ದೇಶದ ಸಮಸ್ತ ಜನತೆಗೆ 71ನೇ ಗಣರಾಜ್ಯೋತ್ಸವದ ಶುಭಾಶಯಗಳು: ಪ್ರಧಾನಿ ಮೋದಿ ಟ್ವೀಟ್
Team Udayavani, Jan 26, 2020, 7:58 AM IST
ನವದೆಹಲಿ: ಇಂದು ಭಾರತದಾದ್ಯಂತ 71ನೇ ಗಣರಾಜ್ಯೋತ್ಸವದ ಸಂಭ್ರಮ. ರಾಜ್ ಪಥ್ ನಲ್ಲಿ ನಡೆಯಲಿರುವ ಪರೇಡ್ ಇಂದಿನ ಪ್ರಮುಖ ಆಕರ್ಷಣೆಯಾಗಿರಲಿದ್ದು ಬೆಳಗ್ಗೆ 9 ರಿಂದ 11:30 ರವರೆಗೂ ವಿವಿಧ ಕಾರ್ಯಕ್ರಮಗಳು ನಡೆಯಲಿದೆ. ದೇಶದ ರಕ್ಷಣಾ ಪಡೆಗಳ ಶಕ್ತಿ, ಸಾಮರ್ಥ್ಯಗಳ ಪ್ರದರ್ಶನ, ಶ್ರೀಮಂತ ಸಾಂಸ್ಕೃತಿಕ ವೈವಿಧ್ಯತೆ, ಸಾಮಾಜಿಕ ಮತ್ತು ಆರ್ಥಿಕ ಪ್ರಗತಿಯ ಅನಾವರಣಕ್ಕೆ 71ನೇ ಗಣರಾಜ್ಯೋತ್ಸವ ಸಾಕ್ಷಿಯಾಗಲಿದೆ.
ಭಾರೀ ಭದ್ರತೆಯೊಂದಿಗೆ ನಡೆಯಲಿರುವ 90 ನಿಮಿಷಗಳ ಸಂಭ್ರಮದ ಕಾರ್ಯಕ್ರಮ ಕಣ್ತುಂಬಿ ಕೊಳ್ಳಲು ಬ್ರೆಜಿಲ್ ಅಧ್ಯಕ್ಷ ಜೈರ್ ಮೆಸ್ಸಿಯಾಸ್ ಬೋಲ್ಸೊನಾರೊ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಪೊಲೀಸರು ಮತ್ತು ಅರೆಸೇನಾ ಪಡೆ ಯೋಧರು ಸೇರಿ 10 ಸಾವಿರ ಸಿಬ್ಬಂದಿಯ ಹದ್ದಿನ ಕಣ್ಣಿನ ಭದ್ರತೆ ಕಾರ್ಯಕ್ರಮಕ್ಕೆ ಇರಲಿದೆ.
ಈ ವೇಳೆ ಪ್ರಧಾನಿ ಮೋದಿ ದೇಶದ ಜನರಿಗೆ ಗಣರಾಜ್ಯೋತ್ಸವದ ಶುಭಾಶಯವನ್ನು ಟ್ವೀಟ್ ಮೂಲಕ ತಿಳಿಸಿದ್ದಾರೆ.ಈ ವೇಳೆ ಪ್ರಧಾನಿ ಮೋದಿ ದೇಶದ ಜನರಿಗೆ ಗಣರಾಜ್ಯೋತ್ಸವದ ಶುಭಾಶಯವನ್ನು ಟ್ವೀಟ್ ಮೂಲಕ ತಿಳಿಸಿದ್ದಾರೆ. ಗಣರಾಜ್ಯೋತ್ಸವವು ಸ್ವಾತಂತ್ರ್ಯ, ಸಮಾನತೆ, ಸಾರ್ವಭೌಮತೆ, ಮತ್ತು ಭಾತೃತ್ವದ ಕಲ್ಪನೆಗಳನ್ನು ಪುನರುಚ್ಚರಿಸುವ ಹಬ್ಬವಾಗಿದೆ, ಇದು ಭಾರತ ಮತ್ತು ಭಾರತೀಯನೆಂಬ ಸ್ಪೂರ್ತಿಯನ್ನು ಆಚರಿಸುವ ಒಂದು ಸುಸಂದರ್ಭವಾಗಿದೆ ಎಂದು ತಿಳಿಸಿದ್ದಾರೆ.
Wishing everyone a happy #RepublicDay.
सभी देशवासियों को गणतंत्र दिवस की बहुत-बहुत बधाई।
जय हिंद!
