Shocking; ಕತಾರ್ನಲ್ಲಿ 8 ಮಂದಿ ಮಾಜಿ ಭಾರತೀಯ ನೌಕಾಪಡೆ ಸಿಬಂದಿಗಳಿಗೆ ಮರಣದಂಡನೆ
ಕಾನೂನು ಆಯ್ಕೆಗಳನ್ನು ಅನ್ವೇಷಿಸುತ್ತಿರುವ ವಿದೇಶಾಂಗ ಇಲಾಖೆ
Team Udayavani, Oct 26, 2023, 7:32 PM IST
ಹೊಸದಿಲ್ಲಿ: ಕತಾರ್ ನ ನ್ಯಾಯಾಲಯವು ಎಂಟು ಮಂದಿ ಭಾರತೀಯ ಮಾಜಿ ಭಾರತೀಯ ನೌಕಾಪಡೆ ಸಿಬ್ಬಂದಿಗಳಿಗೆ ಮರಣದಂಡನೆ ವಿಧಿಸಿರುವ ಬಗ್ಗೆ ವಿದೇಶಾಂಗ ಇಲಾಖೆ ತೀವ್ರ ಆಘಾತಕ್ಕೊಳಗಾಗಿದೆ ಎಂದು ಗುರುವಾರ ಹೇಳಿದೆ. ಪ್ರಕರಣದಲ್ಲಿ ಎಲ್ಲಾ ಕಾನೂನು ಆಯ್ಕೆಗಳನ್ನು ಅನ್ವೇಷಿಸುತ್ತಿದೆ ಎಂದು ಹೇಳಿದೆ.
ಮರಣದಂಡನೆ ಗೆ ಓಲ್ಗಾಗಿರುವ ಮಾಜಿ ಭಾರತೀಯ ನೌಕಾಪಡೆ ಸಿಬ್ಬಂದಿಗಳು ಕಳೆದ ವರ್ಷ ಆಗಸ್ಟ್ನಿಂದ ಜೈಲಿನಲ್ಲಿದ್ದಾರೆ. ಅವರ ವಿರುದ್ಧದ ಆರೋಪಗಳನ್ನು ಕತಾರಿ ಅಧಿಕಾರಿಗಳು ಬಹಿರಂಗಗೊಳಿಸಿಲ್ಲ.
“ಅಲ್ ದಹ್ರಾ ಕಂಪನಿಯ ಎಂಟು ಭಾರತೀಯ ಉದ್ಯೋಗಿಗಳನ್ನು ಒಳಗೊಂಡಿರುವ ಪ್ರಕರಣದಲ್ಲಿ ಕತಾರ್ನ ಪ್ರಥಮ ನಿದರ್ಶನದ ನ್ಯಾಯಾಲಯವು ಇಂದು ತೀರ್ಪು ನೀಡಿದೆ ಎಂದು ನಮಗೆ ಪ್ರಾಥಮಿಕ ಮಾಹಿತಿ ಇದೆ” ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ (MEA) ತಿಳಿಸಿದೆ.
“ಮರಣದಂಡನೆಯ ತೀರ್ಪಿನಿಂದ ನಾವು ತೀವ್ರವಾಗಿ ಆಘಾತಕ್ಕೊಳಗಾಗಿದ್ದೇವೆ ಮತ್ತು ವಿವರವಾದ ತೀರ್ಪಿಗಾಗಿ ಕಾಯುತ್ತಿದ್ದೇವೆ. ನಾವು ಕುಟುಂಬ ಸದಸ್ಯರು ಮತ್ತು ಕಾನೂನು ತಂಡದೊಂದಿಗೆ ಸಂಪರ್ಕದಲ್ಲಿದ್ದೇವೆ ಮತ್ತು ನಾವು ಎಲ್ಲಾ ಕಾನೂನು ಆಯ್ಕೆಗಳನ್ನು ಅನ್ವೇಷಿಸುತ್ತಿದ್ದೇವೆ, ”ಎಂದು ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Train ಜನಶತಾಬ್ದಿ ಎಕ್ಸ್ಪ್ರೆಸ್ನಲ್ಲಿ ಹಾವು ಪ್ರತ್ಯಕ್ಷ: ತನಿಖೆಗೆ ಆದೇಶ
Himachal Pradesh;ನಷ್ಟದಲ್ಲಿರುವ ಹೊಟೇಲ್ ಮುಚ್ಚಲು ಹೈಕೋರ್ಟ್ ಆದೇಶ
Waqf ಮಸೂದೆ ಕರಡು ವರದಿ ಸಿದ್ಧ: ಜೆಪಿಸಿ ಅಧ್ಯಕ್ಷ ಪಾಲ್ ಘೋಷಣೆ
Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!
Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.