ಭೀಕರ ರಸ್ತೆ ಅಪಘಾತ: ಬಸ್-ಟ್ರಕ್ ಡಿಕ್ಕಿ; 8 ಸಾವು, 25 ಕ್ಕೂ ಹೆಚ್ಚು ಮಂದಿಗೆ ಗಾಯ
Team Udayavani, Sep 28, 2022, 5:38 PM IST
ಉತ್ತರ ಪ್ರದೇಶ: ಟ್ರಕ್ ಮತ್ತು ಖಾಸಗಿ ಬಸ್ ಡಿಕ್ಕಿ ಹೊಡೆದ ಪರಿಣಾಮ 8 ಮಂದಿ ಸಾವನ್ನಪ್ಪಿದ್ದು, 25ಕ್ಕೂ ಹೆಚ್ಚು ಮಂದಿ ಗಾಯಗೊಂಡ ಘಟನೆ ಲಖಿಂಪುರ ಖೇರಿನಲ್ಲಿ ಬುಧವಾರ ಸಂಭವಿಸಿದೆ.
ಬಸ್ ಧೌರೆಹ್ರಾದಿಂದ ಲಕ್ನೋಗೆ ತೆರಳುತ್ತಿದ್ದಾಗ ಇಸಾನಗರ ಪೊಲೀಸ್ ಠಾಣೆ ವ್ಯಾಪ್ತಿಯ ಎರಾ ಸೇತುವೆ ಮೇಲೆ ಟ್ರಕ್ ಮತ್ತು ಬಸ್ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ 8 ಮಂದಿ ಸಾವನ್ನಪ್ಪಿದ್ದು, ಹಲವರ ಸ್ಥಿತಿ ಗಂಭೀರವಾಗಿದೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಲಖಿಂಪುರ ಖೇರಿ ಎಡಿಎಂ ಸಂಜಯ್ ಕುಮಾರ್ ಮಾಹಿತಿ ನೀಡಿದ್ದಾರೆ.
ಘಟನೆ ಕುರಿತು ಸಿಎಂ ಯೋಗಿ ಆದಿತ್ಯನಾಥ್ ಅವರು ಸಂತಾಪ ಸೂಚಿಸಿದ್ದಾರೆ ಮತ್ತು ತಕ್ಷಣವೇ ಸಂತ್ರಸ್ತರ ನೆರವಿಗೆ ಧಾವಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಇದನ್ನೂ ಓದಿ:ಅಂತಾರಾಷ್ಟ್ರೀಯ ಪ್ರವಾಸೋದ್ಯಮ ನಕ್ಷೆಯಲ್ಲಿ ಕರ್ನಾಟಕ ಶೀಘ್ರ ಸೇರ್ಪಡೆ: ಸಿಎಂ
ಪ್ರಧಾನಿ ನರೇಂದ್ರ ಮೋದಿ ಮೃತರ ಕುಟುಂಬಗಳಿಗೆ ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ ತಲಾ 2 ಲಕ್ಷ ರೂಪಾಯಿ ಪರಿಹಾರವನ್ನು ಘೋಷಿಸಿದ್ದು, ಗಾಯಾಳುಗಳಿಗೆ 50,000 ರೂಪಾಯಿ ನೀಡಲಾಗುವುದು ಎಂದು ತಿಳಿಸಿದ್ದಾರೆ.
Distressed by the accident in Lakhimpur Kheri, UP. Condolences to the bereaved families. May the injured recover quickly. Rs. 2 lakh from PMNRF would be given to the next of kin of each deceased. The injured would be given Rs. 50,000: PM @narendramodi
— PMO India (@PMOIndia) September 28, 2022
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Train ಜನಶತಾಬ್ದಿ ಎಕ್ಸ್‌ಪ್ರೆಸ್‌ನಲ್ಲಿ ಹಾವು ಪ್ರತ್ಯಕ್ಷ: ತನಿಖೆಗೆ ಆದೇಶ
Himachal Pradesh;ನಷ್ಟದಲ್ಲಿರುವ ಹೊಟೇಲ್ ಮುಚ್ಚಲು ಹೈಕೋರ್ಟ್ ಆದೇಶ
Waqf ಮಸೂದೆ ಕರಡು ವರದಿ ಸಿದ್ಧ: ಜೆಪಿಸಿ ಅಧ್ಯಕ್ಷ ಪಾಲ್ ಘೋಷಣೆ
Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!
Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.