— Narendra Modi (@narendramodi) January 26, 2020
ಇಂದಿನ ಕಾರ್ಯಕ್ರಮದಲ್ಲಿ 16 ವಿವಿಧ ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳು ಮತ್ತು ಆರು ಸಚಿವಾಲಯ ಗಳು ಮತ್ತು ಇಲಾಖೆಗಳು ರೂಪಿಸಿರುವ ಸ್ತಬ್ಧ ಚಿತ್ರಗಳು ಹಾಗೂ ವಿವಿಧ ಶಾಲೆಗಳ ವಿದ್ಯಾರ್ಥಿಗಳ ಮೂಲಕ ಭಾರತದ ಸಾಂಸ್ಕೃತಿಕ ಶ್ರೀಮಂತಿಕೆ ಅನಾವರಣಗೊಳ್ಳಲಿದೆ. ಇದೇ ವೇಳೆ ಕರ್ನಾಟಕದ 7 ವಿದ್ಯಾರ್ಥಿಗಳು ಸೇರಿದಂತೆ ಸಿಬಿಎಸ್‌ಇ ಮತ್ತು ವಿಶ್ವವಿದ್ಯಾಲಯ ಮಟ್ಟದಲ್ಲಿ ಅಗ್ರ ಶ್ರೇಯಾಂಕ ಪಡೆದ ದೇಶದ ವಿವಿಧ ರಾಜ್ಯಗಳ 105 ಮಂದಿ ಪ್ರಧಾನಿ ನರೇಂದ್ರ ಮೋದಿ ಅವರ ಜತೆ ಕುಳಿತು ಗಣರಾಜ್ಯೋತ್ಸವ ಪರೇಡ್ ವೀಕ್ಷಿಸಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Successful: ರಾಜ್ಯದ 4,873 ಗ್ರಾಮಗಳು ಬಯಲು ಶೌಚ ಮುಕ್ತ: ಕೇಂದ್ರದ ಮೆಚ್ಚುಗೆ
Assam Coal Mine Tragedy: ಅಸ್ಸಾಂ ಗಣಿ ದುರಂತ… ಒಬ್ಬನ ಮೃತ ದೇಹ ಪತ್ತೆ
ತಿಮ್ಮಪ್ಪನ ಸನ್ನಿಧಾನದಲ್ಲಿ ನೂಕುನುಗ್ಗಲು ಕಾಲ್ತುಳಿತ… 6 ಸಾ*ವು, ಹಲವರ ಸ್ಥಿತಿ ಗಂಭೀರ
Sheesh Mahal Row: ಶೀಶ್‌ಮಹಲ್ ವರ್ಸಸ್ ರಾಜ್ ಮಹಲ್: ದಿಲ್ಲೀಲಿ ಬಿಜೆಪಿ, ಆಪ್ ಹೈಡ್ರಾಮ
Foundation: ಆಂಧ್ರ ಅಭಿವೃದ್ಧಿಗೆ ಹೆಗಲಿಗೆ ಹೆಗಲು ಕೊಟ್ಟು ಕೆಲಸ ಮಾಡುವೆವು: ಮೋದಿ
MUST WATCH
ಹೊಸ ಸೇರ್ಪಡೆ
Naxal Activity Calm: ಪಶ್ಚಿಮ ಘಟ್ಟದ ಕಾನನದಲ್ಲಿ ನಕ್ಸಲ್ ನಿಶ್ಶಬ್ದ
Language Development: ಕನ್ನಡ ಕೆಲಸಕ್ಕೆ ಅಭಿವೃದ್ಧಿ ಪ್ರಾಧಿಕಾರದಲ್ಲಿ ಹಣವೇ ಇಲ್ಲ!
Sullia: ಮಗುವಿಗೆ ಸುಟ್ಟು ಗಾಯ ಮಾಡಿದ್ದ ತಾಯಿ; ಆರೋಪ ಸಾಬೀತು; ಶಿಕ್ಷೆ ಪ್ರಕಟ
Naxals Surrender: ಶರಣಾದ ನಕ್ಸಲರ ಪ್ರಕರಣಗಳಿಗೆ ತ್ವರಿತ ನ್ಯಾಯಾಲಯ: ಸಿಎಂ ಸಿದ್ದರಾಮಯ್ಯ
Dinner Politics: ಊಟ, ಅಜೆಂಡಾ ನಮ್ಮದು, ಬೇರೆಯವರಿಗೆ ಆತಂಕ ಏಕೆ?: ಸತೀಶ್ ಜಾರಕಿಹೊಳಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.