ದೇಶ ಈಗ ಸಂಪೂರ್ಣ ಆತ್ಮವಿಶ್ವಾಸ ತಳೆದಿದೆ: ಪ್ರಧಾನಿ
Team Udayavani, Aug 15, 2018, 9:56 AM IST
ಹೊಸದಿಲ್ಲಿ: ದೇಶಾದ್ಯಂತ 72 ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಗುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಕೆಂಪು ಕೋಟೆಯಲ್ಲಿ 5 ನೇ ಬಾರಿ ಧ್ವಜಾರೋಹಣ ನರೆವೇರಿಸಿ ರಾಷ್ಟ್ರವನ್ನುದ್ದೇಶಿಸಿ ಮಾತನಾಡಿದರು.
ಭಾಷಣದ ಆರಂಭಕ್ಕೆ ತಮಿಳು ಕವಿ ಸುಬ್ರಹ್ಮಣ್ಯ ಭಾರತೀಯಾರ್ ಅವರ ಕವಿತೆಯ ಸಾಲುಗಳನ್ನು ತಮಿಳಿನಲ್ಲೇ ವಾಚಿಸಿದರು. ಭಾರತ ಭವ್ಯ ರಾಷ್ಟ್ರವಾಗಿ ಉದಯಿಸಿ ಇತರರಿಗೆ ಸ್ಫೂರ್ತಿಯಾಗಲಿದೆ. ಸಂಕೋಲೆಗಳನ್ನು ಕಳಚಿಕೊಂಡು ವಿಶಕ್ಕೆ ತೋರಿಸಿ ಕೊಡಲಿದೆ ಎಂದಿದ್ದಾರೆ. ಆ ದೆಸೆಯಲ್ಲಿ ನಾವು ಮುನ್ನಡೆಯಬೇಕು ಎಂದರು.
ದೇಶವಾಸಿಗಳು ಆತ್ಮ ವಿಶ್ವಾಸವನ್ನು ತಳೆದಿದ್ದು, ಹೊಸ ಕನಸುಗಳು ಮತ್ತು ಸಂಕಲ್ಪದೊಂದಿಗೆ ನಾವು ಮುನ್ನಡೆಯುತ್ತಿದ್ದೇವೆ ಎಂದರು.
ನಮ್ಮ ದೇಶದ ತಾಯಂದಿರಿಗೆ ನಮ್ಮ ನಮನಗಳು.ನಮ್ಮ ನೌಕಾಪಡೆಯ 6 ಹೆಣ್ಣು ಮಕ್ಕಳು ಸಪ್ತ ಸಾಗರಗಳನ್ನು ದಾಟಿ ಬಂದಿದ್ದಾರೆ. ದೇಶಕ್ಕೆ ಕೀರ್ತಿ ತಂದಿದ್ದಾರೆ ಎಂದರು.
2022 ರ ವೇಳೆಗೆ ಬಾಹ್ಯಾಕಾಶ ಕ್ಷೇತ್ರಕ್ಕೆ ಭಾರತದ ನೌಕೆಯನ್ನು ಕಳುಹಿಸಿ ಅಲ್ಲಿಯೂ ತ್ರಿವರ್ಣ ಧ್ವಜ ಹಾರಿಸುವ ಗುರಿ ನಮ್ಮದಾಗಿದೆ ಎಂದರು.
ಒನ್‌ರ್‍ಯಾಂಕ್ ಒನ್ ಪೆನ್ಷನ್,ಸ್ವಚ್ಛ ಭಾರತದಂತಹ ಯೋಜನೆಗಳನ್ನು ಜಾರಿ ಮಾಡಿ ನಮ್ಮ ಬದ್ಧತೆಯನ್ನು ತೋರಿದ್ದೇವೆ ಎಂದರು.
ಈ ವರ್ಷ ಸಂಪ್ಟೆಂಬರ್ ತಿಂಗಳಿನಲ್ಲಿ ಪ್ರಧಾನ್ ಮಂತ್ರಿ ಜನ್ ಆರೋಗ್ಯ ಯೋಜನೆಯನ್ನು ಜಾರಿ ಮಾಡುತ್ತೇವೆ. ಇದು ಬಡವರಿಗೆ 5 ಲಕ್ಷ ರೂಪಾಯಿ ವರೆಗೆ ಚಿಕಿತ್ಸೆಗೆ ಹಣಕಾಸು ನೆರವು ನೀಡಲಿದೆ ಎಂದರು.
