ದೇಶದಲ್ಲಿ ಶೇ.70ರಷ್ಟು ಡಿಜಿಟಲ್ ಮೂಲಸೌಕರ್ಯ ಕೊರತೆ
Team Udayavani, Sep 13, 2022, 8:05 AM IST
ನವದೆಹಲಿ: ಡಿಜಿಟಲ್ ಸೇವೆಗಳನ್ನು ನೀಡುವಲ್ಲಿ ದೇಶ ಮುಂಚೂಣಿಯಲ್ಲಿದೆ ನಿಜ. ಆದರೆ, ಅದಕ್ಕೆ ಬೇಕಾಗಿರುವ ಮೂಲಸೌಕರ್ಯಗಳ ಜಗತ್ತಿನ ರ್‍ಯಾಂಕಿಂಗ್‌ನಲ್ಲಿ ದೇಶಕ್ಕೆ 59ನೇ ಸ್ಥಾನ ಇದೆ.
ದೇಶದಲ್ಲಿ ಶೇ.70ರಷ್ಟು ಪ್ರಮಾಣದಲ್ಲಿ ಇ-ಮೂಲಸೌಕರ್ಯಗಳ ಕೊರತೆ ಭಾರೀ ಪ್ರಮಾಣದಲ್ಲಿ ಇದೆ ಎಂಬ ಬಗ್ಗೆ ವರ್ಚುವಲ್ ಪ್ರೈವೆಟ್ ನೆಟ್‌ವರ್ಕ್ ಸೇವೆ ಒದಗಿಸುವ ಸಫ್ ಶಾರ್ಕ್ ಕಂಪನಿಯ ಅಧ್ಯಯನದಲ್ಲಿ ಉಲ್ಲೇಖಿಸಲಾಗಿದೆ. ಈ ಪಟ್ಟಿಯಲ್ಲಿ ಡೆನ್ಮಾರ್ಕ್ ಮೊದಲ ಸ್ಥಾನದಲ್ಲಿ ಇದೆ.
ಭಾರತದಲ್ಲಿ ಇಂಟರ್‌ನೆಟ್ ಗುಣಮಟ್ಟ ಸಾಧಾರಣ. ಮೊಬೈಲ್ ಇಂಟರ್‌ನೆಟ್ ಸೇವೆಗೆ ಹೋಲಿಕೆ ಮಾಡಿದರೆ ಬ್ರಾಡ್‌ಬ್ಯಾಂಡ್ ಇಂಟರ್‌ನೆಟ್ ಸೇವೆ ಉತ್ತಮ ಎಂದು ಕಂಪನಿ ತನ್ನ ಅಧ್ಯಯನದಲ್ಲಿ ಹೇಳಿಕೊಂಡಿದೆ.
ಭಾರತದಲ್ಲಿ ಮೊಬೈಲ್ ಇಂಟರ್‌ನೆಟ್ ವೇಗದಲ್ಲಿ 108ನೇ ಸ್ಥಾನ, ಫಿಕ್ಸೆಡ್ ಬ್ರಾಡ್‌ಬ್ಯಾಂಡ್ ಇಂಟರ್‌ನೆಟ್ ಸೇವೆಯಲ್ಲಿ ಜಗತ್ತಿನಲ್ಲಿ 61ನೇ ಸ್ಥಾನ ಪಡೆದುಕೊಂಡಿದೆ. ಜನಸಾಮಾನ್ಯರಿಗೆ ಇಂಟರ್‌ನೆಟ್ ಕೈಗೆಟಕುವ ರಾಷ್ಟ್ರಗಳ ಪೈಕಿ ಭಾರತ ದೇಶಕ್ಕೆ 21ನೇ ಸ್ಥಾನವನ್ನು ಈ ವರದಿಯಲ್ಲಿ ಕಲ್ಪಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.