Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
Team Udayavani, Apr 29, 2024, 8:21 AM IST
ಛತ್ತೀಸ್‌ಗಢ: ಹೆದ್ದಾರಿ ಬದಿ ನಿಂತಿದ್ದ ಗೂಡ್ಸ್ ವಾಹನಕ್ಕೆ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ ಮೂವರು ಮಕ್ಕಳು ಐವರು ಮಹಿಳೆಯರು ಸೇರಿ ಗೂಡ್ಸ್ ವಾಹನದಲ್ಲಿದ್ದ ಎಂಟು ಮಂದಿ ಸ್ಥಳದಲ್ಲೇ ಮೃತಪಟ್ಟ ಘಟನೆ ಛತ್ತೀಸ್‌ಗಢದ ಬೆಮೆತಾರಾದಲ್ಲಿ ಭಾನುವಾರ ರಾತ್ರಿ ಸಂಭವಿಸಿದೆ.
ಮೃತರನ್ನು ಭೂರಿ ನಿಶಾದ್ (50), ನೀರಾ ಸಾಹು (55), ಗೀತಾ ಸಾಹು (60), ಅಗ್ನಿಯಾ ಸಾಹು (60), ಖುಷ್ಬು ಸಾಹು (39), ಮಧು ಸಾಹು (5), ರಿಕೇಶ್ ನಿಶಾದ್ (6) ಮತ್ತು ಟ್ವಿಂಕಲ್ ನಿಶಾದ್ ಎಂದು ಗುರುತಿಸಲಾಗಿದೆ.
ಮೃತರೆಲ್ಲರೂ ಕೌಟುಂಬಿಕ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಹಿಂತಿರುಗುತ್ತಿದ್ದಾಗ ಕಥಿಯಾ ಗ್ರಾಮದ ಬಳಿ ಭಾನುವಾರ ತಡರಾತ್ರಿ ಈ ಅಪಘಾತ ಸಂಭವಿಸಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಮೃತರನ್ನು ಪಥರಾ ಗ್ರಾಮದ ಸ್ಥಳೀಯರು ಎನ್ನಲಾಗಿದ್ದು, ತಿರೈಯಾ ಗ್ರಾಮದಲ್ಲಿ ನಡೆದ ಕೌಟುಂಬಿಕ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಹಿಂತಿರುಗುತ್ತಿದ್ದರು ಎಂದು ಅಧಿಕಾರಿ ತಿಳಿಸಿದ್ದಾರೆ. ಘಟನೆಯಲ್ಲಿ 22 ಮಂದಿ ಗಾಯಗೊಂಡಿದ್ದು ಅವರಲ್ಲಿ ನಾಲ್ವರ ಸ್ಥತಿ ಗಂಭೀರವಾಗಿದ್ದು ಅವರನ್ನು ರಾಯ್‌ಪುರ ಏಮ್ಸ್‌ಗೆ ದಾಖಲಿಸಲಾಗಿದೆ.
ಇದನ್ನೂ ಓದಿ: MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
STORY | Chhattisgarh: 8 killed, 23 injured as goods vehicle collides with truck in Bemetara district
READ: https://t.co/9W1JEiDu55
VIDEO:
(Full video available on PTI Videos – https://t.co/dv5TRARJn4) pic.twitter.com/V3cW2xOEfi
— Press Trust of India (@PTI_News) April 29, 2024
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು
Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ
Malpe: ಮನೆ ಮನೆಗಳಲ್ಲಿ ಕ್ಯಾರೋಲ್ ಗಾಯನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.