ಇಂದಿನ ಭಾರತದಲ್ಲಿ, ಸ್ವಜನಪಕ್ಷಪಾತಕ್ಕೆ ಅವಕಾಶವಿಲ್ಲ. ಎಲ್ಲಾ ಕೆಲಸಗಳನ್ನು ಪಾರದರ್ಶಕವಾಗಿ ಮಾಡಲಾಗುತ್ತಿದೆ ಎನ್ನುವುದನ್ನು ನಾವು ಖಚಿತಪಡಿಸಿದ್ದೇವೆ ಎಂದರು.
ತ್ರಿವಳಿ ತಲಾಖ್‌ನಿಂದಾಗಿ ಮುಸ್ಲಿಂ ಮಹಿಳೆಯರು ತೀವ್ರ ಸಂಕಷ್ಟ ಅನುಭವಿಸುತ್ತಿದ್ದರು. ಆ ಪದ್ದತಿಗೆ ಅಂತ್ಯ ಹಾಕಲು ಬದ್ಧರಾಗಿದ್ದೆವು. ಹಲವರು ನಮ್ಮನ್ನು ಈ ವಿಚಾರದಲ್ಲಿ ವಿರೋಧಿಸಿದ್ದರು ಎಂದರು.
ಕಾಶ್ಮೀರದಲ್ಲಿ ಬಂದೂಕಿನಿಂದ ಎಲ್ಲದಕ್ಕೂ ಪರಿಹಾರ ಸಾಧ್ಯವಿಲ್ಲ. ಅಟಲ್ ಜಿ ಅವರ ಆಶಯದಂತೆ ಶಾಂತಿ ನೆಲೆಸಲು ಮುಂದಾಗಿದ್ದೇವೆ.ಬಂಡುಕೋರರಿಂತ ತತ್ತರಿಸಿದ್ದ ತ್ರಿಪುರಾ, ಅರುಣಾಚಲದಲ್ಲಿ ಈಗ ಶಾಂತಿ ನೆಲೆಸಿದೆ. ಈಶಾನ್ಯ ರಾಜ್ಯಗಳು ದೆಹಲಿಗೆ ಹತ್ತಿರವಾಗಿವೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sambhal Violence: ಮೃತರ ಸಂಖ್ಯೆ ನಾಲ್ಕಕ್ಕೆ, ಇಂಟರ್ನೆಟ್ ಸ್ಥಗಿತ, ನಿಷೇಧಾಜ್ಞೆ ಜಾರಿ
Parliament Winter Session: ಇಂದಿನಿಂದ ಸಂಸತ್ ಅಧಿವೇಶನ.. ವಕ್ಫ್ ಸೇರಿ 16 ಮಸೂದೆ ಮಂಡನೆ?
ಗೂಗಲ್ ಮ್ಯಾಪ್ ನಂಬಿ ಸೇತುವೆಯಿಂದ ನದಿಗೆ ಬಿದ್ದ ಕಾರು, ಮದುವೆಗೆ ಹೊರಟಿದ್ದ ಮೂವರು ಮೃತ್ಯು
India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್ ಪೂರೈಕೆ ಶುರು
Maharashtra Election: ಅಘಾಡಿ ಸೋಲಿಗೆ ಉದ್ಧವ್,ಶರದ್ ಕಾರಣ: ಕಾಂಗ್ರೆಸ್
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Protest: ಡಿ.10 ರಂದು ಸುವರ್ಣಸೌಧಕ್ಕೆ 5 ಸಾವಿರ ಟ್ರ್ಯಾಕ್ಟರ್ ಮುತ್ತಿಗೆ; ಕೂಡಲಸಂಗಮ ಶ್ರೀ
Drink & Drive Case: ಕುಡಿದು ವಾಹನ ಚಾಲನೆ; ʼಮಂಜುಮ್ಮೆಲ್ ಬಾಯ್ಸ್ʼ ನಟ ಬಂಧನ
Dandeli: ಬೇಡರ ಶಿರಗೂರಿನ ರೈತರ ಗದ್ದೆಗಳಲ್ಲಿ ಮತ್ತೆ ಕಾಣಿಕೊಂಡ ಕಾಡಾನೆಗಳು
IPL Mega Auction: ಮೊದಲ ದಿನದ ಹರಾಜಿನ ಬಳಿಕ ಆರ್ ಸಿಬಿ ತಂಡ ಹೀಗಿದೆ ನೋಡಿ
Arrested: ಹೊಯ್ಸಳ ಪೊಲೀಸ್ ಮೇಲೆ ಹಲ್ಲೆ; ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.