ಓವರ್ ಟೈಂಗೆ ಕೇಂದ್ರದ ಕತ್ತರಿ
Team Udayavani, Jun 27, 2018, 12:45 PM IST
ನವದೆಹಲಿ: ಕೇಂದ್ರ ಸರ್ಕಾರದ ನಾನಾ ಇಲಾಖೆಗಳಲ್ಲಿನ ಆಪರೇಷನಲ್ ಸಿಬ್ಬಂದಿ ಹಾಗೂ ಕೈಗಾರಿಕಾ ಕ್ಷೇತ್ರದ ನೌಕರರನ್ನು ಹೊರತುಪಡಿಸಿ ಇತರ ವಲಯಗಳ ಯಾವುದೇ ನೌಕರರಿಗೆ ಈವರೆಗೆ ನೀಡಲಾಗುತ್ತಿರುವ ಹೆಚ್ಚುವರಿ ಸೇವಾ ಭತ್ಯೆಯನ್ನು (ಒ.ಟಿ. ಎ) ನಿಲ್ಲಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ.
ಜತೆಗೆ, ಹೆಚ್ಚುವರಿ ಸೇವಾ ಭತ್ಯೆಯನ್ನು ಬಯೋಮೆಟ್ರಿಕ್ ದಾಖಲೆಗಳನುಸಾರವಷ್ಟೇ ನೀಡಲೂ ತೀರ್ಮಾನಿಸಿದೆ. ಏಳನೇ ವೇತನ ಆಯೋಗದ ಶಿಫಾರಸು ಮೇರೆಗೆ ಕೇಂದ್ರ ಸಿಬ್ಬಂದಿ ಸಚಿವಾಲಯ ಈ ಕುರಿತಂತೆ ಆದೇಶ ಹೊರಡಿಸಿದೆ ಎಂದು ವೆಚ್ಚ ಇಲಾಖೆ ತಿಳಿಸಿದೆ. ಇದರ ಜತೆಗೆ, 1991ರಲ್ಲಿ ನಿಗದಿಯಾಗಿದ್ದ ಒಟಿಎ ದರವನ್ನು ಪರಿಷ್ಕರಿಸದೇ ಯಥಾಸ್ಥಿತಿಯಲ್ಲೇ ಮುಂದುವರಿಸಲು ತೀರ್ಮಾನಿಸಲಾಗಿದೆ.
ಸಚಿವರು ಹಾಗೂ ಪತ್ರಾಂಕಿತ ಅಧಿಕಾರಿಗಳ ಮಟ್ಟಕ್ಕಿಂತ ಕೆಳಗಿನ ಎಲ್ಲಾ ಸರ್ಕಾರಿ ನೌಕರರನ್ನು ಆಪರೇಷನಲ್ ಸಿಬ್ಬಂದಿಯೆಂದು ಪರಿಗ
ಣಿಸಿರುವುದಾಗಿ ಸ್ಪಷ್ಟಪಡಿಸಲಾಗಿದೆ. ಈ ಆದೇಶವು ಕೇಂದ್ರದ ಎಲ್ಲಾ ಸಚಿವಾಲಯಗಳು ಹಾಗೂ ಸರ್ಕಾರದ ಸಹಯೋಗಿ ಸಂಸ್ಥೆಗಳಿಗೂ
ಅನ್ವಯವಾಗಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Golden Jubliee: ಪತ್ರಿಕೆಯ ಓದು ಪ್ರತಿಯೊಬ್ಬರಿಗೂ ಆಹಾ! ಎನಿಸುವಂತಿರಲಿ
By Election: ಸಿದ್ದರಾಮಯ್ಯ ಸರಕಾರ ಕಿತ್ತೊಗೆಯುವವರೆಗೂ ಹೋರಾಟ ನಿಲ್ಲಲ್ಲ: ಎಚ್.ಡಿ.ದೇವೇಗೌಡ
High Court: ʼಅಪರಾಧಿ ಪತಿಯೊಂದಿಗೆ ನೆಲೆಸಿದ ಮಾತ್ರಕ್ಕೆ ಪತ್ನಿಯನ್ನೂ ಅಪರಾಧಿ ಮಾಡಲಾಗದುʼ
Karnataka: ಅರಣ್ಯದಲ್ಲಿ ನಿರಂತರ ಗಣಿ ಚಟುವಟಿಕೆಗೆ ಅನುಮತಿ?
Mangaluru: ಮಾರುಕಟ್ಟೆಯಲ್ಲೀಗ ಬಂಗುಡೆ ಬಲು ಅಗ್ಗ! ವಿದೇಶದಲ್ಲಿ ಬೇಡಿಕೆ ಇಳಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.