![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Aug 6, 2020, 8:24 AM IST
ಅಹಮ್ಮದಾಬಾದ್:ಕೋವಿಡ್ 19 ಆಸ್ಪತ್ರೆಯಲ್ಲಿ ಸಂಭವಿಸಿದ ಭಾರೀ ಅಗ್ನಿ ಅನಾಹುತದಿಂದ ಸುಮಾರು ಎಂಟು ಮಂದಿ ರೋಗಿಗಳು ಜೀವಂತವಾಗಿ ದಹನವಾಗಿರುವ ದಾರುಣ ಘಟನೆ ಗುಜರಾತ್ ನ ಅಹಮ್ಮದಾಬಾದ್ ನಲ್ಲಿ ಬುಧವಾರ ತಡರಾತ್ರಿ ನಡೆದಿದೆ.
ಅಹಮ್ಮದಾಬಾದ್ ನ ನವರಂಗ್ ಪುರ ಪ್ರದೇಶದಲ್ಲಿರುವ ಶ್ರೇಯ್ ಕೋವಿಡ್ 19 ಆಸ್ಪತ್ರೆಯ ನಾಲ್ಕನೇ ಮಹಡಿಯಲ್ಲಿ ಅಗ್ನಿ ದುರಂತ ಸಂಭವಿಸಿರುವುದಾಗಿ ವರದಿ ತಿಳಿಸಿದೆ.
ಬೇರೆ ವಾರ್ಡ್ ಗಳಲ್ಲಿ ಇದ್ದ 35 ರೋಗಿಗಳನ್ನು ಬೇರೆ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳ ಆಗಮಿಸಿದ್ದು, ಬೆಂಕಿಯನ್ನು ನಂದಿಸುವ ಕಾರ್ಯದಲ್ಲಿ ತೊಡಗಿರುವುದಾಗಿ ವರದಿ ಹೇಳಿದೆ.
ಆಸ್ಪತ್ರೆಯ ತುರ್ತು ನಿಗಾ ಚಿಕಿತ್ಸಾ (ಐಸಿಯು)ಘಟಕದಲ್ಲಿ ಅಗ್ನಿ ಅನಾಹುತ ಸಂಭವಿಸಿದ ಪರಿಣಾಮ ಎಂಟು ಮಂದಿ ರೋಗಿಗಳು ಸಾವನ್ನಪ್ಪಿರುವುದಾಗಿ ವರದಿ ತಿಳಿಸಿದೆ.
You seem to have an Ad Blocker on.
To continue reading, please turn it off or whitelist Udayavani.