಕೆ ಬಿದ್ದಿದೆ. ಅಪಘಾತದಿಂದ ಗಾಯಗೊಂಡ ಗಾಯಾಳುಗಳು ಕಾರಿನಿಂದ ಹೊರಬರಲಾಗದೆ ಗಂಭೀರ ಸ್ಥಿತಿಯಲ್ಲಿದ್ದರು ಎನ್ನಲಾಗಿದೆ ವಿಚಾರ ತಿಳಿದ ಪೊಲೀಸರು ಹಾಗೂ ಸ್ಥಳೀಯರು ಸೇರಿ ಕಾರಿನಲ್ಲಿದ್ದವರನ್ನು ಹೊರತೆಗೆದು ಆಸ್ಪತ್ರೆಗೆ ದಾಖಲಿಸುವಷ್ಟರಲ್ಲಿ ಏಳು ಮಂದಿ ಜೀವ ಕಳೆದುಕೊಂಡಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಘಟನೆ ಸಂಬಂಧ ಶಿವಂಪೇಟೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಸಿಎಂ ಸಂತಾಪ:
ಮೇದಕ್ ಜಿಲ್ಲೆಯಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮೃತಪಟ್ಟವರಿಗೆ ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ಸಂತಾಪ ಸೂಚಿಸಿದ್ದು, ಅಪಘಾತದಲ್ಲಿ ಒಂದೇ ಕುಟುಂಬದ ಏಳು ಮಂದಿ ಮೃತಪಟ್ಟಿರುವುದು ಬೇಸರದ ಸಂಗತಿ, ಅವರ ಕುಟುಂಬದವರಿಗೆ ದುಃಖವನ್ನು ಭರಿಸುವ ಶಕ್ತಿ ನೀಡಲಿ ಎಂದು ಹೇಳಿದ್ದಾರೆ.
Tragic, 7 members of a family, including 3 children, 3 women died and the driver was seriously injured, after a #Speeding car plunged into a roadside canal near Usirikepally vill in #Shivampet mandal of #Medak dist, today.#RoadSafety #RoadAccident #CarAccident #Telangana pic.twitter.com/aFtptlCswE
— Surya Reddy (@jsuryareddy) October 16, 2024
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai: ಗೇಟ್‌ವೇ ಆಫ್ ಇಂಡಿಯಾ ಬಳಿ ಮುಳುಗಿದ 67 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು
Umar Khalid: ದೆಹಲಿ ಗಲಭೆ ಪ್ರಕರಣದ ಆರೋಪಿ ಉಮರ್ ಖಾಲಿದ್‌ಗೆ 7 ದಿನಗಳ ಮಧ್ಯಂತರ ಜಾಮೀನು
Loksabha:ಕಾಂಗ್ರೆಸ್ ಅಂಬೇಡ್ಕರ್ ಗೆ ಹಲವು ಬಾರಿ ಅವಮಾನ ಮಾಡಿದೆ: ಪ್ರಧಾನಿ ಮೋದಿ ತಿರುಗೇಟು
SC;ಪ್ರಕರಣಗಳ ವರ್ಗಾವಣೆ:ಪ್ರತಿಕ್ರಿಯಿಸಲು ಯಾಸಿನ್ ಮಲಿಕ್ ಸೇರಿ ಐವರಿಗೆ 2 ವಾರ ಕಾಲಾವಕಾಶ
ರಿವರ್ಸ್ ತೆಗೆಯುವಾಗ ಸಮುದ್ರಕ್ಕೆ ಬಿದ್ದ ಕಾರು… ನೌಕಾಪಡೆ ಅಧಿಕಾರಿ ಪಾರು, ಚಾಲಕ ನಾಪತ್ತೆ
MUST WATCH
ಹೊಸ ಸೇರ್ಪಡೆ
One Nation, One Election;ಹಣ, ಸಮಯ ಉಳಿಯಬಹುದು…ಮುಂದಾಗುವ ಸಮಸ್ಯೆಗಳಿಗೆ ಪರಿಹಾರ ಇದೆಯಾ?
Bollywood: ಬಾಲಿವುಡ್ ನಟ ಶಾಹಿದ್ ಕಪೂರ್ ಜತೆ ರಶ್ಮಿಕಾ ರೊಮ್ಯಾನ್ಸ್: ಯಾವ ಸಿನಿಮಾ?
Water: ನಾನು ನೀರು ನಾನಿಲ್ಲದೇ ಜಗತ್ತಿಲ್ಲ
Mumbai: ಗೇಟ್‌ವೇ ಆಫ್ ಇಂಡಿಯಾ ಬಳಿ ಮುಳುಗಿದ 67 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು
Order: ಗ್ಯಾಸ್ ಸೋರಿಕೆ ಅವಘಡ: ಪೋಷಕರ ಕಳೆದುಕೊಂಡ ಪುತ್ರಿಗೆ 28 ಲಕ್ಷ ರೂ.ಪರಿಹಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.