ಭಾರತ-ಚೀನಾ ಗಡಿಭಾಗದ ಚಮೋಲಿಯಲ್ಲಿ ಮತ್ತೆ ನಿರ್ಗಲ್ಲು ಸ್ಫೋಟ; ಎಂಟು ಮಂದಿ ಸಾವು
ಕಾರ್ಮಿಕರ ಎರಡು ಶಿಬಿರಗಳು ಇಲ್ಲಿ ಬಿಡಾರ ಹೂಡಿರುವುದಾಗಿ ವರದಿ ತಿಳಿಸಿದೆ.
Team Udayavani, Apr 24, 2021, 4:04 PM IST
ಗೋಪೇಶ್ವರ್/ಡೆಹ್ರಾಡೂನ್: ಉತ್ತರಾಖಂಡದ ಚಮೋಲಿ ಜಿಲ್ಲೆಯ ಭಾರತ ಮತ್ತು ಚೀನಾ ಗಡಿ ಪ್ರದೇಶದಲ್ಲಿ ಶುಕ್ರವಾರ(ಏ.23) ರಾತ್ರಿ ಭಾರೀ ಪ್ರಮಾಣದ ನಿರ್ಗಲ್ಲು ಸ್ಫೋಟ ಸಂಭವಿಸಿದ್ದು, ಘಟನೆಯಲ್ಲಿ ಸಾವನ್ನಪ್ಪಿರುವ ಎಂಟು ಮಂದಿಯ ಶವಗಳನ್ನು ಹೊರತೆಗೆಯಲಾಗಿದೆ ಎಂದು ವರದಿ ತಿಳಿಸಿದೆ.
ಭಾರತೀಯ ಸೇನೆ ರಕ್ಷಣಾ ಕಾರ್ಯದಲ್ಲಿ ತೊಡಗಿದ್ದು, 384 ಮಂದಿಯನ್ನು ರಕ್ಷಿಸಿದ್ದು, ಆರು ಮಂದಿ ಸ್ಥಿತಿ ಚಿಂತಾಜನಕವಾಗಿರುವುದಾಗಿ ವರದಿ ಹೇಳಿದೆ. ನಿರ್ಗಲ್ಲು ಸ್ಫೋಟ ಸಂಭವಿಸಿದ ಪ್ರದೇಶದಲ್ಲಿ ಬಿಆರ್ ಒ ರಸ್ತೆ ದುರಸ್ತಿ ಕಾಮಗಾರಿ ನಡೆಸುತ್ತಿದ್ದು, ಕಾರ್ಮಿಕರ ಎರಡು ಶಿಬಿರಗಳು ಇಲ್ಲಿ ಬಿಡಾರ ಹೂಡಿರುವುದಾಗಿ ವರದಿ ತಿಳಿಸಿದೆ. ರಕ್ಷಣಾ ಕಾರ್ಯಾಚರಣೆ ಮುಂದುವರಿದಿರುವುದಾಗಿ ಭಾರತೀಯ ಸೇನಾಧಿಕಾರಿಗಳು ತಿಳಿಸಿದ್ದಾರೆ.
ಉತ್ತರಾಖಂಡ್ ಚಮೋಲಿಯಲ್ಲಿ ಸಂಭವಿಸಿದ ಘಟನೆಗೆ ಸಂಬಂಧಿಸಿದಂತೆ ಜನರಿಗೆ ನೆರವು ನೀಡುವುದಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಭರವಸೆ ನೀಡಿದ್ದರು.
ಚಮೋಲಿಯ ನಿತಿ ಕಣಿವೆಯ ಮಲಾರಿ ಸಮೀಪದ ಸುಮ್ನಾ ಚೌಕಿ ನಡುವೆ ಈ ನಿರ್ಗಲ್ಲು ಸ್ಫೋಟ ಸಂಭವಿಸಿದೆ ಎಂಬ ಬಗ್ಗೆ ಮಾಹಿತಿ ಬಂದಿರುವುದಾಗಿ ಬಿಆರ್ ಒ (ಬಾರ್ಡರ್ ರೋಡ್ಸ್ ಆರ್ಗನೈಸೇಶನ್) ಅಧಿಕಾರಿಗಳು ತಿಳಿಸಿದ್ದರು. ಘಟನೆಯಲ್ಲಿ ಸಂಭವಿಸಿದ ಸಾವು, ನೋವು ನಷ್ಟದ ಬಗ್ಗೆ ಇನ್ನಷ್ಟೇ ತಿಳಿದು ಬರಬೇಕಾಗಿದೆ ಎಂದು ಪ್ರಾಥಮಿಕ ವರದಿಯಲ್ಲಿ ತಿಳಿಸಿತ್ತು.
ಫೆಬ್ರುವರಿಯಲ್ಲಿ ಚಮೋಲಿ ಜಿಲ್ಲೆಯ ಜೋಶಿಮಠ ಸೇರಿದಂತೆ ಹಲವೆಡೆ ಸಂಭವಿಸಿದ ಭಾರೀ ನಿರ್ಗಲ್ಲು ಸ್ಫೋಟಕ್ಕೆ 70ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದು, ಮೂಲಭೂತ ಸೌಕರ್ಯ ಸೇರಿದಂತೆ ಅಪಾರ ಪ್ರಮಾಣದಲ್ಲಿ ನಷ್ಟ ಸಂಭವಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Manmohan Singh ಅಂತ್ಯಕ್ರಿಯೆ ಸ್ಮಾರಕ ನಿರ್ಮಿಸಬಹುದಾದ ಸ್ಥಳದಲ್ಲಿ ನಡೆಸಲು ಖರ್ಗೆ ಮನವಿ
Dr. Manmohan Singh; ನಾಳೆ ನಿಗಮಬೋಧ್ ಘಾಟ್ ಚಿತಾಗಾರದಲ್ಲಿ ಮಾಜಿ ಪ್ರಧಾನಿ ಅಂತ್ಯಕ್ರಿಯೆ
Video: ಮನಮೋಹನ್ ಸಿಂಗ್ ಹೇಳುವ ಬದಲು ಮೋದಿ ನಿಧನ ಎಂದ ನ್ಯೂಸ್ ಆ್ಯಂಕರ್.!
Punjab: ನಿಯಂತ್ರಣ ತಪ್ಪಿ ನದಿಗೆ ಬಿದ್ದ ಬಸ್… 8 ಮಂದಿ ಮೃತ್ಯು, ಹಲವರಿಗೆ ಗಾಯ
New Delhi: ಸಂಸತ್ತಿನ ಬಳಿ ಬೆಂಕಿ ಹಚ್ಚಿಕೊಂಡಿದ್ದ ಯುವಕ ಸಾ*ವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.